ಸೋಮವಾರಪೇಟೆ, ಜು. ೭: ವರ್ತಕರು ಸಂಘಟನಾತ್ಮಕವಾಗಿ ಒಂದಾಗಬೇಕು. ಆ ಮೂಲಕ ತಮ್ಮ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬಹುದು ಎಂದು ಜಿಲ್ಲಾ ಚೇಂಬರ್ ಆಫ್ ಕಾಮರ್ಸ್ ಆ್ಯಂಡ್ ಇಂಡಸ್ಟಿçÃಸ್‌ನ ಜಿಲ್ಲಾಧ್ಯಕ್ಷ ಬಿ.ಆರ್. ನಾಗೇಂದ್ರ ಪ್ರಸಾದ್ ಹೇಳಿದರು.

ಇಲ್ಲಿನ ಮಾನಸ ಸಭಾಂಗಣದಲ್ಲಿ ನಡೆದ ಸೋಮವಾರಪೇಟೆ ಸ್ಥಾನೀಯ ವರ್ತಕರ ಸಂಘದ ವಾರ್ಷಿಕ ಮಹಾಸಭೆಯಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಅವರು ಮಾತನಾಡಿದರು.

ಹೆಚ್ಚಿನ ವರ್ತಕರು ಇಂದಿಗೂ ಸ್ಥಳೀಯಾಡಳಿತದಿಂದ ತಮ್ಮ ವ್ಯಾಪಾರ ವಹಿವಾಟಿಗೆ ಸಂಬAಧಿಸಿದAತೆ ಅನುಮತಿ ಪತ್ರವನ್ನು ಪಡೆದುಕೊಂಡಿಲ್ಲ. ಕೂಡಲೇ ಸ್ಥಾನೀಯ ಸಮಿತಿ ವತಿಯಿಂದ ಪಟ್ಟಣ ಪಂಚಾಯಿತಿ ಸಹಯೋಗದೊಂದಿಗೆ ಕಾರ್ಯಾಗಾರವನ್ನು ಹಮ್ಮಿಕೊಂಡು ತಮ್ಮ ವ್ಯಾಪಾರ ವಹಿವಾಟಿಗೆ ಸಂಬAಧಿಸಿದAತೆ ಅನುಮತಿ ಪಡೆಯಲು ಮುಂದಾಗಬೇಕು ಎಂದರು.

ಚೇAಬರ್ ಆಫ್ ಕಾಮರ್ಸ್ನ ಮಾಜಿ ಅಧ್ಯಕ್ಷ ಮನುಕುಮಾರ್ ರೈ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ಸಂಘವು ನಡೆದು ಬಂದ ಹಾದಿ, ಪ್ರಸ್ತುತ ನಡೆಸುತ್ತಿರುವ ಕಾರ್ಯಚಟುವಟಿಕೆ, ಮುಂದಿನ ಯೋಜನೆಗಳ ಬಗ್ಗೆ ಸಭೆಯಲ್ಲಿ ಮಾಹಿತಿ ನೀಡಿದರು. ಮುಖ್ಯ ಅತಿಥಿಯಾಗಿದ್ದ ಕೊಡಗು ಜಿಲ್ಲಾ ವಾಣಿಜ್ಯೋದ್ಯಮಿಗಳ ವಿವಿಧೋದ್ಧೇಶ ಸಹಕಾರ ಸಂಘದ ಅಧ್ಯಕ್ಷ ಕೆ.ಕೆ. ಶ್ರೀನಿವಾಸ್ ಮಾತನಾಡಿ, ಮುಂದಿನ ದಿನಗಳಲ್ಲಿ ಸೋಮವಾರಪೇಟೆಯಲ್ಲಿ ಸಹಕಾರ ಸಂಘದ ಶಾಖೆ ತೆರೆಯಲು ಕ್ರಮವಹಿಸಲಾಗುವುದು ಎಂದರು.

ಸಭೆಯ ಅಧ್ಯಕ್ಷತೆಯನ್ನು ಚೇಂಬರ್ ಆಫ್ ಕಾಮರ್ಸ್ ಆಂಡ್ ಇಂಡಸ್ಟಿçÃಸ್‌ನ ಸೋಮವಾರಪೇಟೆ ಸ್ಥಾನೀಯ ಸಮಿತಿಯ ಅಧ್ಯಕ್ಷ ಜಿ.ಕೆ. ಧನುರಾಜ್ ವಹಿಸಿದ್ದರು. ವೇದಿಕೆಯಲ್ಲಿ ಜಿಲ್ಲಾ ಉಪಾಧ್ಯಕ್ಷ ತಿಮ್ಮಶೆಟ್ಟಿ, ರವಿಕುಮಾರ್, ನಿರ್ದೇಶಕ ಎ.ಪಿ. ವೀರರಾಜು ಸೇರಿದಂತೆ ಇತರರು ಉಪಸ್ಥಿತರಿದ್ದರು.

ಇದೇ ಸಂದರ್ಭ ಕೊಡಗು ಜಿಲ್ಲಾ ವಾಣಿಜ್ಯೋದ್ಯಮಿಗಳ ವಿವಿಧೋದ್ಧೇಶ ಸಹಕಾರ ಸಂಘದಿAದ, ಸೋಮವಾರಪೇಟೆ ಸ್ಥಾನೀಯ ಸಮಿತಿಯ ನೂತನ ಕಟ್ಟಡ ನಿರ್ಮಾಣಕ್ಕೆ ರೂ. ೨೫ ಸಾವಿರ ಹಾಗೂ ಉದ್ಯಮಿ ಬಿ.ಎಸ್. ಸುಂದರ್ ಅವರು ರೂ. ೧ ಲಕ್ಷ ದೇಣಿಗೆಯನ್ನು ನೀಡುವುದಾಗಿ ಘೋಷಿಸಿದರು. ಸಂಘದ ಪದಾಧಿಕಾರಿಗಳಾದ ರಾಂಶೆಟ್ಟಿ ಸ್ವಾಗತಿಸಿ, ತಿಮ್ಮಶೆಟ್ಟಿ ವಂದಿಸಿದರು. ಕೆ.ಎನ್. ಜಗದೀಶ್ ಲೆಕ್ಕಪತ್ರ ಮಂಡಿಸಿದರು. ದೀಪಿಕಾ ಪ್ರಾರ್ಥಿಸಿ, ಕೆ.ಪಿ.ಸುದರ್ಶನ್ ವಾರ್ಷಿಕ ವರದಿ ವಾಚಿಸಿದರು. ಸಭೆಯಲ್ಲಿ ಉದ್ಯಮಿಗಳಾದ ರಾಮೇಗೌಡ, ಬಿ.ಎನ್. ಮಂಜುನಾಥ್ ಹಾಗೂ ಬಿ.ಆರ್. ಪ್ರಮೋದ್ ಹಾಗೂ ವರ್ತಕರ ಸಂಘದ ಕಚೇರಿ ಸಿಬ್ಬಂದಿಯಾಗಿದ್ದ ಅಕ್ಕಮ್ಮ ಅವರುಗಳನ್ನು ಸನ್ಮಾನಿಸಲಾಯಿತು. ೨೦೨೩-೨೪ನೇ ಸಾಲಿನಲಿ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಯಲ್ಲಿ ಹೆಚ್ಚಿನ ಅಂಕ ಗಳಿಸಿದ ಸದಸ್ಯರ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ವಿತರಿಸಲಾಯಿತು.