ಕುಶಾಲನಗರ, ಜೂ. ೧೫: ಜಿಲ್ಲೆಯಲ್ಲಿ ಪರಿಸರ ಹಾಗೂ ಕಾವೇರಿ ನದಿ ಸಂರಕ್ಷಣೆಗೆ ಹೆಚ್ಚಿನ ಕಾಳಜಿ ವಹಿಸಲಾಗುವುದು ಎಂದು ಕೊಡಗು-ಮೈಸೂರು ಲೋಕಸಭಾ ಸದಸ್ಯ ಯದುವೀರ್ ಒಡೆಯರ್ ಭರವಸೆ ನೀಡಿದರು.
ಗೆಲುವು ಸಾಧಿಸಿದ ಬಳಿಕ ಜಿಲ್ಲೆಗೆ ಆಗಮಿಸಿದ ಯದುವೀರ್ ಅವರು ಕುಶಾಲನಗರದಲ್ಲಿ ಕಾವೇರಿ ಪ್ರತಿಮೆಗೆ ಮತ್ತು ಕುಶಾಲನಗರ ಗಣಪತಿ ದೇವಾಲಯದಲ್ಲಿ ಪೂಜೆ ಸಲ್ಲಿಸಿದ ನಂತರ ‘ಶಕ್ತಿ’ಯೊಂದಿಗೆ ಮಾತನಾಡಿದ ಅವರು, ಕೊಡಗು ಜಿಲ್ಲೆಯ ಪರಿಸರ, ನದಿ ಜಲಮೂಲಗಳ ಸಂರಕ್ಷಣೆಗೆ ಕೇಂದ್ರ ಸರ್ಕಾರದ ಮೂಲಕ ಯೋಜನೆಗಳನ್ನು ರೂಪಿಸುವ ಬಗ್ಗೆ ಚಿಂತನೆ ಹರಿಸಲಾಗುವುದು ಎಂದರು. ಈ ಸಂದರ್ಭ ಮಾಜಿ ಸಚಿವ ಎಂ.ಪಿ. ಅಪ್ಪಚ್ಚು ರಂಜನ್, ವಿಧಾನ ಪರಿಷತ್ ಮಾಜಿ ಸದಸ್ಯ ಎಂ.ಎ. ಸುನಿಲ್ ಸುಬ್ರಮಣಿ, ಜಿಲ್ಲಾ ಬಿಜೆಪಿ ಅಧ್ಯಕ್ಷ ನಾಪಂಡ ರವಿಕಾಳಪ್ಪ, ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ನೆರವಂಡ ಅನಿತಾ ಪೂವಯ್ಯ, ಮಾಜಿ ಅಧ್ಯಕ್ಷ ಬಿ.ಬಿ. ಭಾರತೀಶ್, ಮಂಡಲ ಪ್ರಧಾನ ಕಾರ್ಯದರ್ಶಿ ಗೌತಮ್, ಕುಶಾಲನಗರ ಬಿಜೆಪಿ ನಗರ ಅಧ್ಯಕ್ಷ ಎಂ.ಎA. ಚರಣ್, ಪ್ರಧಾನ ಕಾರ್ಯದರ್ಶಿ ಹೆಚ್.ಎಂ. ಮಧುಸೂದನ್, ಜಯವರ್ಧನ್, ಡಿ.ಕೆ. ತಿಮ್ಮಪ್ಪ ಮತ್ತಿತರರು ಹಾಜರಿದ್ದರು.