ಮಡಿಕೇರಿ, ಜೂ. ೧೫: ದೇಶದಲ್ಲಿ ಈ ಬಾರಿ ಸುಧೀರ್ಘ ಅವಧಿಯಲ್ಲಿ ಚುನಾವಣೆ ನಡೆದ ಕಾರಣದಿಂದಾಗಿ ಕಳೆದ ಮೂರು ತಿಂಗಳಿನಿAದ ಕೆಲಸ ಕಾರ್ಯಗಳು ನಿಧಾನಗತಿಯಾಗಿತ್ತಲ್ಲದೆ ಆಡಳಿತ ಕುಸಿತವಾಗಿತ್ತು. ಇದೀಗ ಮತ್ತೆ ಆಡಳಿತ ಚುರುಕುಗೊಳ್ಳುತ್ತಿರು ವುದಾಗಿ ವೀರಾಜಪೇಟೆ ಶಾಸಕ ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಎ.ಎಸ್. ಪೊನ್ನಣ್ಣ ಅವರು ತಿಳಿಸಿದ್ದಾರೆ.
ಬೆಂಗಳೂರು ವಿಧಾನಸೌಧದಲ್ಲಿರುವ ತಮ್ಮ ಕಚೇರಿಯಲ್ಲಿ ಮಾಧ್ಯಮ ಗೋಷ್ಠಿ ನಡೆಸಿ ಮಾತನಾಡಿದ ಅವರು, ಮುಖ್ಯಮಂತ್ರಿ ಗಳಾದ ಸಿದ್ದರಾಮಯ್ಯ ಅವರು ಜನರ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಜನಸ್ಪಂದನಾ ಕಾರ್ಯಕ್ರಮಗಳನ್ನು ಮತ್ತೆ ಆರಂಭಿಸಲು ಸೂಚನೆ ನೀಡಿದ್ದಾರೆ. ಈ ನಿಟ್ಟಿನಲ್ಲಿ ಜೂನ್ ೧೯ರಂದು ವೀರಾಜಪೇಟೆ ಪುರಸಭಾ ವ್ಯಾಪಿಗೆ ಸಂಬAಧಿಸಿದAತೆ ಜನಸ್ಪಂದನಾ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಮುಂದಿನ ದಿನಗಳಲ್ಲಿ ಜಿಲ್ಲೆಯ ಇತರೆಡೆಗಳಲ್ಲಿ, ಗ್ರಾಮೀಣ ಭಾಗದಲ್ಲಿ ಈ ಕಾರ್ಯಕ್ರಮ ಜರುಗಲಿದ್ದು, ಜಿಲ್ಲಾಧಿಕಾರಿಗಳು ಸೇರಿದಂತೆ ಎಲ್ಲಾ ಅಧಿಕಾರಿಗಳ ಉಪಸ್ಥಿತಿಯಲ್ಲಿ ಜನರ ಸಮಸ್ಯೆ ಬಗೆಹರಿಸುವ ಪ್ರಯತ್ನ ಮಾಡಲಾಗುವುದು, ಜನರು ತಮ್ಮ ನೈಜ ಸಮಸ್ಯೆಗಳನ್ನು ಮುಂದಿಟ್ಟು ಪರಿಹಾರ ಕಂಡುಕೊಳ್ಳಬಹುದಾಗಿದೆ ಎಂದು ಅವರು ತಿಳಿಸಿದರು.
ಜಿಲ್ಲೆಯಲ್ಲಿ ಈಗಾಗಲೇ ಮುಂಗಾರು ಆರಂಭಗೊAಡಿದ್ದು, ಉತ್ತಮ ರೀತಿ ಕಂಡು ಬರುತ್ತಿದೆ. ಇದರೊಂದಿಗೆ ಮುಂಗಾರಿನ ಸಂದರ್ಭದಲ್ಲಿ ಎದುರಾಗುವ ಸಮಸ್ಯೆಗಳನ್ನು, ಹಾನಿಗಳನ್ನು ಎದುರಿಸಲು ಸೂಕ್ತ ಮುಂಜಾಗ್ರತೆ ವಹಿಸಲು ಕ್ರಮವಹಿಸಲಾಗುತ್ತಿದೆ. ಜಿಲ್ಲಾಡಳಿತಕ್ಕೂ ಈ ಬಗ್ಗೆ ಸೂಚನೆ ನೀಡಲಾಗಿದ್ದು, ಜಿಲ್ಲಾಡಳಿತವೂ ಸ್ಪಂದಿಸುತ್ತಿದೆ. ಜನರು ಯಾವುದೇ ಆತಂಕ ಪಡಬೇಕಾಗಿಲ್ಲ. ಸರಕಾರ, ಜಿಲ್ಲಾಡಳಿತ ಇದಕ್ಕೆ ಕಟಿಬದ್ಧವಾಗಿರುತ್ತದೆ ಎಂದು ಪೊನ್ನಣ್ಣ ಹೇಳಿದರು.