ಚೆಯ್ಯಂಡಾಣೆ, ಜು. ೬: ಕುಂಜಿಲ ಕಕ್ಕಬೆ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಒಳ ಪಟ್ಟ ಮರಂದೋಡ ಗ್ರಾಮ ದಲ್ಲಿ ಕಾಡಾನೆ ಹಾವಳಿ ಮಿತಿಮೀರಿದ್ದು ರೈತರು ಬೆಳೆದ ಕಾಫಿ ಮತ್ತಿತರ ಬೆಳೆಗಳನ್ನು ತುಳಿದು ನಾಶ ಪಡಿಸುತ್ತಿದೆ.
ಮರಂದೋಡ ಗ್ರಾಮದ ನಿಡುಮಂಡ ಹರೀಶ್ ಹಾಗೂ ಅಶೋಕ್ ಅವರ ತೋಟಕ್ಕೆ ಲಗ್ಗೆ ಇಟ್ಟ ಒಂಟಿ ಸಲಗ ಒಂದು ವಾರದಿಂದ ತೋಟದಲ್ಲೇ ಬೀಡು ಬಿಟ್ಟಿದ್ದು ಕಾಫಿ ಗಿಡಗಳನ್ನು ತುಳಿದು ನಾಶಪಡಿಸಿದೆ. ಸಂಬAಧಪಟ್ಟ ಅರಣ್ಯ ಇಲಾಖೆ ಅಧಿಕಾರಿಗಳು ಕಾಡಾನೆ ತೋಟಕ್ಕೆ ನುಗ್ಗದ ರೀತಿಯಲ್ಲಿ ಶಾಶ್ವತ ಪರಿಹಾರ ಕಂಡುಕೊಳ್ಳಬೇಕು ಅಥವಾ ಕಾಡಾನೆಯನ್ನು ಸೆರೆ ಹಿಡಿದು ಬೇರೆಡೆ ಸ್ಥಳಾಂತರಿಸಬೇಕು. ಸೂಕ್ತ ಪರಿಹಾರ ನೀಡಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ. - ಅಶ್ರಫ್