ಅನಿಲ್ ಎಚ್.ಟಿ.
ಬೆಂಗಳೂರು, ಜೂ. ೧೫: ಕರ್ನಾಟಕದಲ್ಲಿ ಪ್ರವಾಸೋದ್ಯಮ ಸಂಬAಧಿತ ಚಟುವಟಿಕೆಗಳಿಗೆ ರಾಜ್ಯ ಸರ್ಕಾರ ಎಲ್ಲಾ ರೀತಿಯ ಉತ್ತೇಜನ ನೀಡಲಿದ್ದು, ಕೇಂದ್ರ ಸರ್ಕಾರದ ಅಗತ್ಯ ನೆರವು ಕೂಡ ಈ ನಿಟ್ಟಿನಲ್ಲಿ ಅಗತ್ಯ ವಾಗಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.
ದಕ್ಷಿಣ ಭಾರತದ ಪ್ರವಾ ಸೋದ್ಯಮ ಮತ್ತು ಆತಿಥ್ಯ ಕ್ಷೇತ್ರದ ಸಮಗ್ರ ಅಬಿವೃದ್ಧಿಯ ಉದ್ದೇಶ ಹೊಂದಿದ್ದ ದಕ್ಷಿಣ ಭಾರತ್ ಉತ್ಸವ್ಗೆ ಅರಮನೆ ಮೈದಾನದ ಪ್ರಿನ್ಸ್ ಶೈನ್ ಸಭಾಂಗಣದಲ್ಲಿ ಚಾಲನೆ ನೀಡಿ ಅವರು ಮಾತನಾಡಿದರು
ದಕ್ಷಿಣ ಭಾರತದಲ್ಲಿಯೇ ಕರ್ನಾಟಕ ರಾಜ್ಯವು ಪ್ರವಾಸೋದ್ಯಮ ಕ್ಷೇತ್ರದಲ್ಲಿ ಪ್ರತೀ ವರ್ಷವೂ ಅತ್ಯಧಿಕ ಪ್ರವಾಸಿಗಳ ಮೂಲಕ ಗಮನಾರ್ಹ ಬೆಳವಣಿಗೆ ಕಾಣುತ್ತಿದೆ, ಇದರಿಂದಾಗಿ ಪ್ರವಾಸೋದ್ಯಮದ ಆದಾಯವೂ ಹೆಚ್ಚಾಗಿದೆ. ಭವಿಷ್ಯದಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿಯೂ ಪ್ರವಾಸೋದ್ಯಮ ಸಂಬAಧಿತ ಚಟುವಟಿಕೆಗಳಿಗೆ ಸರ್ಕಾರ ಆದ್ಯತೆ ನೀಡಲಿದೆ ಎಂದೂ ಶಿವಕುಮಾರ್ ಭರವಸೆ ನೀಡಿದರು. ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಜಿಎಸ್ಟಿ ವ್ಯವಸ್ಥೆಯಲ್ಲಿ ಕೆಲವೊಂದು ಸಡೀಲೀಕರಣದ ಅಗತ್ಯವಿದ್ದು, ಹೀಗಾದಾಗ ೩ಐದನೇ ಪುಟಕ್ಕೆ (ಮೊದಲ ಪುಟದಿಂದ) ಪ್ರವಾಸೋದ್ಯಮ ಕ್ಷೇತ್ರದಲ್ಲಿ ಬಂಡವಾಳ ಹೂಡಿಕೆ ಸೇರಿದಂತೆ ಎಲ್ಲಾ ರೀತಿಯಲ್ಲಿಯೂ ಪ್ರಗತಿ ಸಾಧ್ಯವಿದೆ. ಕೇಂದ್ರ ಸರ್ಕಾರ ಈ ನಿಟ್ಟಿನಲ್ಲಿ ತೆರಿಗೆ, ಜಿಎಸ್ಟಿ ವ್ಯವಸ್ಥೆಯಲ್ಲಿ ಸಡಿಲೀಕರಣ ಮಾಡಿದ್ದೇ ಆದಲ್ಲಿ ಕರ್ನಾಟಕ ಸರ್ಕಾರ ಪ್ರವಾಸೋದ್ಯಮದಲ್ಲಿಯೇ ಮುಂಚೂಣಿ ಯೋಜನೆ ಜಾರಿಗೊಳಿಸಲು ಬದ್ದವಿದೆ ಎಂದು ಹೇಳಿದರು.
ಕರ್ನಾಟಕ ಪ್ರವಾಸೋದ್ಯಮ ಸಚಿವ ಎಚ್.ಕೆ. ಪಾಟೀಲ್, ಕರ್ನಾಟಕದಲ್ಲಿ ಸರ್ಕಾರದ ಜತೆಗೆ ಖಾಸಗಿ ಪಾಲುದಾರಿಕೆಯ ಹೊಸ ಯೋಜನೆ ಜಾರಿಗೊಳಿಸಲು ಯೋಜನೆ ರೂಪಿಸಲಾಗುತ್ತಿದೆ. ಕೇಬಲ್ ಕಾರ್, ಹಿನ್ನೀರು ಪ್ರವಾಸೋದ್ಯಮಕ್ಕೆ ಆದ್ಯತೆ ನೀಡಲಾಗುತ್ತದೆ, ಹೊಸ ರೀತಿಯ ಪ್ರವಾಸೋದ್ಯಮ ಯೋಜನೆಗಳಿಗೆ ಸರ್ಕಾರ ಪ್ರೋತ್ಸಾಹ ನೀಡಲಿದೆ ಎಂದು ಭರವಸೆ ನೀಡಿದರು,
ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ರಾಜ್ಯ ಸರ್ಕಾರದ ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷ ಮೆಹರೋಜ್ ಖಾನ್, ಚಿತ್ರ ರಾಜ್ಯ ವಾಣಿಜ್ಯ ಮತ್ತು ಕೈಗಾರಿಕೆ ಮಹಾ ಸಂಸ್ಥೆಯ ಅಧ್ಯಕ್ಷ ರಮೇಶ್ ಚಂದ್ರ ಲಹೋಟಿ, ರಾಜ್ಯ ಪದಾಧಿಕಾರಿಗಳು, ರಾಜ್ಯದ ಬಹುತೇಕ ಜಿಲ್ಲೆಗಳ ಚೇಂಬರ್ ಆಫ್ ಕಾಮರ್ಸ್, ಪ್ರವಾಸೋದ್ಯಮ ಸಂಸ್ಥೆಗಳ ಪ್ರಮುಖರು ಸಮ್ಮೇಳನದಲ್ಲಿ ಪಾಲ್ಗೊಂಡಿದ್ದರು.