ಗೋಣಿಕೊಪ್ಪಲು, ಜು. ೭: ಸರ್ಕಾರ ವಿದ್ಯಾರ್ಥಿಗಳ ಅನುಕೂಲ ಕ್ಕಾಗಿ ಉತ್ತಮ ಕಟ್ಟಡ ನಿರ್ಮಿಸಿ, ಮೂಲಭೂತವಾಗಿ ಸೌಕರ್ಯಗಳನ್ನು ಒದಗಿಸಿದ್ದರೂ ಅವುಗಳನ್ನು ಸರಿಯಾದ ರೀತಿಯಲ್ಲಿ ಬಳಕೆ ಮಾಡದೇ ನಿರ್ಲಕ್ಷ್ಯ ತೋರುವ ಮೂಲಕ ವಿದ್ಯಾರ್ಥಿಗಳ ಕಲಿಕೆಗೆ ಅನಾನುಕೂಲ ವಾತಾವರಣ ಸೃಷ್ಟಿಸಿದ ಘಟನೆ ವೀರಾಜಪೇಟೆ ತಾಲೂಕಿನ ಆರ್.ಜಿ. ಪಂಚಾಯಿತಿ ವ್ಯಾಪ್ತಿಯ ಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ನಡೆದಿದೆ.

ಶಾಲೆಯ ಸಿಬ್ಬಂದಿ ಹಾಗೂ ಅಧಿಕಾರಿಗಳ ಕಾರ್ಯ ವೈಖರಿಯ ಬಗ್ಗೆ ವ್ಯಾಪಕ ದೂರು ಬಂದ ಹಿನ್ನೆಲೆಯಲ್ಲಿ ವಿಷಯವನ್ನು ಗಂಭೀರವಾಗಿ ಪರಿಗಣಿಸಿದ ವೀರಾಜಪೇಟೆ ವಿಧಾನ ಸಭಾ ಕ್ಷೇತ್ರದ ಶಾಸಕ, ಮುಖ್ಯ ಮಂತ್ರಿಗಳ ಕಾನೂನು ಸಲಹೆಗಾರರಾದ ಎ. ಎಸ್.ಪೊನ್ನಣ್ಣ ಬೆಳ್ಳಂಬೆಳಿಗ್ಗೆ ವಸತಿ ಶಾಲೆಗೆ ಭೇಟಿ ನೀಡುವ ಮೂಲಕ ಅಲ್ಲಿನ ಸಮಸ್ಯೆಗಳನ್ನು ಪರಿಶೀಲನೆ ನಡೆಸಿದರು.

ವಿಸ್ತಾರವಾದ ಪ್ರದೇಶದಲ್ಲಿ ಉತ್ತಮ ಕಟ್ಟಡ ನಿರ್ಮಾಣಗೊಂಡಿದ್ದು ಯುವಕ, ಯುವತಿಯರು ಸೇರಿದಂತೆ ೧೫೦ಕ್ಕೂ ಹೆಚ್ಚಿನ ವಿದ್ಯಾರ್ಥಿಗಳು ವಸತಿ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಾರೆ.

ಇಲ್ಲಿ ವಿದ್ಯಾರ್ಥಿಗಳಿಗೆ ಪ್ರತಿನಿತ್ಯದ ಊಟ ಹೊರತುಪಡಿಸಿ ಬೇರೆ ಹಲವು ರೀತಿಯ ಸೌಕರ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಅಲ್ಲಿನ ಪ್ರಾಂಶುಪಾಲರು, ವಾರ್ಡನ್ ಹಾಗೂ ಸಿಬ್ಬಂದಿ ನಿರ್ಲಕ್ಷö್ಯ ತೋರಿರುವುದು ಶಾಸಕರ ಗಮನಕ್ಕೆ ಬಂದಿದೆ.

ವಸತಿ ನಿಲಯದ ಸ್ಟೋರ್ ರೂಂ, ಶೌಚಾಲಯ, ಅಡುಗೆ ಮನೆ ಸೇರಿದಂತೆ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಅಳವಡಿಸಿದ ಬಿಸಿ ನೀರು ವ್ಯವಸ್ಥೆ, ವಿದ್ಯುತ್ ದೀಪದ ಅಳವಡಿಕೆ, ಪ್ರತಿಯೊಂದನ್ನು ಖುದ್ದಾಗಿ ವೀಕ್ಷಣೆ ಮಾಡಿದರು.

ವಿದ್ಯಾರ್ಥಿಗಳಿಗೆ ಸಿಗಬೇಕಾದ ಸೌಕರ್ಯಗಳ ಕೊರತೆ ಎದ್ದು ಕಾಣುತ್ತಿದ್ದಂತೆಯೇ, ಸ್ಥಳದಲ್ಲಿದ್ದ ಪ್ರಾಂಶುಪಾಲರನ್ನು ತೀವ್ರ ತರಾಟೆಗೆ ತೆಗೆದುಕೊಂಡರು.

(ಮೊದಲ ಪುಟದಿಂದ) ವಸತಿ ಶಾಲೆಯಲ್ಲಿ ಆರು ವರ್ಷದಿಂದ ಕೆಲಸ ನಿರ್ವಹಿಸುತ್ತಿದ್ದರೂ ಇಲ್ಲಿನ ಸಮಸ್ಯೆಗಳ ಬಗ್ಗೆ ಸಂಬAಧಿಸಿದ ಅಧಿಕಾರಿಗಳಿಗೆ ಏಕೆ ಪತ್ರ ಬರೆಯಲಿಲ್ಲ ಎಂದು ಪ್ರಶ್ನಿಸಿದರು. ಪ್ರಾಂಶುಪಾಲರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವಂತೆ ಸಂಬAಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಕೆಲವು ಡಿ ದರ್ಜೆಯ ನೌಕರರು ಮುಂಜಾನೆಯೇ ಮದ್ಯ ಸೇವಿಸಿ ಪಾನಮತ್ತರಾಗಿರುವುದನ್ನು ಗಮನಿಸಿದ ಶಾಸಕರು ಕೂಡಲೇ ಸ್ಥಳದಲ್ಲಿದ್ದ ಪೊಲೀಸರಿಗೆ ಅವರನ್ನು ವಶಕ್ಕೆ ಪಡೆದು ಕ್ರಮ ಕೈಗೊಳ್ಳಲು ಸೂಚನೆ ನೀಡಿದರು.

ಇಬ್ಬರು ಡಿ ದರ್ಜೆಯ ನೌಕರರನ್ನು ಕೂಡಲೇ ಅಮಾನತು ಮಾಡಲು ಹಿರಿಯ ಅಧಿಕಾರಿಗಳಿಗೆ ನಿರ್ದೇಶನ ಮಾಡಿದರು.

ಹಲವು ಸಮಯದಿಂದಲೂ ವಸತಿ ಶಾಲೆ ಅವ್ಯವಸ್ಥೆ ಆಗರವಾಗಿ ರುವ ಬಗ್ಗೆ, ಗ್ರಾಮಸ್ಥರು, ವಿದ್ಯಾರ್ಥಿಗಳು ಸೇರಿದಂತೆ ಪೋಷ ಕರು ಶಾಸಕರ ಬಳಿ ಅಹವಾಲು ಸಲ್ಲಿಸಿದ್ದರು.

ಸಾರ್ವಜನಿಕರ ದೂರಿನ ಹಿನ್ನೆಲೆಯಲ್ಲಿ ಹಿರಿಯ ಅಧಿಕಾರಿಗಳಿಗೆ ಈ ಬಗ್ಗೆ ಕ್ರಮ ಕೈಗೊಳ್ಳಲು ಸೂಚನೆ ನೀಡಿದ್ದರು.

ಆದರೆ ಸಂಬAಧಿಸಿದ ಹಿರಿಯ ಅಧಿಕಾರಿಗಳು ವಸತಿ ಶಾಲೆಗೆ ಭೇಟಿ ನೀಡುವುದಾಗಲಿ, ಅಲ್ಲಿನ ಸಮಸ್ಯೆಗಳನ್ನು ಬಗೆಹರಿಸುವ ಪ್ರಯತ್ನವಾಗಲಿ ಮಾಡದೇ ಶಾಸಕರ ನಿರ್ದೇಶನವನ್ನು ನಿರ್ಲಕ್ಷಿö್ಯಸಿದ್ದರು.

ಈ ಹಿನ್ನೆಲೆಯಲ್ಲಿ ದಿಢೀರ್ ಭೇಟಿ ನೀಡಿದ ಸಂದರ್ಭದಲ್ಲಿ ಅಲ್ಲಿನ ಅವ್ಯವಸ್ಥೆ ಬೆಳಕಿಗೆ ಬಂದಿದೆ. ಮುಂಜಾನೆಯ ೭ ಗಂಟೆಗೆ ತೆರಳಿದ ಶಾಸಕ ಪೊನ್ನಣ್ಣ ೧೦ ಗಂಟೆಯವರೆಗೂ ವಸತಿ ಶಾಲೆಯ ಕಡತ, ಆಹಾರ ಸಾಮಗ್ರಿ ಸೇರಿದಂತೆ ಹಲವು ವಿಷಯಗಳ ಬಗ್ಗೆ ಪರಿಶೀಲನೆ ನಡೆಸಿದರು.

ವಿದ್ಯಾರ್ಥಿಗಳೊಂದಿಗೆ ಮುಕ್ತವಾಗಿ ಬೆರೆತ ಶಾಸಕರು ಇಲ್ಲಿನ ಸಮಸ್ಯೆ ಬಗೆಹರಿಸುವ ಸಲುವಾಗಿ ಬಂದಿದ್ದೇನೆ, ಯಾರನ್ನು ಭಯಪಡದೆ ಇಲ್ಲಿ ವಿದ್ಯಾರ್ಥಿಗಳು ದಿನನಿತ್ಯ ಎದುರಿಸುತ್ತಿರುವ ಸಮಸ್ಯೆಗಳನ್ನು ಹೇಳಿಕೊಳ್ಳುವಂತೆ ತಿಳಿಸಿದರು.

ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು ತಮ್ಮ ತಮ್ಮ ಸಮಸ್ಯೆಗಳನ್ನು ಶಾಸಕರ ಮುಂದಿಟ್ಟರು.

ಮಾಧ್ಯಮದೊAದಿಗೆ ಪ್ರತಿಕ್ರಿಯಿಸಿದ ಶಾಸಕ ಪೊನ್ನಣ್ಣ ಸರ್ಕಾರ ಸಾಕಷ್ಟು ಪ್ರಮಾಣದಲ್ಲಿ ಅನುದಾನ ನೀಡಿದರೂ ಅದನ್ನು ಸದ್ಬಳಕೆ ಮಾಡುವಲ್ಲಿ ಕೆಲವು ಅಧಿಕಾರಿಗಳು ನಿರ್ಲಕ್ಷö್ಯ ತೋರುತ್ತಿದ್ದಾರೆ.

ಇದರಿಂದಾಗಿ ಮಕ್ಕಳ ಕಲಿಕೆಯ ಮೇಲೆ ಪರಿಣಾಮ ಬೀರುತ್ತದೆ ಇದು ಮುಂದುವರಿಯಬಾರದು, ಸಂಪೂರ್ಣ ನಿರ್ಲಕ್ಷö್ಯ ತೋರುವ ಅಧಿಕಾರಿಗಳ ಹಾಗೂ ಸಿಬ್ಬಂದಿಗಳ ಮೇಲೆ ಕಠಿಣ ಕ್ರಮವಾದಲ್ಲಿ ಮಾತ್ರ ಇಂತಹ ಸಮಸ್ಯೆ ಮುಂದುವರಿಯುವುದಿಲ್ಲ. ಹಾಗಾಗಿ ಸಂಬAಧಿಸಿದವರ ಮೇಲೆ ಕಠಿಣ ಕ್ರಮಗಳನ್ನು ಜರುಗಿಸುವುದಾಗಿ ತಿಳಿಸಿದರು.

ದಿನನಿತ್ಯ ವಿದ್ಯಾರ್ಥಿಗಳಿಗೆ ನೀಡುವ ಊಟದ ವ್ಯವಸ್ಥೆ ವೀಕ್ಷಣೆ ಮಾಡಿದರು. ಅಲ್ಲದೇ ಖುದ್ದಾಗಿ ಸೇವಿಸಿ ಗುಣಮಟ್ಟ ಪರಿಶೀಲನೆ ನಡೆಸಿದರು. ಭೇಟಿಯ ಸಂದರ್ಭದಲ್ಲಿ ಕೆಪಿಸಿಸಿ ರಾಜ್ಯ ವಕ್ತಾರ ಮೇರಿಯಂಡ ಸಂಕೇತ್ ಪೂವಯ್ಯ, ವೀರಾಜಪೇಟೆ ಬ್ಲಾಕ್ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಪಟ್ಟಡ ರಂಜಿ ಪೂಣಚ್ಚ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು. - ಹೆಚ್.ಕೆ. ಜಗದೀಶ್