ಆರೋಗ್ಯ ತುರ್ತು ಪರಿಸ್ಥಿತಿ ಘೋಷಿಸಿ - ಅಶೋಕ್

ಬೆಂಗಳೂರು, ಜು. ೭: ರಾಜ್ಯದಲ್ಲಿ ಡೆಂಗ್ಯೂ ಪ್ರಕರಣ ಹೆಚ್ಚಳ ಹಿನ್ನೆಲೆ ಆರೋಗ್ಯ ತುರ್ತು ಪರಿಸ್ಥಿತಿ ಘೋಷಿಸಿ, ಜನರಿಗೆ ಉಚಿತವಾಗಿ ಸರ್ಕಾರದಿಂದಲೇ ಪರೀಕ್ಷೆ ಮಾಡಿಸಬೇಕು ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಆಗ್ರಹಿಸಿದ್ದಾರೆ. ಜಯನಗರ ಸಾರ್ವಜನಿಕ ಆಸ್ಪತ್ರೆಗೆ ತೆರಳಿ ಡೆಂಗ್ಯೂ ರೋಗಿಗಳನ್ನು ಭೇಟಿ ಮಾಡಿ, ಸೌಲಭ್ಯ ಪರಿಶೀಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡೆಂಗ್ಯೂ ರೋಗ ಹೆಚ್ಚಾಗಿ ಹರಡುವಾಗ ಸರ್ಕಾರ ಪ್ರತಿ ತಾಲೂಕಿನಲ್ಲಿ ಟಾಸ್ಕ್ಫೋರ್ಸ್ ರಚಿಸಿ ಔಷಧಿ ಪೂರೈಸುವ, ರೋಗ ನಿಯಂತ್ರಿಸುವ ಕ್ರಮಗಳನ್ನು ವಹಿಸಬೇಕಿತ್ತು. ಇವ್ಯಾವುದನ್ನೂ ಸರ್ಕಾರ ಮಾಡಿಲ್ಲ ಎಂದು ಆರೋಪಿಸಿದರು. ರಾಜ್ಯದಲ್ಲಿ ೨ ಲಕ್ಷಕ್ಕೂ ಹೆಚ್ಚು ಜನರು ಡೆಂಗ್ಯೂಗೆ ಒಳಗಾಗಿದ್ದಾರೆ. ಇವರಿಗೆ ಪರೀಕ್ಷೆ ವೆಚ್ಚವನ್ನು ಸರ್ಕಾರವೇ ಭರಿಸಬೇಕು. ತೈಲ ದರ ಏರಿಕೆ ಸೇರಿದಂತೆ ವಿವಿಧ ತೆರಿಗೆಗಳನ್ನು ಸರ್ಕಾರ ಹಾಕಿರುವಾಗ ಜನರಿಗೆ ಉಚಿತ ಪರೀಕ್ಷೆ ಮಾಡಿಸಲು ಸಾಧ್ಯವಿಲ್ಲವೇ? ಎಂದು ಪ್ರಶ್ನಿಸಿದರು. ಉಚಿತ ಪರೀಕ್ಷೆ ಮಾಡಿದರೆ ಸುಮಾರು ರೂ. ೧೦ ಕೋಟಿ ಖರ್ಚಾಗಬಹುದು. ಅಷ್ಟು ಹಣವನ್ನು ಮಂಜೂರು ಮಾಡಲು ಸಾಧ್ಯವೇ ಇಲ್ಲವೇ? ಅದಕ್ಕೂ ತೆರಿಗೆ ಹಾಕಬೇಕೆ? ಕೆಲ ಆರೋಗ್ಯ ಕೇಂದ್ರಗಳು ೧,೦೦೦ ರೂ.ವರೆಗೂ ಪರೀಕ್ಷಾ ಶುಲ್ಕ ವಿಧಿಸುತ್ತಿವೆ. ಆದ್ದರಿಂದ ಸರ್ಕಾರ ಕೂಡಲೇ ವೆಚ್ಚವನ್ನು ಭರಿಸಬೇಕು ಎಂದು ಆಗ್ರಹಿಸಿದರು.

ಕಾರ್ಯಾಚರಣೆಯಲ್ಲಿ ಆರು ಉಗ್ರರು ಹತ-ಇಬ್ಬರು ಯೋಧರು ಹುತಾತ್ಮ

ಶ್ರೀನಗರ, ಜು. ೭: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ನಡೆದ ಅವಳಿ ಎನ್‌ಕೌಂಟರ್‌ಗಳಲ್ಲಿ ಆರು ಉಗ್ರರು ಹತರಾಗಿದ್ದರೆ ಇಬ್ಬರು ಸೈನಿಕರು ಹುತಾತ್ಮರಾಗಿದ್ದಾರೆ. ಕುಲ್ಗಾಮ್‌ನಲ್ಲಿ ನಡೆದ ಅವಳಿ ಎನ್‌ಕೌಂಟರ್‌ನಲ್ಲಿ ಆರು ಉಗ್ರರನ್ನು ಹತ್ಯೆ ಮಾಡಲಾಗಿದೆ ಎಂದು ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ಆರ್‌ಆರ್ ಸ್ವೆöÊನ್ ಸುದ್ದಿಗಾರರಿಗೆ ತಿಳಿಸಿದ್ದಾರೆ. ಗ್ರಾಮದಲ್ಲಿ ಉಗ್ರರು ಅಡಗಿರುವ ಮಾಹಿತಿ ಮೇರೆಗೆ ಭದ್ರತಾ ಸಿಬ್ಬಂದಿ ಗ್ರಾಮದಲ್ಲಿ ಶೋಧ ಕಾರ್ಯಾಚರಣೆ ಆರಂಭಿಸಿದ ಬಳಿಕ ನಿನ್ನೆ ಮಧ್ಯಾಹ್ನ ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ಎನ್‌ಕೌಂಟರ್ ಆರಂಭವಾಗಿತ್ತು. ಮೊದರ್ಗಾಮ್ ಗ್ರಾಮದಲ್ಲಿ ಉಗ್ರರೊಂದಿಗಿನ ಆರಂಭಿಕ ಗುಂಡಿನ ಚಕಮಕಿಯಲ್ಲಿ ಹುತಾತ್ಮ ಯೋಧನನ್ನು ಪ್ಯಾರಾ ಕಮಾಂಡೋ ಲ್ಯಾನ್ಸ್ ನಾಯಕ್ ಪ್ರದೀಪ್ ನೈನ್ ಎಂದು ಗುರುತಿಸಲಾಗಿದೆ. ಕುಲ್ಗಾಮ್ ಜಿಲ್ಲೆಯ ಫ್ರಿಸಲ್ ಚಿನ್ನಿಗಮ್ ಪ್ರದೇಶದಲ್ಲಿ ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ ನಡೆಯಿತು. ಹೋರಾಟದಲ್ಲಿ, ನಾಲ್ವರು ಉಗ್ರಗಾಮಿಗಳು ಹತರಾಗಿದ್ದಾರೆ ಮತ್ತು ಅವರ ದೇಹಗಳು ಫ್ರಿಸಲ್ ಚಿನ್ನಿಗಮ್‌ನ ಎನ್‌ಕೌಂಟರ್ ಪ್ರದೇಶದಲ್ಲಿ ಸಿಕ್ಕಿವೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಎನ್‌ಕೌಂಟರ್‌ನಲ್ಲಿ ರಾಷ್ಟಿçÃಯ ರೈಫಲ್ಸ್ನ ಹವಾಲ್ದಾರ್ ರಾಜ್ ಕುಮಾರ್ ಎಂದು ಗುರುತಿಸಲಾದ ಸೇನಾಧಿಕಾರಿ ಹುತಾತ್ಮರಾಗಿದ್ದಾರೆ. ಎರಡೂ ಎನ್‌ಕೌಂಟರ್ ಸ್ಥಳಗಳಲ್ಲಿ ಉಗ್ರರ ಚಲನವಲನವನ್ನು ಪತ್ತೆಹಚ್ಚಲು ಭದ್ರತಾ ಅಧಿಕಾರಿಗಳು ಡ್ರೋನ್‌ಗಳನ್ನು ಬಳಸುತ್ತಿದ್ದಾರೆ. ಭದ್ರತಾ ಪಡೆಗಳು ಡ್ರೋನ್ ದೃಶ್ಯಗಳನ್ನು ಮೇಲ್ವಿಚಾರಣೆ ಮಾಡುತ್ತಿವೆ. ಕಾಶ್ಮೀರ ಐಜಿಪಿ ವಿ.ಕೆ. ಬಿರ್ಡಿ ಅವರು, ಎನ್‌ಕೌಂಟರ್ ಮುಕ್ತಾಯಗೊಂಡ ನಂತರ ಮತ್ತು ಮೃತದೇಹಗಳನ್ನು ವಶಪಡಿಸಿಕೊಂಡ ನಂತರವೇ ಅವಳಿ ಎನ್‌ಕೌಂಟರ್‌ಗಳಲ್ಲಿ ಕೊಲ್ಲಲ್ಪಟ್ಟ ಅಥವಾ ಸಿಕ್ಕಿಬಿದ್ದ ಭಯೋತ್ಪಾದಕರ ನಿಖರವಾದ ಸಂಖ್ಯೆ ಸಿಗುತ್ತದೆ ಎಂದಿದ್ದಾರೆ. ಅವಳಿ ಎನ್‌ಕೌಂಟರ್‌ಗಳಲ್ಲಿ ಹತರಾದ ಮತ್ತು ಸಿಕ್ಕಿಬಿದ್ದಿರುವ ಉಗ್ರರು ಹಿಜ್ಬುಲ್ ಮುಜಾಹಿದ್ದೀನ್ ಸಂಘಟನೆಗೆ ಸೇರಿದವರು ಎಂದು ಭದ್ರತಾ ಅಧಿಕಾರಿಗಳು ಶಂಕಿಸಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಗಡಿ ಜಿಲ್ಲೆಯ ರಜೌರಿಯ ಮಂಜಕೋಟೆ ಪ್ರದೇಶದ ಗಲುತಿ ಗ್ರಾಮದಲ್ಲಿ ಪ್ರಾದೇಶಿಕ ಸೇನೆಯು ನಿರ್ವಹಿಸುತ್ತಿದ್ದ ಪೋಸ್ಟ್ನ ಮೇಲೆ ಉಗ್ರರು ನಡೆಸಿದ ದಾಳಿಯಲ್ಲಿ ಯೋಧರೊಬ್ಬರು ಗಾಯಗೊಂಡಿದ್ದಾರೆ. ಅವರನ್ನು ಸೇನಾ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ದಾಳಿ ನಡೆಸಿದ ಉಗ್ರರ ಪತ್ತೆಗೆ ಭದ್ರತಾ ಪಡೆಗಳು ಗ್ರಾಮದಲ್ಲಿ ಶೋಧ ಕಾರ್ಯಾಚರಣೆ ಆರಂಭಿಸಿವೆ.

ರಾಜ್ಯದಲ್ಲಿ ಇಲಿ ಜ್ವರ ಪ್ರಕರಣ ಪತ್ತೆ

ಹಾವೇರಿ, ಜು. ೭: ರಾಜ್ಯದಲ್ಲಿ ಭೀತಿ ಹುಟ್ಟಿಸಿರುವ ಡೆಂಗ್ಯೂ ಜ್ವರದ ನಡುವೆಯೇ ಹಾವೇರಿಯಲ್ಲಿ ಇಲಿ ಜ್ವರ ಪತ್ತೆಯಾಗಿದ್ದು, ಸೋಂಕಿಗೀಡಾಗಿರುವ ೧೨ ವರ್ಷದ ಬಾಲಕನಿಗೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ. ಹಾವೇರಿ ತಾಲೂಕಿನ ಗ್ರಾಮವೊಂದರ ನಿವಾಸಿಯಾಗಿರುವ ೧೨ ವರ್ಷದ ಬಾಲಕನಲ್ಲಿ ಇಲಿ ಜ್ವರ ಪತ್ತೆಯಾಗಿದೆ. ಸದ್ಯ ಬಾಲಕನನ್ನು ಹಾವೇರಿ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಕಳೆದ ೧೫ ದಿನದಿಂದ ಜ್ವರದಿಂದ ಬಳಲುತ್ತಿದ್ದ ೧೨ ವರ್ಷದ ಬಾಲಕನಿಗೆ ದಿನ ಬಿಟ್ಟು ದಿನ ಜ್ವರ ಕಾಣಿಸಿಕೊಳ್ಳುತ್ತಿತ್ತು. ಹೀಗಾಗಿ ಬಾಲಕನಿಗೆ ಜಾಂಡೀಸ್ ಇದೆ ಎಂದು ರಕ್ತ ತಪಾಸಣೆ ಮಾಡಲಾಗಿದ್ದು ವರದಿಯಲ್ಲಿ ಇಲಿ ಜ್ವರ ದೃಢಪಟ್ಟಿದೆ.

ರೇಣುಕಸ್ವಾಮಿ ಕೊಲೆ ಪ್ರಕರಣ : ೨೦೦ಕ್ಕೂ ಹೆಚ್ಚು ಸಾಕ್ಷö್ಯ ಸಂಗ್ರಹ

ಬೆAಗಳೂರು, ಜು. ೭: ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ೨೦೦ಕ್ಕೂ ಹೆಚ್ಚು ಭೌತಿಕ, ತಾಂತ್ರಿಕ ಹಾಗೂ ವೈಜ್ಞಾನಿಕ ಸಾಕ್ಷ್ಯಗಳನ್ನು ತನಿಖಾಧಿಕಾರಿಗಳು ಸಂಗ್ರಹಿಸಿದ್ದಾರೆ ಎಂದು ಗೊತ್ತಾಗಿದೆ. ಸಾಕ್ಷಿದಾರರ ಹೇಳಿಕೆ ದಾಖಲು ಮಾಡಿಕೊಳ್ಳುವ ಪ್ರಕ್ರಿಯೆ ನಡೆಯುತ್ತಿದೆ. ಪ್ರಕರಣಕ್ಕೆ ಸಂಬAಧಿಸಿದವರ ವಿಚಾರಣೆ ಮುಂದುವರಿಸಲಾಗಿದೆ. ಶುಕ್ರವಾರ ಇಬ್ಬರ ವಿಚಾರಣೆ ನಡೆಸಲಾಗಿದ್ದು ಮತ್ತೆ ಇಬ್ಬರಿಗೆ ನೋಟಿಸ್ ನೀಡಲಾಗಿದೆ. ಆರೋಪಿಗಳಿಗೆ ಶಿಕ್ಷೆ ಆಗುವ ನಿಟ್ಟಿನಲ್ಲಿ ತನಿಖೆ ಬಿಗಿ ಮಾಡಲಾಗಿದೆ ಎಂದು ಪೊಲೀಸರು ಹೇಳಿದರು. ಸಂಗ್ರಹಿಸಿದ ಎಲ್ಲ ವಸ್ತುಗಳು ಹಾಗೂ ಮಾದರಿಗಳನ್ನು ಎಫ್‌ಎಸ್‌ಎಲ್‌ಗೆ ರವಾನೆ ಮಾಡಲಾಗಿದೆ. ವರದಿಯ ನಿರೀಕ್ಷೆಯಲ್ಲಿದ್ದೇವೆ ಎಂದು ಪೊಲೀಸರು ಹೇಳಿದರು.

ಬಿಎಸ್‌ಪಿ ಕಚೇರಿ ಎದುರು ಅಂತ್ಯಕ್ರಿಯೆಗೆ ನಿರಾಕರಣೆ

ಚೆನ್ನೆöÊ, ಜು. ೭: ದುಷ್ಕರ್ಮಿಗಳಿಂದ ಹತ್ಯೆಯಾದ ತಮಿಳುನಾಡಿನ ಬಿಎಸ್‌ಪಿ ರಾಜ್ಯ ಘಟಕದ ಅಧ್ಯಕ್ಷ ಕೆ.ಅರ್ಮ್ಸ್ಟಾçಂಗ್ ಅವರ ಪಾರ್ಥಿವ ಶರೀರದ ಅಂತ್ಯಕ್ರಿಯೆಯನ್ನು ಚೆನ್ನೆöÊನಲ್ಲಿರುವ ಪಕ್ಷದ ಕಚೇರಿಯ ಆವರಣದಲ್ಲಿ ನಡೆಸಲು ಮದ್ರಾಸ್ ಹೈಕೋರ್ಟ್ ಅನುಮತಿ ನಿರಾಕರಿಸಿದೆ. ಇದರ ಬದಲಾಗಿ ಪಕ್ಕದ ತಿರುವಳ್ಳೂರು ಜಿಲ್ಲೆಯಲ್ಲಿ ಅಂತ್ಯಕ್ರಿಯೆ ನಡೆಸಲು ನ್ಯಾಯಾಲಯ ಅವಕಾಶ ನೀಡಿದೆ. ಪಕ್ಷದ ಕಚೇರಿ ಆವರಣದಲ್ಲಿ ಅಂತ್ಯಕ್ರಿಯೆಗೆ ಅನುಮತಿ ಕೋರಿ ಅರ್ಮ್ಸ್ಟಾçಂಗ್ ಅವರ ಪತ್ನಿ ಹೈಕೋರ್ಟ್ ಮೊರೆ ಹೋಗಿದ್ದರು. ಈ ಅರ್ಜಿಯ ವಿಚಾರಣೆಯನ್ನು ನ್ಯಾಯಾಲಯ ಭಾನುವಾರ ನಡೆಸಿತು. ಪಕ್ಷದ ಕಚೇರಿಯು ಜನವಸತಿ ಪ್ರದೇಶದಲ್ಲಿದೆ, ಹೀಗಾಗಿ ಅಲ್ಲಿ ಅಂತ್ಯಕ್ರಿಯೆ ನಡೆಸುವುದು ಸರಿಯಲ್ಲ ಎಂದು ಸರ್ಕಾರ ಅರ್ಜಿಯನ್ನು ವಿರೋಧಿಸಿತು. ತಿರುವಳ್ಳೂರಿನಲ್ಲಿರುವ ಆರ್ಮ್ಸ್ಟಾçಂಗ್ ಅವರ ಸಂಬAಧಿಕರ ಜಮೀನಿನಲ್ಲಿ ಅಂತ್ಯಕ್ರಿಯೆ ನಡೆಸಲು ಅನುಮತಿ ನೀಡಿದ್ದು, ಈ ಸಂಬAಧ ಆದೇಶವನ್ನೂ ಹೊರಡಿಸಲಾಗಿದೆ ಎಂದು ಸರ್ಕಾರ ಹೇಳಿತು. ಇದಕ್ಕೆ ನ್ಯಾಯಾಲಯ ಸಮ್ಮತಿಸಿತು. ಆರ್ಮ್ಸ್ಟಾçಂಗ್ ಅವರ ಪತ್ನಿಯೂ ಅದನ್ನು ಒಪ್ಪಿಕೊಂಡರು.

ಇಸ್ರೇಲ್ ಪ್ರತಿಕ್ರಿಯೆಗೆ ಕಾಯುತ್ತಿರುವ ಹಮಾಸ್

ಕೈರೊ, ಜು. ೭: ಗಾಜಾದಲ್ಲಿ ಕದನ ವಿರಾಮ ಘೋಷಿಸುವ ಸಂಬAಧ ಇಸ್ರೇಲ್‌ನ ಪ್ರತಿಕ್ರಿಯೆಗೆ ಕಾಯುತ್ತಿರುವುದಾಗಿ ಹಮಾಸ್‌ನ ಇಬ್ಬರು ಅಧಿಕಾರಿಗಳು ಹೇಳಿದ್ದಾರೆ. ಇಸ್ರೇಲ್-ಹಮಾಸ್ ಯುದ್ಧ ಕೊನೆಗೊಳಿಸಲು ಅಮೇರಿಕಾವು ಮುಂದಿಟ್ಟಿದ್ದ ಕದನ ವಿರಾಮ ಪ್ರಸ್ತಾವದಲ್ಲಿದ್ದ ಕೆಲವು ಪ್ರಮುಖ ಅಂಶಗಳನ್ನು ಹಮಾಸ್ ಕಳೆದ ವಾರ ಒಪ್ಪಿಕೊಂಡಿತ್ತು. ಕದನ ವಿರಾಮಕ್ಕೆ ಸಂಬAಧಿಸಿದAತೆ ನಮ್ಮ ಅಭಿಪ್ರಾಯವನ್ನು ಮಧ್ಯಸ್ಥಗಾರರಿಗೆ ತಿಳಿಸಿದ್ದೇವೆ. ಇಸ್ರೇಲ್‌ನ ಪ್ರತಿಕ್ರಿಯೆಗಾಗಿ ಕಾಯುತ್ತಿದ್ದೇವೆ ಎಂದು ಹಮಾಸ್‌ನ ಅಧಿಕಾರಿಯೊಬ್ಬರು ತಿಳಿಸಿದರು. ಕದನ ವಿರಾಮಕ್ಕೆ ಸಂಬAಧಿಸಿದ ಮೂರು ಹಂತದ ಯೋಜನೆಯನ್ನು ಅಮೇರಿಕಾದ ಅಧ್ಯಕ್ಷ ಜೋ ಬೈಡನ್ ಅವರು ಮೇ ತಿಂಗಳ ಕೊನೆಯಲ್ಲಿ ಮುಂದಿಟ್ಟಿದ್ದರು. ಇದಕ್ಕೆ ಕತಾರ್ ಮತ್ತು ಈಜಿಪ್ಟ್ ದೇಶಗಳು ಮಧ್ಯಸ್ಥಿಕೆ ವಹಿಸಿವೆ. ಯುದ್ಧವನ್ನು ಕೊನೆಗಳಿಸುವ ಮತ್ತು ಹಮಾಸ್ ವಶದಲ್ಲಿರುವ ೧೨೦ ಒತ್ತೆಯಾಳುಗಳನ್ನು ಬಿಡುಗಡೆಗೊಳಿಸುವ ಗುರಿಯನ್ನು ಈ ಪ್ರಸ್ತಾವನೆ ಹೊಂದಿದೆ.