ಕೂಡಿಗೆ, ಜು. ೫: ಕೂಡಿಗೆ ಗ್ರಾಮ ಪಂಚಾಯಿತಿಯ ಸಾಮಾನ್ಯ ಸಭೆ ಅಧ್ಯಕ್ಷ ಕೆ.ಟಿ. ಗಿರೀಶ್ ಅಧ್ಯಕ್ಷತೆಯಲ್ಲಿ ಜರುಗಿತು.

ಗ್ರಾಮ ಪಂಚಾಯಿತಿ ವತಿಯಿಂದ ನಿವೇಶನ ರಹಿತರಿಗೆ ನಿವೇಶನಕ್ಕೆ ಜಾಗ ನೀಡುವ ಉದ್ದೇಶದಿಂದ ೨೦೦೩ ರಲ್ಲಿ ೪ ಎಕರೆಗಳಷ್ಟು ಜಾಗವನ್ನು ಕಾಳಿದೇವನ ಹೊಸೂರು ಗ್ರಾಮದ ಸರ್ವೆ ನಂಬರ್ ೮/೩ರಲ್ಲಿ ಕಾಯ್ದಿರಿಸಲಾಗಿತ್ತು. ಅದರೆ, ಈ ಜಾಗವನ್ನು ಕಾಯ್ದಿರಿಸುವ ಬದಲು ಬುಡಕಟ್ಟು ಜನಾಂಗದ ಕೃಷಿ ಭೂಮಿಯನ್ನು ನಿವೇಶನ ರಹಿತರಿಗೆ ಎಂದು ತಾಲೂಕು ಪಂಚಾಯಿತಿಯಲ್ಲಿ ಕಾಯ್ದಿರಿಸಿಸುವ ಪರಿಣಾಮ ಕೃಷಿ ಭೂಮಿಯಲ್ಲಿ ವ್ಯವಸಾಯ ಮಾಡುತ್ತಿರುವ ಬುಡಕಟ್ಟು ಜನಾಂಗದ ಕುಟುಂಬಕ್ಕೆ ಭಾರಿ ತೊಂದರೆಗಳು ಅಗುತ್ತಿವೆ. ಸಂಬAಧಿಸಿದ ಕಂದಾಯ ಇಲಾಖೆಯವರು ಸರಿಪಡಿಸುವಂತೆ ಸಾಮಾನ್ಯ ಸಭೆಯಲ್ಲಿ ಹಾಜರಿದ್ದ ಸರ್ವ ಸದಸ್ಯರ ಒಕ್ಕೊರಲಿನ ತೀರ್ಮಾನ ಕೈಗೊಂಡರು.

ಸಭೆಯಲ್ಲಿ ಹಾಜರಿದ್ದ ಸದಸ್ಯರು ತಮ್ಮ ತಮ್ಮ ವಾರ್ಡ್ನ ಮೂಲಭೂತ ಸೌಕರ್ಯಗಳನ್ನು ಸಮರ್ಪಕವಾಗಿ ನಿರ್ವಹಿಸುವಂತೆ ಸಭೆಯಲ್ಲಿ ತಿಳಿಸಿದರು. ನಂತರ ೧೬ ಹಣಕಾಸು ಯೋಜನೆಯ ವಿವಿಧ ಕಾಮಗಾರಿಗಳ ಕ್ರಿಯಾ ಯೋಜನೆಗೆ ಸಂಬAಧಿಸಿದAತೆ ವಿವಿಧ ಚರ್ಚೆಗಳು ಸಭೆಯಲ್ಲಿ ನಡೆದವು. ಸಭೆಯಲ್ಲಿ ಅಧ್ಯಕ್ಷತೆ ವಹಿಸಿದ್ದ ಅಧ್ಯಕ್ಷ ಕೆ.ಟಿ. ಗಿರೀಶ್ ಮಾತನಾಡಿ, ಆಡಳಿತ ಮಂಡಳಿಯ ಸದಸ್ಯರ ಸಹಕಾರದೊಂದಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಿವಿಧ ಕಾಮಗಾರಿಗಳನ್ನು ಕೈಗೊಳ್ಳಲಾಗುವುದು. ಪ್ರಮುಖವಾಗಿ ಕುಡಿಯುವ ನೀರು, ಬೀದಿ ದೀಪ ಮತ್ತು ಈಗಾಗಲೇ ಎಲ್ಲಾ ಕಡೆಗಳಲ್ಲಿ ಡೆಂಗ್ಯೂ ರೋಗ ಹರಡುತ್ತಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸುವ ಬಗ್ಗೆ ಸದಸ್ಯ ಸಲಹೆಗಳ ಮೂಲಕ ಕ್ರಮವನ್ನು ವಹಿಸಲಾಗುತ್ತಿದೆ ಎಂದರು.

ಅಭಿವೃದ್ಧಿ ಅಧಿಕಾರಿ ಮಂಜಳಾ ಸಭೆಗೆ ಬಂದ ಸಾರ್ವಜನಿಕರ ಅರ್ಜಿಗಳನ್ನು ಸಭೆಯ ಗಮನಕ್ಕೆ ತಂದು ವಿಲೇವಾರಿ ಮಾಡಲು ಒಪ್ಪಿಗೆ ಪಡೆದರು. ಸಭೆಯಲ್ಲಿ ಉಪಾಧ್ಯಕ್ಷೆ ವಿ. ಜಯಶ್ರೀ ಸೇರಿದಂತೆ ಸದಸ್ಯರಾದ ಟಿ.ಪಿ. ಹಮೀದ್, ಅನಂತ, ಮಂಗಳ, ಮೋಹಿನಿ, ಎಸ್.ಆರ್. ಅರುಣ್ ರಾವ್, ಕೆ.ಎಸ್. ಶಿವಕುಮಾರ್, ವಾಣಿ, ರತ್ನಮ್ಮ, ಹೆಚ್.ಎಸ್. ರವಿ, ಚಂದ್ರು, ಜಯಶೀಲ, ಸೇರಿದಂತೆ ಅಭಿವೃದ್ಧಿ ಅಧಿಕಾರಿ ಮಂಜಳಾ, ಕಾರ್ಯದರ್ಶಿ ಪುನೀತ್ ಹಾಜರಿದ್ದರು.ಯೋಜನೆಗೆ ಸಂಬAಧಿಸಿದAತೆ ವಿವಿಧ ಚರ್ಚೆಗಳು ಸಭೆಯಲ್ಲಿ ನಡೆದವು. ಸಭೆಯಲ್ಲಿ ಅಧ್ಯಕ್ಷತೆ ವಹಿಸಿದ್ದ ಅಧ್ಯಕ್ಷ ಕೆ.ಟಿ. ಗಿರೀಶ್ ಮಾತನಾಡಿ, ಆಡಳಿತ ಮಂಡಳಿಯ ಸದಸ್ಯರ ಸಹಕಾರದೊಂದಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಿವಿಧ ಕಾಮಗಾರಿಗಳನ್ನು ಕೈಗೊಳ್ಳಲಾಗುವುದು. ಪ್ರಮುಖವಾಗಿ ಕುಡಿಯುವ ನೀರು, ಬೀದಿ ದೀಪ ಮತ್ತು ಈಗಾಗಲೇ ಎಲ್ಲಾ ಕಡೆಗಳಲ್ಲಿ ಡೆಂಗ್ಯೂ ರೋಗ ಹರಡುತ್ತಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸುವ ಬಗ್ಗೆ ಸದಸ್ಯ ಸಲಹೆಗಳ ಮೂಲಕ ಕ್ರಮವನ್ನು ವಹಿಸಲಾಗುತ್ತಿದೆ ಎಂದರು.

ಅಭಿವೃದ್ಧಿ ಅಧಿಕಾರಿ ಮಂಜಳಾ ಸಭೆಗೆ ಬಂದ ಸಾರ್ವಜನಿಕರ ಅರ್ಜಿಗಳನ್ನು ಸಭೆಯ ಗಮನಕ್ಕೆ ತಂದು ವಿಲೇವಾರಿ ಮಾಡಲು ಒಪ್ಪಿಗೆ ಪಡೆದರು. ಸಭೆಯಲ್ಲಿ ಉಪಾಧ್ಯಕ್ಷೆ ವಿ. ಜಯಶ್ರೀ ಸೇರಿದಂತೆ ಸದಸ್ಯರಾದ ಟಿ.ಪಿ. ಹಮೀದ್, ಅನಂತ, ಮಂಗಳ, ಮೋಹಿನಿ, ಎಸ್.ಆರ್. ಅರುಣ್ ರಾವ್, ಕೆ.ಎಸ್. ಶಿವಕುಮಾರ್, ವಾಣಿ, ರತ್ನಮ್ಮ, ಹೆಚ್.ಎಸ್. ರವಿ, ಚಂದ್ರು, ಜಯಶೀಲ, ಸೇರಿದಂತೆ ಅಭಿವೃದ್ಧಿ ಅಧಿಕಾರಿ ಮಂಜಳಾ, ಕಾರ್ಯದರ್ಶಿ ಪುನೀತ್ ಹಾಜರಿದ್ದರು.