ಮಡಿಕೇರಿ, ಜೂ. ೧೫: ಸಿದ್ದಾಪುರದ ಸುಮಾರು ೨೪೦೦ ಎಕರೆ ಖಾಸಗಿ ಕಾಫಿ ತೋಟ ಸೇರಿದಂತೆ ಕೊಡಗು ಜಿಲ್ಲೆಯಾದ್ಯಂತ ನಡೆಯುತ್ತಿರುವ ಬೃಹತ್ ಭೂಪರಿವರ್ತನೆಯನ್ನು ವಿರೋಧಿಸಿ ತಾ.೧೭ರಂದು ಸಿದ್ದಾಪುರದಲ್ಲಿ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ವತಿಯಿಂದ ಶಾಂತಿಯುತ ಮಾನವ ಸರಪಳಿ ಜನಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಸಿಎನ್‌ಸಿ ಅಧ್ಯಕ್ಷ ಎನ್.ಯು.ನಾಚಪ್ಪ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಬೆಳಿಗ್ಗೆ ೧೦.೩೦ ಗಂಟೆಗೆ ಸಿದ್ದಾಪುರ ಪಟ್ಟಣದಲ್ಲಿ ಮಾನವ ಸರಪಳಿ ನಿರ್ಮಿಸಿ ಬೃಹತ್ ಭೂಪರಿವರ್ತನೆ ಪ್ರಕ್ರಿಯೆಗಳನ್ನು ಸ್ಥಗಿತಗೊಳಿಸುವಂತೆ ಒತ್ತಾಯಿಸಲಾಗುವುದು ಎಂದು ಹೇಳಿದ್ದಾರೆ.