ಮಡಿಕೇರಿ, ಜೂ. ೧೩ : ಹೋಂ ಸ್ಟೇಗಳಿಗೆ ಸಂಬAಧಿಸಿದAತೆ ಗೃಹ ಬಳಕೆ ಹಾಗೂ ವಾಣಿಜ್ಯ ಬಳಕೆಯ ವಿದ್ಯುತ್ ಶುಲ್ಕ ಸಂಬAಧ ಪ್ರವಾಸೋದ್ಯಮ ಸಚಿವರು ಹಾಗೂ ಉನ್ನತ ಮಟ್ಟದ ಅಧಿಕಾರಿಗಳ ಜೊತೆ ಹಾಗೂ ಆರು ಜಿಲ್ಲೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಸೇರಿ ವಿಸ್ತೃತವಾಗಿ ಚರ್ಚಿಸಲಾಗುವುದು ಎಂದು ಶಾಸಕ ಡಾ. ಮಂತರ್ ಗೌಡ ತಿಳಿಸಿದ್ದಾರೆ.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಹೋಂಸ್ಟೇಗಳಿಗೆ ಸಂಬAಧಿಸಿ ದಂತೆ ವಾಣಿಜ್ಯ ಬಳಕೆ ಹಾಗೂ ಗೃಹ ಬಳಕೆ ವಿದ್ಯುತ್ ಶುಲ್ಕ ಸಂಬAಧ ಒಂದೇ ರೀತಿಯ ಡೆಫಿನೇಶನ್ ಇರಬೇಕು. ಆ ನಿಟ್ಟಿನಲ್ಲಿ ಪ್ರವಾಸೋದ್ಯಮ ಸಚಿವರ ಜೊತೆ ಚರ್ಚಿಸಲಾಗುವುದು.
ಕೊಡಗು ಜಿಲ್ಲೆ ಪ್ರವಾಸೋದ್ಯಮ ಕ್ಷೇತ್ರದಲ್ಲಿ ಮತ್ತಷ್ಟು ಮೂಲ ಸೌಲಭ್ಯ ಗಳನ್ನು ಕಲ್ಪಿಸಬೇಕು. ಪ್ರವಾಸಿಗರಿಗೆ ಯಾವುದೇ ರೀತಿಯ ತೊಂದರೆ ಆಗದಂತೆ ಗಮನಹರಿಸಬೇಕು.
ಎಲ್ಲೆಂದರಲ್ಲಿ ಕಸ ಬಿಸಾಡ ಬಾರದು. ಪ್ಲಾಸ್ಟಿಕ್‌ನ್ನು ಕಡ್ಡಾಯವಾಗಿ ಬಳಸಬಾರದು. ಹಸಿಕಸ ಮತ್ತು ಒಣಕಸವನ್ನು ಬೇರ್ಪಡಿಸಿ ನೀಡಬೇಕು. ಸ್ವಚ್ಚತೆಗೆ ಹೆಚ್ಚಿನ ಒತ್ತು ನೀಡಬೇಕು ಎಂದು ಶಾಸಕರು ಸಲಹೆ ಮಾಡಿದರು.
ಈ ಸಂದರ್ಭ ಮಾತನಾಡಿದ ಹೋಂಸ್ಟೇ ಅಸೋಷಿಯೇಷನ್‌ನ ಪ್ರತಿನಿಧಿಗಳು ನೋಂದಾಯಿತ ಹೋಂಸ್ಟೇ ಅವರು ಮನೆಯಲ್ಲಿ ಪ್ರವಾಸಿಗರಿಗೆ
(ಮೊದಲ ಪುಟದಿಂದ) ವಾಸ್ತವ್ಯಕ್ಕೆ ಅವಕಾಶ ಮಾಡುತ್ತಾರೆ. ಅದನ್ನು ಬಿಟ್ಟು ಹೊಟೇಲ್ ಮಾದರಿಯಲ್ಲಿ ವಾಣಿಜ್ಯ ಚಟುವಟಿಕೆ ನಡೆಸುತ್ತಿಲ್ಲ. ಹಾಗಾಗಿ ಗೃಹ ಬಳಕೆಯಂತೆ ವಿದ್ಯುತ್‌ನ್ನು ನೀಡಬೇಕು ಎಂದು ಕೋರಿದರು.
ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಮಂಡಳಿ ಇಂಜಿನಿಯರ್‌ಗಳು ತಪಾಸಣೆ ಕೈಗೊಂಡು ವಾಣಿಜ್ಯ ಬಳಕೆಯಂತೆ ವಿದ್ಯುತ್ ದರ ನಿಗದಿ ಮಾಡುತ್ತಾರೆ. ಇದರಿಂದ ಹೋಂಸ್ಟೇ ನಡೆಸುವವರಿಗೆ ತುಂಬಾ ತೊಂದರೆಯಾಗಿದೆ ಎಂದು ಹೋಂಸ್ಟೇ ಪ್ರತಿನಿಧಿಗಳು ಶಾಸಕರ ಗಮನಕ್ಕೆ ತಂದರು.
ಈ ಕುರಿತು ಪ್ರತಿಕ್ರಿಯಿಸಿದ ಸೆಸ್ಕ್ ಕಾರ್ಯಪಾಲಕ ಇಂಜಿನಿಯರ್ ಅನಿತಾ ಬಾಯಿ, ಪ್ರವಾಸೋದ್ಯಮ ನೀತಿಯಡಿ ಹೋಂಸ್ಟೇ ಸಂಬAಧಿಸಿದAತೆ ಸರ್ಕಾರದ ನಿರ್ದೇಶನದಂತೆ ಕ್ರಮವಹಿಸಲಾಗಿದೆ.
ಈ ಸಂದರ್ಭ ಮಾತನಾಡಿದ ಕರ್ನಾಟಕ ವಿದ್ಯುಚ್ಛಕ್ತಿ ಮಂಡಳಿಯ ಇಂಜಿನಿಯರ್ ವಿದ್ಯುತ್ ನಿಗಮದಿಂದ ವಾಣಿಜ್ಯ ಮತ್ತು ಗೃಹ ಬಳಕೆ ಸಂಬAಧಿಸಿದAತೆ ಸರ್ಕಾರದಿಂದ ಹೊರಡಿಸಲಾಗಿರುವ ಆದೇಶಗಳನ್ನು ಪಾಲಿಸಲಾಗುತ್ತಿದೆ ಎಂದರು.
ಕೊಡಗು ಜಿಲ್ಲೆಯಲ್ಲಿ ಕೃಷಿ ಜೊತೆಗೆ ಪ್ರವಾಸೋದ್ಯಮಕ್ಕೆ ಒತ್ತು ನೀಡಬೇಕಿದೆ. ಇದರಿಂದ ಉದ್ಯೋಗ ಸೃಷ್ಟಿ ಮಾಡಲು ಸಹಕಾರಿಯಾಗಲಿದೆ ಎಂದು ಹೋಂಸ್ಟೇ ಅಸೋಷಿಯೇಷನ್ ಮಾಜಿ ಅಧ್ಯಕ್ಷ ಕರುಂಬಯ್ಯ ಹೇಳಿದರು.
ಜಿಲ್ಲಾಧಿಕಾರಿ ವೆಂಕಟ್ ರಾಜಾ ಮಾತನಾಡಿ ಕೊಡಗು ಜಿಲ್ಲೆಯ ಪ್ರವಾಸೋದ್ಯಮ ಸಂಬAಧಿಸಿದAತೆ ವೆಬ್‌ಸೈಟ್‌ನಲ್ಲಿ ಪವಿತ್ರ ದೇವಾಲಯಗಳು ಹಾಗೂ ಪ್ರವಾಸೋದ್ಯಮಕ್ಕೆ ಸಂಬAಧಿಸಿದAತೆ ಮಾಹಿತಿ ಒದಗಿಸಲು ಮತ್ತಷ್ಟು ಕ್ರಮವಹಿಸಬೇಕಿದೆ.
ಜಿಲ್ಲೆಯಲ್ಲಿ ಸರ್ಕಾರಿ ಸಂಸ್ಥೆಗಳು ಸೇರಿದಂತೆ ಎಲ್ಲೆಡೆ ನಾಮಫಲಕಗಳಲ್ಲಿ ಶೇ.೬೦ ರಷ್ಟು ಕನ್ನಡ ಭಾಷೆಯನ್ನು ಕಡ್ಡಾಯವಾಗಿ ಬರೆಸಬೇಕು. ಇದನ್ನು ಚಾಚೂ ತಪ್ಪದೇ ಪಾಲಿಸಬೇಕು. ಇದುವರೆಗೆ ಈ ರೀತಿ ನಾಮಫಲಕ ಬರೆಸದಿದ್ದಲ್ಲಿ ಶೀಘ್ರ ನಾಮಫಲಕಗಳನ್ನು ಬದಲಿಸುವಂತೆ ಕೋರಿದರು.
ಜಿಲ್ಲೆಯ ವಿವಿಧ ಗ್ರಾಮ ಪಂಚಾಯಿತಿಗಳಲ್ಲಿ ಹೋಂಸ್ಟೇ ಸಂಬAಧಿಸಿದAತೆ ಬೇರೆ ಬೇರೆ ರೀತಿಯ ಶುಲ್ಕ ಪಡೆಯಲಾಗುತ್ತಿದ್ದು, ಒಂದೇ ರೀತಿಯ ಶುಲ್ಕ ಪಾವತಿಸಿಕೊಳ್ಳಬೇಕು ಎಂದು ಮೋಂತಿ ಗಣೇಶ್ ಮನವಿ ಮಾಡಿದರು.
ಈ ಕುರಿತು ಪ್ರಕ್ರಿಯಿಸಿದ ಜಿ.ಪಂ. ಸಿಇಓ ವರ್ಣಿತ್ ನೇಗಿ ಗ್ರಾಮ ಪಂಚಾಯಿತಿ ಆಡಳಿತದಲ್ಲಿ ತಮ್ಮದೇ ಆದ ಸದಸ್ಯರನ್ನು ಹೊಂದಿರುವ ಸ್ಥಳೀಯ ಸಂಸ್ಥೆಯಾಗಿದ್ದು, ಸ್ಥಳೀಯ ಸಂಪನ್ಮೂಲವನ್ನು ಗಮನಿಸಿಕೊಂಡು ತೆರಿಗೆ ಬಗ್ಗೆ ನಿರ್ಣಯ ಕೈಗೊಳ್ಳಲಿದ್ದಾರೆ. ಆ ನಿಟ್ಟಿನಲ್ಲಿ ಜಿ.ಪಂ. ಮಧ್ಯ ಪ್ರವೇಶ ಮಾಡುವುದಿಲ್ಲ ಎಂದರು.
ಪ್ರವಾಸೋದ್ಯಮ ಇಲಾಖೆಯ ಉಪ ನಿರ್ದೇಶಕಿ ಅನಿತಾ ಭಾಸ್ಕರ್ ಜಿಲ್ಲೆಯ ಪ್ರವಾಸೋದ್ಯಮ ಹಾಗೂ ಹೋಂಸ್ಟೇ ಸಂಬAಧಿಸಿದAತೆ ಮಾಹಿತಿ ನೀಡಲಾಗಿದೆ. ಒಂದು ಮನೆಯಲ್ಲಿ ೬ ರಿಂದ ೮ ಕೊಠಡಿಯಲ್ಲಿ ಹೋಂಸ್ಟೇ ನಡೆಸಬಹುದಾಗಿದೆ ಎಂದರು.
ಹೋಂಸ್ಟೇ ನಡೆಸಲು ಪ್ರವಾಸೋದ್ಯಮ ಇಲಾಖೆಯಲ್ಲಿ ಹೆಸರು ನೋಂದಾಯಿಸಿಕೊAಡು ಸ್ಥಳೀಯ ಸಂಸ್ಥೆಗಳಲ್ಲಿ ಅನುಮತಿ ಪಡೆಯಬೇಕಿದೆ. ಪೊಲೀಸ್ ಇಲಾಖೆಯಿಂದ ಎನ್‌ಒಸಿ ಪಡೆಯಬೇಕಿದೆ ಎಂದು ತಿಳಿಸಿದರು.
ಪೊಲೀಸ್ ಅಧಿಕಾರಿ ಐ.ಪಿ. ಮೇದಪ್ಪ ಮಾತನಾಡಿ ಸಿಸಿಟಿವಿ ಇರಬೇಕು. ವಾಹನ ನಿಲುಗಡೆಗೆ ಜಾಗ ಇರಬೇಕು. ಹತ್ತಿರದವರಿಂದ ಯಾವುದೇ ರೀತಿಯ ಆಕ್ಷೇಪಣೆ ಇಲ್ಲದಿರುವ ಬಗ್ಗೆ ಮಾಹಿತಿ ಪಡೆಯಲಾಗುತ್ತದೆ. ಹೋಂಸ್ಟೇ ನಡೆಸುವ ಮಾಲೀಕರ ವಿರುದ್ಧ ಪೊಲೀಸ್ ಇಲಾಖೆಯಲ್ಲಿ ಯಾವುದೇ ದೂರು ಇರಬಾರದು. ಅಂತವರಿಗೆ ೧೦ ದಿನದೊಳಗೆ ಎನ್‌ಒಸಿ ನೀಡಲಾಗುತ್ತದೆ ಎಂದು ತಿಳಿಸಿದರು.
ಹೋಂಸ್ಟೇ ಅಸೋಷಿಯೇಷನ್‌ನ ಅಮರನಾಥ್ ಬಿ., ನಳಿನಿ ಅಚ್ಚಯ್ಯ, ಉಷಾ ಗಣಪತಿ, ಸಿ.ಸಿ. ತಿಮ್ಮಯ್ಯ, ಎನ್.ಕೆ. ಚಂಗಪ್ಪ, ಮಿಕ್ಕಿ ಕಾಳಪ್ಪ, ಕೆ.ಎಂ. ಕರುಂಬಯ್ಯ, ಎಂ.ಮೀನಾ ಕಾರ್ಯಪ್ಪ, ಪಿ.ಕೆ.ಹೇಮಾ ಮಾದಪ್ಪ, ಬಿ.ಎ.ಅಚ್ಚಯ್ಯ, ಸತೀಶ್ ರೈ, ಬಿ.ಪಿ.ಗಣಪತಿ, ಎ.ಎಸ್.ಮಲ್ಲೇಶ್ ಹಲವು ವಿಷಯ ಪ್ರಸ್ತಾಪಿಸಿದರು.