ಬೆಂಗಳೂರು, ಜೂ. ೧೫: ಚಿತ್ರದುರ್ಗದ ನಿವಾಸಿ ೩೩ ವರ್ಷದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧಿತರಾಗಿರುವ ನಟ ದರ್ಶನ್ ಮತ್ತು ಇತರ ಆರೋಪಿಗಳನ್ನು ಮ್ಯಾಜಿಸ್ಟೆçÃಟ್ ಕೋರ್ಟ್ ಹೆಚ್ಚಿನ ವಿಚಾರಣೆಗಾಗಿ ಶನಿವಾರ ಮತ್ತೆ ಐದು ದಿನ ಪೊಲೀಸರ ವಶಕ್ಕೆ ನೀಡಿ ಆದೇಶಿಸಿದೆ.
ದರ್ಶನ್ ಹಾಗೂ ಇತರೆ ಆರೋಪಿಗಳ ಆರು ದಿನಗಳ ಪೊಲೀಸ್ ಕಸ್ಟಡಿ ಅವಧಿ ಭಾನುವಾರಕ್ಕೆ ಕೊನೆಗೊಳ್ಳಲಿದೆ. ಆದರೆ ನಾಳೆ ಭಾನುವಾರವಾಗಿರುವುದರಿಂದ ನ್ಯಾಯಾಲಯಕ್ಕೆ ರಜೆ ಇರುತ್ತದೆ. ಹೀಗಾಗಿ, ಕೊಲೆ ಪ್ರಕರಣದ ಎಲ್ಲಾ ಆರೋಪಿಗಳನ್ನು ಪೊಲೀಸರು ಇಂದೇ ಮ್ಯಾಜಿಸ್ಟೆçÃಟ್ ನ್ಯಾಯಾಲಯದ ಮುಂದೆ ಹಾಜರುಪಡಿಸಿ, ಹೆಚ್ಚಿನ ವಿಚಾರಣೆಗಾಗಿ ಮತ್ತೆ ೯ ದಿನ ತಮ್ಮ ವಶಕ್ಕೆ ನೀಡುವಂತೆ ಮನವಿ ಮಾಡಿದರು. ಆರೋಪಿಗಳ ವಿಚಾರಣೆ ನಡೆಸಿದ ಕೋರ್ಟ್, ಪೊಲೀಸ್ ಕಸ್ಟಡಿಯ ಅವಧಿಯನ್ನು ಐದು ದಿನಗಳ ಕಾಲ ವಿಸ್ತರಿಸಿ ಆದೇಶಿಸಿದೆ. ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬAಧಿಸಿದAತೆ ನಟ ದರ್ಶನ್ ತೂಗುದೀಪ, ನಟಿ ಪವಿತ್ರಾ ಗೌಡ ಸೇರಿದಂತೆ ೧೧ ಆರೋಪಿಗಳನ್ನು ಮಂಗಳವಾರ ಕಾಮಾಕ್ಷಿಪಾಳ್ಯ ಪೊಲೀಸರು ಬಂಧಿಸಿದ್ದರು. ಪ್ರಕರಣದಲ್ಲಿ ಒಟ್ಟು ೧೯ ಆರೋಪಿಗಳಿದ್ದು, ಇತರೆ ಕೆಲವು ಆರೋಪಿಗಳನ್ನು ನಂತರದ ದಿನಗಳಲ್ಲಿ ಬಂಧಿಸಲಾಗಿದ್ದು, ಕೆಲವು ಆರೋಪಿಗಳು ತಾವೇ ಪೊಲೀಸರ ಮುಂದೆ ಶರಣಾಗಿದ್ದರು.
ಬಂಧಿತ ಪವಿತ್ರಾ ಗೌಡ ಅವರಿಗೆ ಸಾಮಾಜಿಕ ಮಾಧ್ಯಮದಲ್ಲಿ ಅಶ್ಲೀಲ ಸಂದೇಶಗಳನ್ನು ಕಳುಹಿಸಿದ್ದರಿಂದ ಮತ್ತು ಆಕ್ಷೇಪಾರ್ಹ ಕಾಮೆಂಟ್‌ಗಳನ್ನು ಪೋಸ್ಟ್ ಮಾಡಿದ್ದರಿಂದಲೇ ಕೊಲೆ ನಡೆದಿದೆ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿರುವುದಾಗಿ ಪೊಲೀಸರು ತಿಳಿಸಿದ್ದಾರೆ.