ಮಡಿಕೇರಿ, ಜೂ. ೧೫: ದಕ್ಷಿಣ ಭಾರತದ ಗಂಗೆ, ರೈತರ ಜೀವನಾಡಿ ಎಂದು ಕರೆಸಿಕೊಳ್ಳುವ ಕೊಡಗಿನ ಆರಾಧ್ಯದೇವತೆ ಕಾವೇರಿ ಮಾತೆಗೆ ನಮಿಸುವ ಮೂಲಕ ಕೊಡಗು-ಮೈಸೂರು ಲೋಕಸಭಾ ಕ್ಷೇತ್ರದ ನೂತನ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ತಮ್ಮ ಕಾರ್ಯಚಟುವಟಿಕೆಗೆ ಅಧಿಕೃತ ಚಾಲನೆ ನೀಡಿ ರಾಜ ಗೌರವದಿಂದ ಜನಸೇವಕನಾಗಿ ಕ್ಷೇತ್ರದ ಕೆಲಸದಲ್ಲಿ ತೊಡಗಿಸಿಕೊಳ್ಳಲು ಮುನ್ನುಡಿ ಇಟ್ಟಿದ್ದಾರೆ.
ತಾ. ೪ ರಂದು ಚುನಾವಣಾ ಫಲಿತಾಂಶ ಪ್ರಕಟಗೊಂಡು ಜಯಸಾಧಿಸಿದ ನಂತರ ಮೊದಲ ಬಾರಿಗೆ ಕೊಡಗು ಜಿಲ್ಲೆಗೆ ಭೇಟಿ ನೀಡಿದ ಸಂಸದರನ್ನು ಬಿಜೆಪಿ ಕಾರ್ಯಕರ್ತರು ಭವ್ಯ ಸ್ವಾಗತ ಕೋರಿದರು. ಕೊಡಗು ಗಡಿ ಕುಶಾಲನಗರಕ್ಕೆ ಯದುವೀರ್ ಕಾಲಿಡುತ್ತಿದಂತೆ ಪೂರ್ಣಕುಂಭ ಸ್ವಾಗತದೊಂದಿಗೆ ಅವರನ್ನು ಬರಮಾಡಿಕೊಳ್ಳಲಾಯಿತು.
ನಂತರ ನೇರವಾಗಿ ಭಾಗಮಂಡಲಕ್ಕೆ ಬಂದು ಭಗಂಡೇಶ್ವರ ಕ್ಷೇತ್ರದಲ್ಲಿ ಪೂಜೆ ಸಲ್ಲಿಸಿ ದೇವರ ಆಶೀರ್ವಾದ ಪಡೆದು ಜೀವನದಿ ಕಾವೇರಿಯ ಉಗಮಸ್ಥಳ ತಲಕಾವೇರಿಗೆ ತೆರಳಿದರು. ಚುನಾವಣಾ ಪ್ರಚಾರ ಕಾರ್ಯವನ್ನು ಕಾವೇರಿ ಸನ್ನಿಧಿಯಿಂದಲೇ ಆರಂಭಿಸಿದ್ದ ಯದುವೀರ್ ಚುನಾವಣೆಯಲ್ಲಿ ಗೆಲುವು ಸಾಧಿಸಿ ತಮ್ಮ ಸಂಸದ ಕಾರ್ಯಚಟುವಟಿಕೆಯನ್ನು ಇಲ್ಲಿಂದಲೇ ಆರಂಭಿಸಿದ್ದು ವಿಶೇಷವಾಗಿತ್ತು. ತಲಕಾವೇರಿಯ ಮಹಾಗಣಪತಿ, ಅಗಸ್ತೆö್ಯÃಶ್ವರನಿಗೆ ಪೂಜೆ ಸಲ್ಲಿಸಿದ ಬಳಿಕ ಕುಂಕುಮಾರ್ಚನೆಯನ್ನು ನೆರವೇರಿಸಿ ಬ್ರಹ್ಮಕುಂಡಿಕೆಗೆ ವಿಶೇಷ ಪೂಜೆಯನ್ನು ಸಲ್ಲಿಸಿ ಕಾವೇರಿ ತೀರ್ಥವನ್ನು ಪ್ರೋಕ್ಷಿಸಿಕೊಂಡು ಮುಂದಿನ ಕೆಲಸಗಳು ನಿರ್ವಿಘ್ನವಾಗಿ ಸಾಗಲಿ ಎಂದು ಪ್ರಾರ್ಥಿಸಿ ಮುನ್ನುಡಿ ಇಟ್ಟರು.
ಈ ಸಂದರ್ಭ ಉತ್ತಮ ಮಳೆಯಾಗಲಿ, ಜಿಲ್ಲೆ ಅಭಿವೃದ್ಧಿ ಪಥದತ್ತ ಸಾಗಲಿ, ಪ್ರಾಕೃತಿಕ ವಿಕೋಪ ಸಂಭವಿಸದಿರಲಿ ಎಂದು ಕಾವೇರಿಗೆ ಪ್ರಾರ್ಥನೆ ಸಲ್ಲಿಸಿದರು.
ಜಿಲ್ಲಾ ಬಿಜೆಪಿ ಪ್ರಮುಖರೊಂದಿಗೆ ಕ್ಷೇತ್ರ ದರ್ಶನ ಮಾಡಿದ ಯದುವೀರ್ ಅವರು ಉತ್ಸಾಹದಿಂದ ಮೊದಲ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ತಲಕಾವೇರಿ ಸನ್ನಿಧಿಯಲ್ಲಿ ತಕ್ಕಮುಖ್ಯಸ್ಥ ಕೋಡಿ ಮೋಟಯ್ಯ ತಲಕಾವೇರಿ ಕ್ಷೇತ್ರದ ಅಭಿವೃದ್ಧಿ ಸೇರಿದಂತೆ ಅಪೂರ್ಣ ೩ಆರನೇ ಪುಟಕ್ಕೆ
(ಮೊದಲ ಪುಟದಿಂದ) ತಡೆಗೋಡೆ ಕಾಮಗಾರಿ ಪೂರ್ಣಗೊಳಿಸಬೇಕು. ಬರೆಗೆ ಅಡ್ಡಲಾಗಿ ನೂತನ ವಾಗಿ ತಡೆಗೋಡೆ ನಿರ್ಮಾಣಕ್ಕೆ ಕ್ರಮಕೈಗೊಳ್ಳುವ ನಿಟ್ಟಿನಲ್ಲಿ ಸಂಸದರಿಗೆ ಮೊದಲ ಮನವಿ ಸಲ್ಲಿಸಿದರು. ಈ ಸಂದರ್ಭ ಕಾವೇರಿ ಕ್ಷೇತ್ರದಲ್ಲಿ ತಾಯಿಯ ಆಶೀರ್ವಾದದೊಂದಿಗೆ ಮನವಿ ಸ್ವೀಕರಿಸಿದ್ದು ಖುಷಿ ತರಿಸಿದೆ ಎಂದು ಯದುವೀರ್ ಹೇಳಿಕೊಂಡರು.
ಸರಣಿ ಕಾರ್ಯಕ್ರಮಗಳು
ಗೆಲುವು ಸಾಧಿಸಿದ ನಂತರ ಕೊಡಗು ಜಿಲ್ಲೆಗೆ ಮೊದಲ ಬಾರಿ ಆಗಮಿಸಿದ ಯದುವೀರ್ ಅವರು ಸರಣಿ ಸಭೆಗಳಲ್ಲಿ ಭಾಗವಹಿಸಿ ಮತದಾರರು ಹಾಗೂ ಕಾರ್ಯಕರ್ತರಿಗೆ ಕೃತಜ್ಞತೆ ಸಲ್ಲಿಸಿದರು.
ಕುಶಾಲನಗರದ ಬಳಿಕ ಭಾಗಮಂಡಲದಲ್ಲಿ ಕಾರ್ಯಕರ್ತರನ್ನು ಭೇಟಿಯಾದರು. ತಲಕಾವೇರಿಯಲ್ಲಿ ಪೂಜೆ ನೆರವೇರಿಸಿದ ನಂತರ ನಾಪೋಕ್ಲಿನಲ್ಲಿ ಕಾರ್ಯಕರ್ತರ ಸಭೆಯಲ್ಲಿ ಪಾಲ್ಗೊಂಡು ಶ್ರೀ ಪಾಡಿ ಇಗ್ಗುತ್ತಪ್ಪ ಸನ್ನಿಧಿಯಲ್ಲಿ ಪೂಜೆ ನೆರವೇರಿಸಿದರು. ಮಧ್ಯಾಹ್ನ ಪಾರಾಣೆ, ಮೂರ್ನಾಡು, ನೆಲ್ಲಿಹುದಿಕೇರಿ ಯಲ್ಲಿ ಸಭೆ ನಡೆಸಿ ನಿರ್ಗಮಿಸಿದರು. ಈ ಮುನ್ನ ಸೋಮವಾರಪೇಟೆ ಭಾಗದಲ್ಲಿ ಸಭೆಗಳು ನಿಗದಿಯಾಗಿದ್ದವು. ಅನಿವಾರ್ಯ ಕಾರಣದಿಂದ ಅವುಗಳನ್ನು ಮುಂದೂಡಲಾಗಿದ್ದು, ಬೇರೆ ದಿನ ಉತ್ತರ ಕೊಡಗಿಗೆ ಭೇಟಿ ನೀಡಲಿದ್ದಾರೆ.
‘ಕೊಡಗಿಗಾಗಿ ಸಮಯ ಮೀಸಲಿಡುವೆ’
ಅಭಿವೃದ್ಧಿ, ಜನರ ನೋವು-ನಲಿವುಗಳಿಗೆ ಸ್ಪಂದಿಸುವ ನಿಟ್ಟಿನಲ್ಲಿ ಕೊಡಗಿಗಾಗಿ ಪ್ರತ್ಯೇಕ ಸಮಯ ಮೀಸಲಿಡುವ ಭರವಸೆಯನ್ನು ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ನೀಡಿದರು.
ತಲಕಾವೇರಿಯಲ್ಲಿ ಪೂಜೆ ನೆರವೇರಿಸಿದ ಬಳಿಕ ‘ಶಕ್ತಿ’ಯೊಂದಿಗೆ ಮಾತನಾಡಿದ ಅವರು, ಪ್ರಚಾರ ಆರಂಭಿಸಿದ ಕಾವೇರಿ ಮಾತೆಯ ಕ್ಷೇತ್ರದಿಂದಲೇ ಗೆಲುವು ಸಾಧಿಸಿ ಸಂಸದನಾಗಿ ಕಾರ್ಯಚಟುವಟಿಕೆ ಆರಂಭಿಸಿರುವುದು ಸಂತೃಪ್ತಿ ತಂದಿದೆ. ಕಾವೇರಮ್ಮ ಹಾಗೂ ಜನತೆಯ ಆಶೀರ್ವಾದಿಂದ ಈ ಗೆಲುವು ಸಾಧ್ಯವಾಗಿದ್ದು, ಕೊಡಗಿನ ಪರ ಮೈಸೂರು ರಾಜವಂಶಕ್ಕೆ ವಿಶೇಷ ಕಾಳಜಿ ಹಾಗೂ ಗೌರವವಿದೆ. ಮೈಸೂರು ರಾಜಮನೆತನ ಕೊಡಗಿಗೆ ಸದಾ ಚಿರಋಣಿ ಯಾಗಿರುತ್ತದೆ ಎಂದ ಅವರು, ಸಮಸ್ತ ಕೊಡಗಿನ ಅಭ್ಯುದಯಕ್ಕೆ ತಾನು ಬದ್ಧನಾಗಿದ್ದೇನೆ. ಕೊಡಗಿಗಾಗಿ ಪ್ರತ್ಯೇಕ ಸಮಯವನ್ನು ನಿಗದಿಪಡಿಸಿ ಕಾರ್ಯಾಚರಿ ಸುತ್ತೇನೆ. ಮುಂದಿನ ದಿನಗಳಲ್ಲಿ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನೆ ಸಭೆ ನಡೆಸಿ ನಡೆಯಬೇಕಾದ ಕೆಲಸಗಳಿಗೆ ವೇಗ ನೀಡಲು ಕಾರ್ಯೋನ್ಮುಕಗೊಳ್ಳುತ್ತೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಸಾಂಸ್ಕೃತಿಕ ಹಾಗೂ ಭೌಗೋಳಿಕವಾಗಿ ವಿಶಿಷ್ಟತನ ಹೊಂದಿರುವ ಕೊಡಗಿನ ಪರಿಸರ ಉಳಿವಿನೊಂದಿಗೆ ಅಭಿವೃದ್ಧಿ ಕಾರ್ಯ ನಡೆಸಬೇಕೆಂಬ ಇಂಗಿತ ತನ್ನದಾಗಿದೆ. ಪಕ್ಷದ ನಾಯಕರು, ಕಾರ್ಯಕರ್ತರು ಕೂಡ ಕೆಲವೊಂದು ಸಮಸ್ಯೆಗಳ ಬಗ್ಗೆ ಗಮನ ಸೆಳೆದಿದ್ದಾರೆ. ಹಿರಿಯರ ಸಲಹೆಯೊಂದಿಗೆ ಕೊಡಗಿನ ಪರ ಧ್ವನಿಯಾಗಿರುವೆ. ರಾಜ ಎಂಬ ಕಾರಣಕ್ಕೆ ತನ್ನೊಂದಿಗೆ ಮಾತನಾಡುವ ಹಿಂಜರಿಕೆ ಜನರಿಗೆ ಬೇಡ. ತಾನೀಗ ಜನಸೇವಕ ಎಲ್ಲಾ ರೀತಿಯ ಸಲಹೆಗಳನ್ನು ಹೃದಯಪೂರ್ವಕವಾಗಿ ಸ್ವಾಗತಿಸಿಕೊಂಡು ಆಗಬೇಕಾದ ಕೆಲಸಗಳತ್ತ ಚಿತ್ತಹರಿಸುತ್ತೇನೆ ಎಂದು ಮುಕ್ತವಾಗಿ ಹಂಚಿಕೊAಡರು.
ತಲಕಾವೇರಿಗೆ ಭೇಟಿ ನೀಡಿದ ಸಂದರ್ಭ ವಿಧಾನ ಪರಿಷತ್ ಸದಸ್ಯ ಮಂಡೇಪAಡ ಸುಜಾ ಕುಶಾಲಪ್ಪ, ಮಾಜಿ ಶಾಸಕ ಕೆ.ಜಿ. ಬೋಪಯ್ಯ, ವಿಧಾನ ಪರಿಷತ್ ಮಾಜಿ ಸದಸ್ಯ ಮಂಡೇಪAಡ ಸುನಿಲ್ ಸುಬ್ರಮಣಿ, ಜಿಲ್ಲಾ ಬಿಜೆಪಿ ಅಧ್ಯಕ್ಷ ನಾಪಂಡ ರವಿ ಕಾಳಪ್ಪ, ಪ್ರಧಾನ ಕಾರ್ಯದರ್ಶಿಗಳಾದ ಮಹೇಶ್ ಜೈನಿ, ನೆಲ್ಲೀರ ಚಲನ್, ಉಪಾಧ್ಯಕ್ಷರುಗಳಾದ ಮನುಮಂಜುನಾಥ್, ಕಾಂಗೀರ ಸತೀಶ್, ಜಿಲ್ಲಾ ವಕ್ತಾರ ಬಿ.ಕೆ. ಅರುಣ್ ಕುಮಾರ್, ಮಡಿಕೇರಿ ಗ್ರಾಮಾಂತರ ಮಂಡಲ ಅಧ್ಯಕ್ಷ ನಾಗೇಶ್ ಕುಂದಲ್ಪಾಡಿ, ಮಡಿಕೇರಿ ನಗರ ಮಂಡಲ ಪ್ರಧಾನ ಕಾರ್ಯದರ್ಶಿ ಕವನ್ ಕಾವೇರಪ್ಪ, ಜಿಲ್ಲಾ ಬಿಜೆಪಿ ಮಾಜಿ ಅಧ್ಯಕ್ಷ ಪಳೆಯಂಡ ರಾಬಿನ್ ದೇವಯ್ಯ, ಪ್ರಮುಖರಾದ ಅಪ್ಪಚೆಟ್ಟೋಳಂಡ ಮನು ಮುತ್ತಪ್ಪ, ರಮೇಶ್ ಹೊಳ್ಳ, ಸಜಿಲ್ ಪಿ ಕೃಷ್ಣ, ಪಟ್ಟಡ ರೀನಾ ಪ್ರಕಾಶ್, ಕಾಳಚಂಡ ಅಪ್ಪಣ್ಣ, ಶನೀಲ್, ಪ್ರಕಾಶ್ ಸೇರಿದಂತೆ ಇನ್ನಿತರರು ಹಾಜರಿದ್ದರು. ನಾಪೋಕ್ಲು, ಜೂ. ೧೫: ಇಲ್ಲಿಗೆ ಸಮೀಪದ ಕಕ್ಕಬೆ ಪಾಡಿ ಶ್ರೀ ಇಗುತ್ತಪ್ಪ ದೇವಾಲಯಕ್ಕೆ ಭೇಟಿ ನೀಡಿದ ನೂತನ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ನಾಡಿನಲ್ಲಿಡೆ ಉತ್ತಮ ಮಳೆ, ಬೆಳೆ ಹಾಗೂ ಸುಭಿಕ್ಷೆಗಾಗಿ ವಿಶೇಷ ಪೂಜೆ ಸಲ್ಲಿಸಿದರು.
ಈ ಸಂದರ್ಭ ದೇವತಕ್ಕರು, ತಕ್ಕ ಮುಖ್ಯಸ್ಥರಾದ ಪರದಂಡ ಸುಮನ್ ಕಾವೇರಪ್ಪ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಬಳಿಕ ದೇವಾಲಯದ ಮುಖ್ಯ ಅರ್ಚಕ ಕುಶ ಭಟ್ ಪೂಜಾ ವಿಧಿ ವಿಧಾನ ನೆರವೇರಿಸಿ ತೀರ್ಥ ಪ್ರಸಾದ ನೀಡಿ ದೇವರಲ್ಲಿ ಪ್ರಾರ್ಥಿಸಿ ಶುಭ ಹಾರೈಸಿದರು. ಇದಕ್ಕೂ ಮೊದಲು ಕಕ್ಕಬೆ ಪಟ್ಟಣದಲ್ಲಿ ಕುಂಜಿಲ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪ್ರಮುಖರು ಸಂಸದರನ್ನು ಆದರದಿಂದ ಸ್ವಾಗತಿಸಿ ದೇವಾಲಯಕ್ಕೆ ಕರೆತಂದರು.
ಕಾರ್ಯಕ್ರಮದಲ್ಲಿ ಎಂಎಲ್ಸಿ ಮಂಡೆಪAಡ ಸುಜಾ ಕುಶಾಲಪ್ಪ, ಮಾಜಿ ಶಾಸಕ, ಮಾಜಿ ವಿಧಾನಸಭಾ ಸ್ಪೀಕರ್ ಕೆ.ಜಿ. ಬೋಪಯ್ಯ, ಬಿಜೆಪಿ ಜಿಲ್ಲಾ ಅಧ್ಯಕ್ಷ ನಾಪಂಡ ರವಿ ಕಾಳಪ್ಪ, ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ರೀನಾ ಪ್ರಕಾಶ್, ರಾಜ್ಯ ರೈತ ಮೋರ್ಚಾ ಕಾರ್ಯಕಾರಿ ಸಮಿತಿಯ ಯಮುನಾ ಚಂಗಪ್ಪ, ನೆಲ್ಲಚಂಡ ಕಿರಣ್ ಕಾರ್ಯಪ್ಪ, ಚಂಡಿರ ಜಗದೀಶ್, ಉಮಾ ಪ್ರಭು, ಡಾಟಿ ಅಯ್ಯಪ್ಪ, ಪಂಚಾಯಿತಿ ಅಧ್ಯಕ್ಷ ಶಿಲ್ಪ ಲೋಕೇಶ್. ದೇವಾಲಯದ ಪಾರುಪತ್ತೆಗಾರ ಪರದಂಡ ಪ್ರಿನ್ಸ್ ತಮ್ಮಯ್ಯ, ಬಿಜೆಪಿ ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರು ಇದ್ದರು. -ದುಗ್ಗಳನಾಪೋಕ್ಲು, ಜೂ. ೧೫: ಕೊಡಗು-ಮೈಸೂರು ಲೋಕಸಭಾ ಕ್ಷೇತ್ರ ಅತ್ಯಂತ ವಿಸ್ತಾರವಾದ ಕ್ಷೇತ್ರವಾಗಿದ್ದು, ಜಿಲ್ಲೆಯ ನಾಯ ಕರು ಹಾಗೂ ಕಾರ್ಯಕರ್ತರು ಚುನಾವಣೆ ಗೆಲುವಿಗಾಗಿ ಪ್ರಾಮಾಣಿಕ ಶ್ರಮ ಹಾಕಿದ್ದಾರೆ ಎಂದು ಕ್ಷೇತ್ರದ ನೂತನ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದರು.
ಸಂಸದರಾದ ಬಳಿಕ ಮೊದಲ ಬಾರಿಗೆ ಜಿಲ್ಲೆಗೆ ಭೇಟಿ ನೀಡಿದ ಅವರು, ನಾಪೋಕ್ಲುವಿನ ಭಗವತಿ ಸನ್ನಿಧಿಯ ಸಮುದಾಯ ಭವನದಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿ, ಚುನಾವಣೆ ಸಂದರ್ಭ ಗೆಲುವಿಗಾಗಿ ಯಾವ ರೀತಿ ಶ್ರಮ ಹಾಕಿದ್ದೆವೋ ಅದೇ ರೀತಿ ಮುಂದಿನ ಐದು ವರ್ಷಗಳೂ ಕೆಲಸ ಮಾಡುವುದಾಗಿ ಹೇಳಿದರು.
ಇದಕ್ಕೂ ಮುನ್ನ ಭಗವತಿ ದೇವಾಲಯದಲ್ಲಿ ನಡೆದ ವಿಶೇಷ ಪೂಜೆಯಲ್ಲಿ ಯದುವೀರ್ ಪಾಲ್ಗೊಂಡರು. ದೇವಾಲಯದ ಅಭಿವೃದ್ಧಿ ಕಾರ್ಯಗಳಿಗೆ ಸಹಕರಿಸುವಂತೆ ದೇವಾಲಯ ಸಮಿತಿ ಅಧ್ಯಕ್ಷ ಕುಲ್ಲೇಟಿರ ಶಂಕರಿ ಮನವಿ ಮಾಡಿ ಹಿರಿಯರಾದ ಗುರುವಪ್ಪ ವಿಶೇಷ ಪ್ರಾರ್ಥನೆ ಸಲ್ಲಿಸಿ ದೇವಾಲಯದ ಮುಖ್ಯ ಅರ್ಚಕ ಹರೀಶ್ ಭಕ್ತ ಪೂಜಾ ವಿಧಿ ವಿಧಾನವನ್ನು ನೆರವೇರಿಸಿದರು.
ನಾಪೋಕ್ಲು ಬಿಜೆಪಿ ಶಕ್ತಿ ಕೇಂದ್ರದ ಪ್ರಮುಖ ಶಿವಚಾಳಿಯಂಡ ಅಂಬಿ ಕಾರ್ಯಪ್ಪ ಅವರ ಅಧ್ಯಕ್ಷತೆಯಲ್ಲಿ ಜರುಗಿದ ಕಾರ್ಯಕ್ರಮದಲ್ಲಿ ಬಿಜೆಪಿ ಜಿಲ್ಲಾ ಅಧ್ಯಕ್ಷ ನಾಪಂಡ ರವಿ ಕಾಳಪ್ಪ, ಎಂಎಲ್‌ಸಿ ಮಂಡೆಪAಡ ಸುಜಾ ಕುಶಾಲಪ್ಪ, ಮಾಜಿ ಶಾಸಕ ಕೆ.ಜಿ. ಬೋಪಯ್ಯ, ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯೆ ರೀನಾ ಪ್ರಕಾಶ್, ರಾಜ್ಯ ರೈತ ಮೋರ್ಚಾ ಕಾರ್ಯಕಾರಿ ಸಮಿತಿಯ ಯಮುನಾ ಚಂಗಪ್ಪ, ಹಾಪ್‌ಕಾಮ್ಸ್ ಅಧ್ಯಕ್ಷ ಬಿದ್ದಾಟಂಡ ರಮೇಶ್ ಚಂಗಪ್ಪ, ಮಡಿಕೇರಿ ಗ್ರಾಮಾಂತರ ಅಧ್ಯಕ್ಷ ನಾಗೇಶ್ ಕುಂದಲ್ಪಾಡಿ, ಮಾಜಿ ಜಿಲ್ಲಾ ಅಧ್ಯಕ್ಷ ರಾಬಿನ್ ದೇವಯ್ಯ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ನೆಲ್ಲೀರ ಚಲನ್, ರಾಜ್ಯ ಕಾರ್ಯಕಾರಿ ಸಮಿತಿಯ ಅಪ್ಪಚೆಟ್ಟೋಳಂಡ ಮನು ಮುತ್ತಪ್ಪ, ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಕೇಟೋಳಿರ ಹರೀಶ್ ಪೂವಯ್ಯ, ಮಡಿಕೇರಿ ತಾಲೂಕು ಓಬಿಸಿ ಘಟಕದ ಅಧ್ಯಕ್ಷ ಪ್ರತೀಪ ಸೇರಿದಂತೆ ಪಕ್ಷದ ಜಿಲ್ಲೆ, ತಾಲೂಕು, ಬೂತ್ ಮಟ್ಟದ ಪದಾಧಿಕಾ ರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.ಅರ್ಚಕ ಹರೀಶ್ ಭಕ್ತ ಪೂಜಾ ವಿಧಿ ವಿಧಾನವನ್ನು ನೆರವೇರಿಸಿದರು.
ನಾಪೋಕ್ಲು ಬಿಜೆಪಿ ಶಕ್ತಿ ಕೇಂದ್ರದ ಪ್ರಮುಖ ಶಿವಚಾಳಿಯಂಡ ಅಂಬಿ ಕಾರ್ಯಪ್ಪ ಅವರ ಅಧ್ಯಕ್ಷತೆಯಲ್ಲಿ ಜರುಗಿದ ಕಾರ್ಯಕ್ರಮದಲ್ಲಿ ಬಿಜೆಪಿ ಜಿಲ್ಲಾ ಅಧ್ಯಕ್ಷ ನಾಪಂಡ ರವಿ ಕಾಳಪ್ಪ, ಎಂಎಲ್‌ಸಿ ಮಂಡೆಪAಡ ಸುಜಾ ಕುಶಾಲಪ್ಪ, ಮಾಜಿ ಶಾಸಕ ಕೆ.ಜಿ. ಬೋಪಯ್ಯ, ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯೆ ರೀನಾ ಪ್ರಕಾಶ್, ರಾಜ್ಯ ರೈತ ಮೋರ್ಚಾ ಕಾರ್ಯಕಾರಿ ಸಮಿತಿಯ ಯಮುನಾ ಚಂಗಪ್ಪ, ಹಾಪ್‌ಕಾಮ್ಸ್ ಅಧ್ಯಕ್ಷ ಬಿದ್ದಾಟಂಡ ರಮೇಶ್ ಚಂಗಪ್ಪ, ಮಡಿಕೇರಿ ಗ್ರಾಮಾಂತರ ಅಧ್ಯಕ್ಷ ನಾಗೇಶ್ ಕುಂದಲ್ಪಾಡಿ, ಮಾಜಿ ಜಿಲ್ಲಾ ಅಧ್ಯಕ್ಷ ರಾಬಿನ್ ದೇವಯ್ಯ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ನೆಲ್ಲೀರ ಚಲನ್, ರಾಜ್ಯ ಕಾರ್ಯಕಾರಿ ಸಮಿತಿಯ ಅಪ್ಪಚೆಟ್ಟೋಳಂಡ ಮನು ಮುತ್ತಪ್ಪ, ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಕೇಟೋಳಿರ ಹರೀಶ್ ಪೂವಯ್ಯ, ಮಡಿಕೇರಿ ತಾಲೂಕು ಓಬಿಸಿ ಘಟಕದ ಅಧ್ಯಕ್ಷ ಪ್ರತೀಪ ಸೇರಿದಂತೆ ಪಕ್ಷದ ಜಿಲ್ಲೆ, ತಾಲೂಕು, ಬೂತ್ ಮಟ್ಟದ ಪದಾಧಿಕಾ ರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.ಚೆಯ್ಯಂಡಾಣೆ, ಜೂ. ೧೫: ಎಲ್ಲರ ಸಹಕಾರದಿಂದ ಉತ್ತಮ ಅಭಿವೃದ್ಧಿ ಕಾರ್ಯ ಮುಂದಿನ ದಿನಗಳಲ್ಲಿ ಜಿಲ್ಲೆಯಲ್ಲಿ ನಡೆಯಲಿದೆ ಎಂದು ಕೊಡಗು-ಮೈಸೂರು ಸಂಸದ ಯದುವೀರ್ ಒಡೆಯರ್ ವಿಶ್ವಾಸ ವ್ಯಕ್ತಪಡಿಸಿದರು.
ಚೆಯ್ಯಂಡಾಣೆಯಲ್ಲಿ ಬಿಜೆಪಿ ಕಾರ್ಯಕರ್ತರು ಆಯೋಜಿಸಿದ್ದ ಸ್ವಾಗತ ಹಾಗೂ ಅಭಿನಂದನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ಕೊಡಗು-ಮೈಸೂರು ಬಹಳ ವಿಸ್ತಾರವಾದ ಕ್ಷೇತ್ರ. ಈ ಕ್ಷೇತ್ರದಲ್ಲಿ ತನಗೆ ಅತ್ಯಧಿಕ ಮತಗಳನ್ನು ನೀಡಿ ಜಯಶೀಲರನ್ನಾಗಿ ಮಾಡಿದ್ದೀರಿ, ಇದಕ್ಕೆ ಎಲ್ಲಾ ಕಾರ್ಯಕರ್ತರು ಶ್ರಮ ಕಾರಣ ಎಂದರು.
ಯದುವೀರ್ ಅವರು ಚೆಯ್ಯಂಡಾಣೆ ಪಟ್ಟಣಕ್ಕೆ ಆಗಮಿಸಿದ ಸಂದರ್ಭ ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ, ಹೂಗುಚ್ಚ ನೀಡಿ ಅದ್ದೂರಿ ಸ್ವಾಗತ ಕೋರಿದರು. ಕಾರ್ಯಕ್ರಮದಲ್ಲಿ ಚೆಯ್ಯಂಡಾಣೆ ಶಕ್ತಿ ಕೇಂದ್ರದ ಅಧ್ಯಕ್ಷ ಪೊಕ್ಕುಳಂಡ್ರ ದನೋಜ್ ಕುಮಾರ್, ಚೆಯ್ಯಂಡಾಣೆಯ ಬಿಜೆಪಿಯ ೭ ಬೂತ್‌ಗಳ ಅಧ್ಯಕ್ಷರು ಯದುವೀರ್ ಮಾಲಾರ್ಪಣೆ ಮಾಡಿ ಅಭಿನಂದಿಸಿದರು.
ಈ ಸಂದರ್ಭ ನರಿಯಂದಡ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪೆಮ್ಮಂಡ ಕೌಶಿ ಕಾವೇರಮ್ಮ, ಮಾಜಿ ಶಾಸಕ ಕೆ.ಜಿ. ಬೋಪಯ್ಯ, ವಿಧಾನ ಪರಿಷತ್ ಸದಸ್ಯ ಎಂ.ಎ. ಸುಜಾ ಕುಶಾಲಪ್ಪ, ಬಿಜಿಪಿ ಮಾಜಿ ಜಿಲ್ಲಾಧ್ಯಕ್ಷ ರಾಬಿನ್ ದೇವಯ್ಯ, ಶಿಸ್ತು ಸಮಿತಿಯ ರೀನಾ ಪ್ರಕಾಶ್, ಮಡಿಕೇರಿ ತಾಲೂಕು ಅಧ್ಯಕ್ಷ ನಾಗೇಶ್ ಕುಂದಲ್ಪಾಡಿ, ಪ್ರಧಾನ ಕಾರ್ಯದರ್ಶಿ ನೆಲ್ಲಿರ ಚಲನ್, ತಾಲೂಕು ಪ್ರಧಾನ ಕಾರ್ಯದರ್ಶಿ ನೆಲ್ಲಚಂಡ ಕಿರಣ್ ಕಾರ್ಯಪ್ಪ, ತಾಲೂಕು ಮಹಿಳಾ ಮೋರ್ಚಾ ಕಾರ್ಯದರ್ಶಿ ಉಮಾ ಪ್ರಭು, ಚೆಯ್ಯಂಡಾಣೆ ಶಕ್ತಿ ಕೇಂದ್ರದ ಅಧ್ಯಕ್ಷ ದನೋಜ್, ಗ್ರಾ.ಪಂ. ಸದಸ್ಯರು, ಬಿಜೆಪಿ ಕಾರ್ಯಕರ್ತರು ಮತ್ತಿತರು ಇದ್ದರು.ಮಡಿಕೇರಿ, ಜೂ. ೧೫: ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದ ನೂತನ ಸಂಸದ ಯದುವೀರ್ ಒಡೆಯರ್ ಅವರನ್ನು ಎನ್‌ಡಿಎ ಮಿತ್ರ ಪಕ್ಷ, ಜಾತ್ಯತೀತ ಜನತಾದಳದ ಪ್ರಮುಖರು ಮೂರ್ನಾಡಿನಲ್ಲಿ ಆತ್ಮೀಯವಾಗಿ ಬರ ಮಾಡಿಕೊಂಡರು.
ಹೂವಿನ ಹಾರ ಹಾಕಿ, ಅಭಿನಂದನೆ ಸಲ್ಲಿಸಿ ಗೆಲುವಿನ ಸಂಭ್ರಮವನ್ನು ಹಂಚಿಕೊAಡರು. ತಮ್ಮ ಗೆಲುವಿಗಾಗಿ ಶ್ರಮಿಸಿದ ಜೆಡಿಎಸ್ ಹಾಗೂ ಬಿಜೆಪಿ ಪ್ರಮುಖರಿಗೆ ಸಂಸದ ಯದುವೀರ್ ಅವರು ಕೃತಜ್ಞತೆ ಸಲ್ಲಿಸಿದರು. ಕೊಡಗು ಜಿಲ್ಲೆಯ ಅಭಿವೃದ್ಧಿಗೆ ಬದ್ಧನಾಗಿರುವುದಾಗಿ ಭರವಸೆ ನೀಡಿದರು.
ಈ ಸಂದರ್ಭ ಕೊಡಗು ಜಿಲ್ಲಾ ಜೆಡಿಎಸ್ ಅಲ್ಪಸಂಖ್ಯಾತರ ಘಟಕದ ಜಿಲ್ಲಾಧ್ಯಕ್ಷ ಕೆ.ಜಿ.ಜಾಶಿರ್ ಮೂರ್ನಾಡು, ಪಕ್ಷದ ಜಿಲ್ಲಾ ಉಪಾಧ್ಯಕ್ಷ ಬಲ್ಲಚಂಡ ಗೌತಮ್, ಮೂರ್ನಾಡು ವಲಯಾಧ್ಯಕ್ಷ ಶರತ್ ಕುಂತೋಡಿ, ನಗರಾಧ್ಯಕ್ಷ ಗಣೇಶ್, ಮತ್ತಿತರ ಪ್ರಮುಖರು, ಕಾರ್ಯಕರ್ತರು ಹಾಗೂ ಬಿಜೆಪಿ ಪದಾಧಿಕಾರಿಗಳು ಹಾಜರಿದ್ದರು.ಕುಶಾಲನಗರ, ಜೂ. ೧೫: ಜಿಲ್ಲೆಯಲ್ಲಿ ಪರಿಸರ ಹಾಗೂ ಕಾವೇರಿ ನದಿ ಸಂರಕ್ಷಣೆಗೆ ಹೆಚ್ಚಿನ ಕಾಳಜಿ ವಹಿಸಲಾಗುವುದು ಎಂದು ಕೊಡಗು-ಮೈಸೂರು ಲೋಕಸಭಾ ಸದಸ್ಯ ಯದುವೀರ್ ಒಡೆಯರ್ ಭರವಸೆ ನೀಡಿದರು.
ಗೆಲುವು ಸಾಧಿಸಿದ ಬಳಿಕ ಜಿಲ್ಲೆಗೆ ಆಗಮಿಸಿದ ಯದುವೀರ್ ಅವರು ಕುಶಾಲನಗರದಲ್ಲಿ ಕಾವೇರಿ ಪ್ರತಿಮೆಗೆ ಮತ್ತು ಕುಶಾಲನಗರ ಗಣಪತಿ ದೇವಾಲಯದಲ್ಲಿ ಪೂಜೆ ಸಲ್ಲಿಸಿದ ನಂತರ ‘ಶಕ್ತಿ’ಯೊಂದಿಗೆ ಮಾತನಾಡಿದ ಅವರು, ಕೊಡಗು ಜಿಲ್ಲೆಯ ಪರಿಸರ, ನದಿ ಜಲಮೂಲಗಳ ಸಂರಕ್ಷಣೆಗೆ ಕೇಂದ್ರ ಸರ್ಕಾರದ ಮೂಲಕ ಯೋಜನೆಗಳನ್ನು ರೂಪಿಸುವ ಬಗ್ಗೆ ಚಿಂತನೆ ಹರಿಸಲಾಗುವುದು ಎಂದರು. ಈ ಸಂದರ್ಭ ಮಾಜಿ ಸಚಿವ ಎಂ.ಪಿ. ಅಪ್ಪಚ್ಚು ರಂಜನ್, ವಿಧಾನ ಪರಿಷತ್ ಮಾಜಿ ಸದಸ್ಯ ಎಂ.ಎ. ಸುನಿಲ್ ಸುಬ್ರಮಣಿ, ಜಿಲ್ಲಾ ಬಿಜೆಪಿ ಅಧ್ಯಕ್ಷ ನಾಪಂಡ ರವಿಕಾಳಪ್ಪ, ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ನೆರವಂಡ ಅನಿತಾ ಪೂವಯ್ಯ, ಮಾಜಿ ಅಧ್ಯಕ್ಷ ಬಿ.ಬಿ. ಭಾರತೀಶ್, ಮಂಡಲ ಪ್ರಧಾನ ಕಾರ್ಯದರ್ಶಿ ಗೌತಮ್, ಕುಶಾಲನಗರ ಬಿಜೆಪಿ ನಗರ ಅಧ್ಯಕ್ಷ ಎಂ.ಎA. ಚರಣ್, ಪ್ರಧಾನ ಕಾರ್ಯದರ್ಶಿ ಹೆಚ್.ಎಂ. ಮಧುಸೂದನ್, ಜಯವರ್ಧನ್, ಡಿ.ಕೆ. ತಿಮ್ಮಪ್ಪ ಮತ್ತಿತರರು ಹಾಜರಿದ್ದರು.