ಸುAಟಿಕೊಪ್ಪ, ಜು. ೬: ಮಡಿಕೇರಿ ತಾಲೂಕು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬೆಳ್ತಂಗಡಿಯ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ, ಕೊಡಗು ಜಿಲ್ಲಾ ಜನಜಾಗೃತಿ ವೇದಿಕೆ, ಮಡಿಕೇರಿ ತಾಲೂಕು ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟ, ಮಾದಾಪುರ ಶ್ರೀಮತಿ ಡಿ. ಚೆನ್ನಮ್ಮ ಪದವಿಪೂರ್ವ ಕಾಲೇಜು ಸಂಯುಕ್ತ ಆಶ್ರಯದಲ್ಲಿ ಸ್ವಾಸ್ಥö್ಯ ಸಂಕಲ್ಪ ಕಾರ್ಯಕ್ರಮ ನಡೆಯಿತು.

ಜನಜಾಗೃತಿ ವೇದಿಕೆ ಶಿಬಿರಾಧಿಕಾರಿ ಪಿ.ಪಿ. ನಂದಕುಮಾರ್ ಮಾತನಾಡಿ, ಇದುವರೆಗೆ ೧೮೦೫ ಮದ್ಯವರ್ಜನ ಶಿಬಿರಗಳನ್ನು ನಡೆಸಿ ೧ ಲಕ್ಷದ ೪೬ ಸಾವಿರ ಮದ್ಯ ವ್ಯಸನಿಗಳನ್ನು ವ್ಯಸನಮುಕ್ತಗೊಳಿಸ ಲಾಗಿದೆ. ವಿಶ್ವ ಆರೋಗ್ಯ ಸಂಸ್ಥೆಯ ಕಳೆದ ಸಂಶೋಧನೆಯ ಪ್ರಕಾರ ನಮ್ಮ ದೇಶದಲ್ಲಿ ಒಂದು ವರ್ಷಕ್ಕೆ ೫ ಲಕ್ಷ ಜನರು ಮದ್ಯಪಾನದಿಂದ ಮರಣ ಹೊಂದಿದರೆ, ೧೪.೫ ಲಕ್ಷ ಜನರು ಮಾದಕ ದ್ರವ್ಯ, ಮಾದಕ ವ್ಯಸನ ಅಥವಾ ಇನ್ನಿತರ ಚಟಗಳಿಂದ ಬಲಿಯಾಗುತ್ತಿರುವುದು ಶೋಚನೀಯ ವಾಗಿದೆ.

ಹದಿಹರೆಯದ ಈ ವಯಸ್ಸಿನಲ್ಲಿ ವಿದ್ಯಾರ್ಥಿಗಳು ಅನವಶ್ಯಕವಾಗಿ ಮನಸ್ಸಿಗೆ ಒತ್ತಡ ತಂದು ಕೊಳ್ಳುವುದರಿಂದ ಮತ್ತು ಪಾಶ್ಚಾತ್ಯ ಪ್ರಭಾವಕ್ಕೆ ಒಳಗಾಗಿ ಮಾದಕ ಪದಾರ್ಥ ಹಾಗೂ ಇನ್ನಿತರ ವ್ಯಸನಗಳಿಗೆ ಬಲಿಯಾಗುತ್ತಿರುವುದು ದುರಂತ ಎಂದು ಕಳವಳ ವ್ಯಕ್ತಪಡಿಸಿದರು.

ಸಮಾಜದಲ್ಲಿ ವ್ಯಸನಕ್ಕೆ ಒಳಗಾದವರು ಅಪಘಾತ, ಆತ್ಮಹತ್ಯೆ ಮತ್ತು ಅಕಾಲಿಕ ಮರಣ ಇವುಗಳಿಗೆ ತುತ್ತಾಗುತ್ತಿದ್ದಾರೆ. ಅತಿಯಾದ ಮೊಬೈಲ್ ಬಳಕೆ ಮತ್ತು ಸಾಮಾಜಿಕ ಜಾಲತಾಣದಿಂದಲೂ ವಿದ್ಯಾರ್ಥಿಗಳ ಮನಸ್ಥಿತಿ ಹಾಳಾಗುತ್ತದೆ. ವಿದ್ಯಾರ್ಥಿ ಗಳು ಇದರ ಬಗ್ಗೆಯೂ ಗಮನ ಹರಿಸಬೇಕು ಎಂದು ನಂದಕುಮಾರ್ ಹೇಳಿದರು. ಧರ್ಮಸ್ಥಳ ಗ್ರಾಮಾಭಿವೃದ್ಧಿ ವಯೋಜನೆಯ ಯೋಜನಾಧಿಕಾರಿ ಪುರುಷೋತ್ತಮ್ ಮಾತನಾಡಿದರು.ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕಾಲೇಜಿನ ಪ್ರಾಚಾರ್ಯ ಸಿ.ಜಿ. ಮಂದಪ್ಪ ಅವರು, ಕಾಲೇಜು ಜೀವನದಲ್ಲಿ ವಿದ್ಯಾರ್ಥಿಗಳ ಮನಸ್ಸು ತುಂಬಾ ಚಂಚಲ. ಈ ಹಂತದಲ್ಲಿ ವಿದ್ಯಾರ್ಥಿಗಳು ತಮ್ಮ ಮನಸ್ಸನ್ನು ಸ್ವನಿಗ್ರಹದೊಂದಿಗೆ ಹತೋಟಿಗೆ ತಂದುಕೊಳ್ಳುವ ಅನಿವಾರ್ಯತೆ ಇದೆ. ವಿದ್ಯಾರ್ಥಿಗಳೇ ಉತ್ತಮ ಸಮಾಜದ ಆಸ್ತಿ ಎಂದರು.

ಕಾರ್ಯಕ್ರಮದ ಉದ್ಘಾಟನೆ ಯನ್ನು ಜಿಲ್ಲಾ ಜನಜಾಗೃತಿ ವೇದಿಕೆಯ ಸದಸ್ಯ ಟಿ.ಎಂ. ಅಯ್ಯಪ್ಪ ನೆರವೇರಿ ಸಿದರು. ಇದೇ ವೇಳೆ ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು.

ಪ್ರೌಢಶಾಲೆಯ ಮುಖ್ಯೋಪಾ ಧ್ಯಾಯಿನಿ ರೀಟಾ, ಒಕ್ಕೂಟದ ಅಧ್ಯಕ್ಷೆ ಪುಷ್ಪ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮಡಿಕೇರಿ ವಲಯದ ಮೇಲ್ವಿಚಾರಕಿ ವಿನೋದ ಸೇರಿದಂತೆ ಇತರರು ಉಪಸ್ಥಿತರಿದ್ದರು.