ಕೂಡಿಗೆ, ಜು. ೭: ಕೂಡು ಮಂಗಳೂರು ಸರ್ಕಾರಿ ಪ್ರೌಢಶಾಲೆಯಲ್ಲಿ ಶಾಲೆಯ ಜೆ.ಸಿ. ಬೋಸ್ ಇಕೋ ಕ್ಲಬ್, ವಿಜ್ಞಾನ ಸಂಘ, ಎನ್.ಎಸ್. ಎಸ್. ಘಟಕ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಘಟಕ, ರೆಡ್ ರಿಬ್ಬನ್ ಕ್ಲಬ್ ಹಾಗೂ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ಘಟಕದ ವತಿಯಿಂದ ಅರಣ್ಯ ಇಲಾಖೆಯ ಸಹಯೋಗದೊಂದಿಗೆ ಶಾಲಾ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಜತೆಗೂಡಿ ಸಸಿ ನೆಟ್ಟು ವನಮಹೋತ್ಸವನ್ನು ಆಚರಿಸಿದರು.

ವನಮಹೋತ್ಸವ ಆಚರಣೆಯ ಮಹತ್ವ ಕುರಿತು ಮಾತನಾಡಿದ ಶಾಲಾ ಮುಖ್ಯ ಶಿಕ್ಷಕರೂ ಆದ ರಾಷ್ಟಿçÃಯ ಹಸಿರು ಪಡೆಯ ನೋಡಲ್ ಅಧಿಕಾರಿ ಟಿ.ಜಿ. ಪ್ರೇಮಕುಮಾರ್, ವನಮಹೋತ್ಸವ ಅಥವಾ ಅರಣ್ಯ ಉತ್ಸವವು ಅರಣ್ಯ ಸಂರಕ್ಷಣೆ ಬಗ್ಗೆ ಜಾಗೃತಿ ಮೂಡಿಸಲು ಜುಲೈ ತಿಂಗಳಲ್ಲಿ ಆಚರಿಸಲಾಗುವ ವಾರ್ಷಿಕ ಗಿಡ ನೆಟ್ಟು ಬೆಳೆಸುವ ಹಬ್ಬವಾಗಿದ್ದು, ಇದರಲ್ಲಿ ದೇಶದಾದ್ಯಂತ ಸಾವಿರಾರು ಮರಗಳನ್ನು ನೆಡಲಾಗುತ್ತದೆ ಎಂದರು.

ವರ್ಷದಿAದ ವರ್ಷಕ್ಕೆ ಮಳೆ ಪ್ರಮಾಣ ಕ್ಷೀಣಿಸುತ್ತಿದೆ. ಹೀಗಾಗಿ ಪ್ರತಿಯೊಬ್ಬರೂ ತಮ್ಮ ತಮ್ಮ ಮನೆ, ಜಮೀನುಗಳಲ್ಲಿ ಸಸಿಗಳನ್ನು ನೆಟ್ಟು ಪೋಷಿಸುವ ಮೂಲಕ ಅರಣ್ಯ ಸಂಪತ್ತು ವೃದ್ಧಿಸುವ ನಿಟ್ಟಿನಲ್ಲಿ ಶ್ರಮಿಸಿದರೆ, ಖಂಡಿತಾ ಬರಗಾಲ ಅಳಿಸಬಹುದಾಗಿದೆ. ಅರಣ್ಯ ಬೆಳೆಸಲು ನಾವು ನಮ್ಮ ಪಾಲಿನ ಕೆಲಸವನ್ನು ನಾವೂ ಮಾಡಬೇಕು ಎಂದರು.

ವನಮಹೋತ್ಸವ ಆರಂಭದ ಕುರಿತು ಮಾತನಾಡಿದ ಇಕೋ ಕ್ಲಬ್‌ನ ಉಸ್ತುವಾರಿ ಶಿಕ್ಷಕಿ ಬಿ.ಡಿ. ರಮ್ಯ, ಅರಣ್ಯ ಗಿಡಗಳನ್ನು ನೆಡಲು ವಿದ್ಯಾರ್ಥಿಗಳು ಹಾಗೂ ಜನರನ್ನು ಪ್ರೋತ್ಸಾಹಿಸಲು ಸರ್ಕಾರವು ವಿವಿಧ ಹಂತಗಳಲ್ಲಿ ವಿವಿಧ ನೆಡುತೋಪು ಅಭಿಯಾ ನಗಳನ್ನು ಆಯೋಜಿಸುತ್ತಿದೆ. ಪ್ರತಿ ವಿದ್ಯಾರ್ಥಿಯೂ ಪ್ರಕೃತಿ ಮಾತೆಯಾದ ತಮ್ಮ ತಾಯಿ ಹೆಸರಿನಲ್ಲಿ ಒಂದು ಗಿಡ ನೆಟ್ಟು ಪೋಷಿಸುವ ಸಂಕಲ್ಪ ಮಾಡಬೇಕು ಎಂದು ಸಲಹೆ ನೀಡಿದರು. ವಿದ್ಯಾರ್ಥಿಗಳಿಗೆ ಪರಿಸರ ಪ್ರತಿಜ್ಞಾ ವಿಧಿ ಬೋಧಿಸಿದ ಜಿಲ್ಲಾ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಸಂಘಟನಾ ಕಾರ್ಯದರ್ಶಿ ಎಂ.ಟಿ. ದಯಾನಂದ ಪ್ರಕಾಶ್, ವಿದ್ಯಾರ್ಥಿಗಳು ಪರಿಸರ ಸಂರಕ್ಷಣೆಯಲ್ಲಿ ತೊಡಗಿ ಉತ್ತಮ ಪರಿಸರ ನಿರ್ಮಾಣಕ್ಕೆ ಪಣ ತೊಡಬೇಕು ಎಂದರು.

ಶಾಲೆಯ ಶಿಕ್ಷಕರಾದ ಬಿ.ಎನ್. ಸುಜಾತ, ಅನ್ಸಿಲಾ ರೇಖಾ, ಕೆ.ಟಿ. ಸೌಮ್ಯ, ಸಿಬ್ಬಂದಿ ಎಂ. ಉಷಾ, ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ವಿದ್ಯಾರ್ಥಿಗಳು ಅರಣ್ಯ ಮತ್ತು ಪರಿಸರ ಸಂರಕ್ಷಣೆಗಾಗಿ ತಮ್ಮನ್ನು ತೊಡಗಿಸಿಕೊಳ್ಳುವುದಾಗಿ ಪ್ರತಿಜ್ಞಾ ವಿಧಿ ಸ್ವೀಕರಿಸಿದರು.

ವಿದ್ಯಾರ್ಥಿಗಳು ಅರಣ್ಯ ಮತ್ತು ಪರಿಸರ ಸಂರಕ್ಷಣೆಗೆ ಸಂಬAಧಿಸಿದAತೆ ವಿವಿಧ ಘೋಷಣೆಗಳ ಫಲಕಗಳನ್ನು ಹಿಡಿದು ಘೋಷಣೆಗಳನ್ನು ಪ್ರಚುರಪಡಿಸಿದರು.

ಹಸಿರೇ ಉಸಿರು, ಅರಣ್ಯ ಸಂರಕ್ಷಣೆ ನಮ್ಮೆಲ್ಲರ ಹೊಣೆ, ಕಾಡೇ ರಾಷ್ಟçದ ಸಂಪತ್ತು, ಮಳೆಗಾಗಿ ಅರಣ್ಯ, ನೀರಿಗಾಗಿ ಅರಣ್ಯ ಸಂರಕ್ಷಣೆ ಮುಂತಾದ ಘೋಷವಾಕ್ಯಗಳನ್ನು ವಿದ್ಯಾರ್ಥಿಗಳು ಪ್ರಚುರಪಡಿಸಿದರು.