ಮಡಿಕೇರಿ, ಜು. ೭: ೨೦೨೩-೨೪ನೇ ಸಾಲಿನ ಮಡಿಕೇರಿ ನಗರಸಭಾ ನಿಧಿ ಹಾಗೂ ೨೦೨೪-೨೫ನೇ ಸಾಲಿನ ಎಸ್.ಎಫ್.ಸಿ. ಮುಕ್ತನಿಧಿ ಅನುದಾನದಡಿ ಅನುಮೋದಿತ ಕ್ರಿಯಾಯೋಜನೆಯಂತೆ ಶೇ. ೨೪.೧೦ ರ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡದ, ಶೇ. ೭.೨೫ ರ ಇತರೆ ಬಡ ಜನರ ಕಲ್ಯಾಣ ಕಾರ್ಯಕ್ರಮ ಹಾಗೂ ಶೇ. ೫ ರ ಅಂಗವಿಕಲರ ಅಭಿವೃದ್ಧಿ ಯೋಜನೆಯ, ವೈಯಕ್ತಿಕ ಕಾರ್ಯಕ್ರಮದಡಿ ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಬಡಜನರ ಕಲ್ಯಾಣ ಕಾರ್ಯಕ್ರಮ: ಆಯ್ದ ಇತರೆ ಬಡ ಸಣ್ಣ ಉದ್ದಿಮೆದಾರರಿಗೆ ಸಹಾಯಧನ ರೂ. ೦.೧ ಲಕ್ಷ, ಇತರೆ ಬಡಜನರ ಶಸ್ತçಚಿಕಿತ್ಸೆಗೆ ಸಹಾಯಧನ ರೂ. ೦.೭೭, ಇತರೆ ಬಡಜನರ ಅಭಿವೃದ್ಧಿ ಕಾರ್ಯಕ್ರಮಗಳಿಗಾಗಿ ಸಹಾಯಧನ ೨.೯೪ ಲಕ್ಷ ರೂ., ಸ್ವಂತ ಉದ್ಯೋಗಕ್ಕಾಗಿ ಬ್ಯಾಂಕ್ ಮೂಲಕ ಸಾಲ ಪಡೆದ ಫಲಾನುಭವಿಗಳಿಗೆ ಸಹಾಯ ಧನ, ದೀರ್ಘಕಾಲದ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿರುವವರಿಗೆ ವೈದ್ಯಕೀಯ ಧನ ಸಹಾಯ ರೂ. ೧.೧೮ ಲಕ್ಷ,

ಅಂಗವಿಕಲರ ಕಲ್ಯಾಣ ಕಾರ್ಯಕ್ರಮ: ಅಂಗವಿಕಲರಿಗೆ ಪೋಷಣಾ ವೆಚ್ಚ ಪಾವತಿಸಲು ಸಹಾಯಧನ ರೂ. ೩.೫೬ ಲಕ್ಷ, ಅಂಗವಿಕಲರ ಅಭಿವೃದ್ಧಿ ಕಾರ್ಯಕ್ರಮಗಳಿಗಾಗಿ ಸಹಾಯಧನ ರೂ. ೨.೦೩ ಲಕ್ಷ.

ಪರಿಶಿಷ್ಟ ಜಾತಿ ಕಲ್ಯಾಣ ಕಾರ್ಯಕ್ರಮ: ಆಯ್ದ ಪರಿಶಿಷ್ಟ ಜಾತಿ ಜನಾಂಗದವರ ಪಕ್ಕಾ ಮನೆ ನಿರ್ಮಾಣ ಹಾಗೂ ಮೇಲ್ಚಾವಣಿ ದುರಸ್ತಿ, ಸಾಮಗ್ರಿ ಅಥವಾ ಅವಶ್ಯ ಸಾಮಗ್ರಿಗಾಗಿ ಸಹಾಯ ಧನ ೪.೭೨ ಲಕ್ಷ ರೂ., ಸಣ್ಣ ಉದ್ದಿಮೆದಾರರಿಗೆ ಸಹಾಯಧನ ರೂ. ೧ ಲಕ್ಷ, ಆಯ್ದ ಪರಿಶಿಷ್ಟ ಜಾತಿ ಜನಾಂಗದವರಿಗೆ ಡ್ರೆöÊವಿಂಗ್ ತರಬೇತಿ ನೀಡಲು ೦.೬೬ ರೂ.

ಪರಿಶಿಷ್ಟ ಪಂಗಡ ಕಲ್ಯಾಣ ಕಾರ್ಯಕ್ರಮ: ಆಯ್ದ ಪರಿಶಿಷ್ಟ ಪಂಗಡ ಜನಾಂಗದವರ ಫಲಾನುಭವಿಯ ಪಕ್ಕಾ ಮನೆ ನಿರ್ಮಾಣ ಹಾಗೂ ಮೇಲ್ಛಾವಣಿ ದುರಸ್ತಿ, ಸಾಮಗ್ರಿ ಅಥವಾ ಅವಶ್ಯ ಸಾಮಗ್ರಿಗಾಗಿ ಸಹಾಯ ಧನ ರೂ. ೧.೯ ಲಕ್ಷ, ಆಯ್ದ ಪರಿಶಿಷ್ಟ ಪಂಗಡ ಜನಾಂಗದವರಿಗೆ ಡ್ರೆöÊವಿಂಗ್ ತರಬೇತಿ ನೀಡಲು ಅನುದಾನಿತ ಮೊತ್ತ ರೂ.೦.೬೦

ಅರ್ಜಿ ಸಲ್ಲಿಸಲು ತಾ. ೧೨ ಕೊನೆ ದಿನವಾಗಿದೆ. ಸಲ್ಲಿಸಬೇಕಾದ ದಾಖಲಾತಿಗಳು: ಜಾತಿ ಪ್ರಮಾಣಪತ್ರ, ಪ್ರಸಕ್ತ ಸಾಲಿನ ಆದಾಯ ಪ್ರಮಾಣಪತ್ರ, ಮತದಾರರ ಗುರುತಿನ ಚೀಟಿ, ಆಧಾರ್ ಕಾರ್ಡ್, ನಮೂನೆ-೩ ಮನೆಯ ಫೋಟೋ, ಬ್ಯಾಂಕ್ ಪಾಸ್ ಪುಸ್ತಕ ಪ್ರತಿ, ಪಡಿತರ ಚೀಟಿ, ಛಾಯಾಚಿತ್ರ ಸಂಬAಧಿತ ದಾಖಲಾತಿಗಳು ಹಾಗೂ ಮುಂದೆ ಅಗತ್ಯ ಪಡಿಸಬಹುದಾದ ಇತರೆ ದಾಖಲೆಗಳನ್ನು ನೀಡುವ ಷರತ್ತಿಗೆ ಒಳಪಡಿಸಿದೆ. ಹೆಚ್ಚಿನ ಮಾಹಿತಿಗೆ ಕಚೇರಿ ವೇಳೆಯಲ್ಲಿ ಮಡಿಕೇರಿ ನಗರಸಭೆ ನಲ್ಮ್ ವಿಭಾಗವನ್ನು ಸಂಪರ್ಕಿಸಬಹುದು ಎಂದು ನಗರಸಭೆ ಪೌರಾಯುಕ್ತ ವಿಜಯ್ ತಿಳಿಸಿದ್ದಾರೆ.

ವಿದ್ಯಾರ್ಥಿ ನಿಲಯ ಪ್ರವೇಶಕ್ಕೆ

ಕೊಡಗು ಜಿಲ್ಲೆಯಲ್ಲಿನ ಸಮಾಜ ಕಲ್ಯಾಣ ಇಲಾಖೆಯ ಪರಿಶಿಷ್ಟ ಜಾತಿ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳಿಗೆ ೨೦೨೪-೨೫ನೇ ಸಾಲಿಗೆ ಆಸಕ್ತ ಮತ್ತು ಅರ್ಹ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಂದ ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ.

ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯಗಳಿಗೆ ೫ನೇ ತರಗತಿಯಿಂದ ೧೦ನೇ ತರಗತಿಯವರೆಗೆ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಅರ್ಜಿಗಳನ್ನು ಆನ್‌ಲೈನ್ ಮುಖಾಂತರ ಸಲ್ಲಿಸಬಹುದಾಗಿದೆ. ವಿದ್ಯಾರ್ಥಿ ನಿಲಯಗಳಲ್ಲಿ ವಸತಿ, ಊಟ-ತಿಂಡಿ, ಪುಸ್ತಕ, ಸಮವಸ್ತç ಹಾಗೂ ಇತರೆ ನಿಲಯಗಳಲ್ಲಿ ಲಭ್ಯವಾಗುವ ಮೂಲಭೂತ ಸೌಲಭ್ಯಗಳು ಸಂಪೂರ್ಣ ಉಚಿತವಾಗಿದೆ. ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ ಮತ್ತು ಹಿಂದುಳಿದ ಹಾಗೂ ಅಲ್ಪಸಂಖ್ಯಾತರ ವಿದ್ಯಾರ್ಥಿಗಳು ಸಹ ನಿಲಯಗಳಿಗೆ ಪ್ರವೇಶ ಪಡೆಯಲು ಕೂಡ ನಿಯಮಾನುಸಾರ ಅರ್ಹರಾಗಿದ್ದಾರೆ.

ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳಿಗೆ ಪ್ರಥಮ ಪಿಯುಸಿಯಿಂದ ವಿವಿಧ ಪದವಿ ಹಾಗೂ ವೃತ್ತಿಪರ ಕೋರ್ಸ್ಗಳನ್ನು ಒಳಗೊಂಡAತೆ ಪ್ರವೇಶಾತಿ ಕಲ್ಪಿಸಲಾಗುವುದು.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸಮಾಜ ಕಲ್ಯಾಣ ಇಲಾಖೆಯ ವೆಬ್‌ಸೈಟ್ ತಿತಿತಿ.sತಿ.ಞಚಿಡಿ.ಟಿiಛಿ.iಟಿ ನ ಊಒIS ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಿ, ನಂತರ ಆನ್‌ಲೈನ್ ಪ್ರತಿಯೊಂದಿಗೆ ಆಧಾರ್ ಕಾರ್ಡ್, ಜಾತಿ, ಆದಾಯ ಪ್ರಮಾಣ ಪತ್ರ ಹಾಗೂ ಮಾರ್ಕ್ಸ್ ಕಾರ್ಡ್ನ ಜೆರಾಕ್ಸ್ ಪ್ರತಿಗಳನ್ನು ಸಂಬAಧಿಸಿದ ನಿಲಯಗಳ ವಾರ್ಡನ್‌ರವರಿಗೆ ಸಲ್ಲಿಸುವುದು. ಒಂದು ವೇಳೆ ಊಒIS ಪೋರ್ಟಲ್‌ನಲ್ಲಿ ಅರ್ಜಿ ಸಲ್ಲಿಸಲು ಸಾಧ್ಯವಾಗದಿದ್ದಲ್ಲಿ, ವಿದ್ಯಾರ್ಥಿಗಳು ಒಚಿಟಿuಚಿಟ ಮುಖೇನ ಅರ್ಜಿಯನ್ನು ನೇರವಾಗಿ ವಿದ್ಯಾರ್ಥಿ ನಿಲಯಕ್ಕೆ ತಾ. ೧೫ ರೊಳಗೆ ನೀಡಿ ಪ್ರವೇಶ ಪಡೆಯಬಹುದಾಗಿರುತ್ತದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಶೇಖರ್ ತಿಳಿಸಿದ್ದಾರೆ.

ಫಲಾನುಭವಿ ಆಧಾರಿತ ಯೋಜನೆಗಳಿಗೆ

ವಿಶೇಷಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯು ೧೩ ಫಲಾನುಭವಿ ಆಧಾರಿತ ಯೋಜನೆಗಳನ್ನು ೨೦೨೪-೨೫ನೇ ಸಾಲಿನಲ್ಲಿ ಸೇವಾ ಸಿಂಧು, ಗ್ರಾಮ ಒನ್, ಕರ್ನಾಟಕ ಒನ್ ಆನ್‌ಲೈನ್ ವೇದಿಕೆ ತಂತ್ರಾAಶದಡಿ ಅಳವಡಿಸಲಾಗಿದೆ. ಆದ್ದರಿಂದ ಈ ಯೋಜನೆಗಳನ್ನು ಆನ್‌ಲೈನ್ ಮೂಲಕ ಅನುಷ್ಠಾನಗೊಳಿಸುವ ಉದ್ದೇಶದಿಂದ ವಿಶೇಷಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ೧೩ ಫಲಾನುಭವಿ ಆಧಾರಿತ ಯೋಜನೆಗಳಿಗೆ ೨೦೨೪-೨೫ನೇ ಸಾಲಿಗೆ ವಿಶೇಷಚೇತನ ಫಲಾನುಭವಿಗಳು ಆನ್‌ಲೈನ್ ಮೂಲಕ (hಣಣಠಿs://sevಚಿsiಟಿಜhu.ಞಚಿಡಿಟಿಚಿಣಚಿಞಚಿ.gov.iಟಿ/Sevಚಿsiಟಿಜhu/ಆeಠಿಚಿಡಿಣmeಟಿಣSeಡಿviಛಿesಏಚಿಟಿಟಿಚಿಜಚಿ ಅರ್ಜಿ ಸಲ್ಲಿಸುವಂತೆ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ತಿಳಿಸಿದ್ದಾರೆ.

ಯೋಜನೆಯ ವಿವರ: ಪ್ರತಿಭಾವಂತ ವಿಶೇಷಚೇತನ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ಯೋಜನೆ, ಶಿಶುಪಾಲನಾ ಭತ್ಯೆ, ನಿರುದ್ಯೋಗ ಭತ್ಯೆ, ಆಧಾರ ಯೋಜನೆ, ಮರಣ ಪರಿಹಾರ ನಿಧಿ, ಸಾಧನೆ ಯೋಜನೆ, ಪ್ರತಿಭೆ ಯೋಜನೆ, ವೈದ್ಯಕೀಯ ಪರಿಹಾರ ನಿಧಿ ಯೋಜನೆ, ಅಂಧ ವಿದ್ಯಾರ್ಥಿಗಳಿಗೆ ಟಾಕಿಂಗ್ ಲ್ಯಾಪ್‌ಟಾಪ್, ದೈಹಿಕ ವಿಶೇಷಚೇತನರಿಗೆ ಯಂತ್ರಚಾಲಿತ ದ್ವಿಚಕ್ರ ವಾಹನ ಯೋಜನೆ, ಶ್ರವಣದೋಷವುಳ್ಳ ವ್ಯಕ್ತಿಗಳಿಗೆ ಸ್ವಯಂ ಉದ್ಯೋಗಕ್ಕಾಗಿ ಹೊಲಿಗೆ ಯಂತ್ರ ಯೋಜನೆ, ದೃಷ್ಟಿದೋಷ ಹೊಂದಿರುವ ವಿಶೇಷಚೇತನರಿಗೆ ಬ್ರೆöÊಲ್ ಕಿಟ್ ಯೋಜನೆ ಹಾಗೂ ಸಾಧನ ಸಲಕರಣೆ ಯೋಜನೆ.

ಹೆಚ್ಚಿನ ಮಾಹಿತಿಗೆ ಜಿಲ್ಲೆಯ ಗ್ರಾಮ ಪಂಚಾಯಿತಿಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ವಿಆರ್‌ಡಬ್ಲುö್ಯ ಹಾಗೂ ತಾಲೂಕು ಪಂಚಾಯಿತಿಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಎಂಆರ್‌ಡಬ್ಲುö್ಯಗಳಾದ ಸೋಮವಾರಪೇಟೆ ಹಾಗೂ ಕುಶಾಲನಗರ ತಾಲೂಕಿನವರು ಹರೀಶ್ ಟಿ.ಆರ್. ಮೊ. ೮೮೬೧೪೨೮೯೩೧, ವೀರಾಜಪೇಟೆ ಮತ್ತು ಪೊನ್ನಂಪೇಟೆ ತಾಲೂಕಿನವರು ಪ್ರಥನ್ ಕುಮಾರ್ ಸಿ.ಬಿ. ಮೊ. ೯೯೦೦೮೮೩೬೫೪ ಹಾಗೂ ಮಡಿಕೇರಿ ತಾಲೂಕಿನವರು ರಾಜೇಶ್ ಮೊ. ೮೦೭೩೯೨೯೧೪ ಸಂಖ್ಯೆಗಳನ್ನು ಹಾಗೂ ಕಚೇರಿ ದೂರವಾಣಿ ಸಂಖ್ಯೆ. ೦೮೨೭೨-೨೯೫೮೨೯ನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ವಿಮಲ ತಿಳಿಸಿದ್ದಾರೆ.