ಮಡಿಕೇರಿ, ಜು. ೭: ತಾಲೂಕು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್, ಜಿಲ್ಲಾ ಜನಜಾಗೃತಿ ವೇದಿಕೆ, ಪ್ರಗತಿಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟ, ಮಡಿಕೇರಿ ಮತ್ತು ಸರಕಾರಿ ಪದವಿ ಪೂರ್ವ ಕಾಲೇಜು ಸಂಯುಕ್ತ ಆಶ್ರಯದಲ್ಲಿ ಮಾದಕ ವ್ಯಸನ ವಿರೋಧಿ ದಿನಾಚರಣೆ ಅಂಗವಾಗಿ ವಿದ್ಯಾರ್ಥಿಗಳಿಗೆ ಜಾಗೃತಿ ಕಾರ್ಯಕ್ರಮವನ್ನು ನಡೆಸಲಾಯಿತು.

ಮಾಜಿ ನಗರಸಭಾ ಸದಸ್ಯ ಜಿಲ್ಲಾ ಜನಜಾಗೃತಿ ವೇದಿಕೆ ಸದಸ್ಯ ಟಿ.ಎಂ. ಅಯ್ಯಪ್ಪ, ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಉತ್ತಮ ಸ್ನೇಹಿತರನ್ನು ಹೊಂದುವುದರಿAದ ಸಮಾಜದಲ್ಲಿ ಉತ್ತಮ ಪ್ರಜೆಯಾಗಿ ಬಾಳಬಹುದು. ವಿದ್ಯಾರ್ಥಿಗಳು ಈ ವಯಸ್ಸಿನಲ್ಲಿಯೇ ಜಾಗೃತರಾಗಬೇಕು. ಯುವಶಕ್ತಿ ದೇಶದ ಭವಿಷ್ಯ ಎಂದು ಕರೆ ನೀಡಿದರು.

ಕಾಲೇಜಿನ ಉಪನ್ಯಾಸಕ ಚಿದಾನಂದ ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ವಹಿಸಿ ಮಾತನಾಡಿ, ಕಾಲೇಜು ಜೀವನದಲ್ಲಿ ವಿದ್ಯಾರ್ಥಿಗಳ ಮನಸ್ಸು ತುಂಬಾ ಚಂಚಲ ಸ್ಥಿತಿಯಲ್ಲಿರುತ್ತದೆ. ಈ ಹಂತದಲ್ಲಿ ವಿದ್ಯಾರ್ಥಿಗಳು ತಮ್ಮ ಮನಸ್ಸನ್ನು ಹತೋಟಿಗೆ ತಂದುಕೊಳ್ಳುವುದು ಅನಿವಾರ್ಯತೆ ಇದೆ. ವಿದ್ಯಾರ್ಥಿಗಳೇ ಉತ್ತಮ ಸಮಾಜದ ಆಸ್ತಿ ಎಂದರು.

ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಶಿಬಿರಾಧಿಕಾರಿ ನಂದಕುಮಾರ್ ಪಿ.ಪಿ. ಇವರು ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿ, ಇದುವರೆಗೆ ಕರ್ನಾಟಕ ರಾಜ್ಯದ ೧೭,೩೧೬ ಶಾಲಾ ಕಾಲೇಜುಗಳಲ್ಲಿ ಜಾಗೃತಿ ಮತ್ತು ಮಾಹಿತಿ ಕಾರ್ಯಕ್ರಮವನ್ನು ನಡೆಸಿ ೨೦ ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಇದರ ಸದುಪಯೋಗವನ್ನು ಪಡೆದುಕೊಂಡಿದ್ದಾರೆ ಎಂದರು. ಅತಿಯಾದ ಮೊಬೈಲ್ ಬಳಕೆಯಿಂದಲೂ ದೂರವಿರಬೇಕು. ವಿದ್ಯಾರ್ಥಿಗಳು ಇದರ ಬಗ್ಗೆಯೂ ಗಮನಹರಿಸಬೇಕು ಎಂದರು.

ಆರೋಗ್ಯವAತ ಶರೀರವೇ ಆತ್ಮದ ಅರಮನೆ, ಅನಾರೋಗ್ಯವಂತ ಶರೀರವೇ ಆತ್ಮದ ಸೆರೆಮನೆ. ಆರೋಗ್ಯಪೂರ್ಣ ಸಮಾಜ ಅಥವಾ ದುಶ್ಚಟಮುಕ್ತ ಸಮಾಜ ನಿರ್ಮಾಣ ನಮ್ಮೆಲ್ಲರ ಹೊಣೆ. ಬಹುತೇಕ ಯುವಜನತೆ ಬಾಹ್ಯ ವ್ಯಕ್ತಿಗಳ ಪ್ರಭಾವದಿಂದ ದುಶ್ಚಟಗಳಿಗೆ ದಾಸರಾಗುತ್ತಿದ್ದು, ಇದನ್ನು ತಡೆಗಟ್ಟಲು ಸಂಕಲ್ಪ ಮಾಡೋಣ ಎಂದು ಪ್ರತಿಜ್ಞಾ ವಿಧಿ ಬೋಧಿಸಲಾಯಿತು.

ಕಾರ್ಯಕ್ರಮದ ವೇದಿಕೆಯಲ್ಲಿ ಮಹದೇವಪೇಟೆ ಒಕ್ಕೂಟದ ಅಧ್ಯಕ್ಷೆ ಸುಭಾಷಿಣಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಬೆಟ್ಟಗೇರಿ ವಲಯದ ಮೇಲ್ವಿಚಾರಕಿ ವಿದ್ಯಾ, ಕಾಲೇಜು ಪ್ರಾಂಶುಪಾಲ ವಿಜಯನ್, ಉಪನ್ಯಾಸಕ ವೃಂದದವರು, ಸಿಬ್ಬಂದಿ ವರ್ಗ ಮತ್ತು ಸೇವಾಪ್ರತಿನಿಧಿ ಲಕ್ಷಿö್ಮ ಹಾಜರಿದ್ದರು.

ಕಾರ್ಯಕ್ರಮವನ್ನು ವಿದ್ಯಾರ್ಥಿನಿಯರಾದ ಅರ್ಪಿತಾ ಮತ್ತು ಬೀಬಿ ಪ್ರಾರ್ಥಿಸಿ, ಸೇವಾ ಪ್ರತಿನಿಧಿ ವಿಜಯಲಕ್ಷಿö್ಮ ಸ್ವಾಗತಿಸಿ, ಮೇಲ್ವಿಚಾರಕಿ ವಿದ್ಯಾ ನಿರ್ವಹಿಸಿ, ಸೇವಾ ಪ್ರತಿನಿಧಿ ಜಯಶೀಲ ವಂದಿಸಿದರು.