ಮಡಿಕೇರಿ, ಜು. ೮: ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ (ದಿಶಾ) ಸಭೆಯು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರ ಅಧ್ಯಕ್ಷತೆಯಲ್ಲಿ, ಕೊಡಗು ಜಿಲ್ಲಾ ಪಂಚಾಯಿತಿಯ ಮುಖ್ಯ ಸಭಾಂಗಣದಲ್ಲಿ ತಾ. ೧೧ ರಂದು ಬೆಳಿಗ್ಗೆ ೧೧ ಗಂಟೆಗೆ ನಡೆಯಲಿದೆ ಎಂದು ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಸದಸ್ಯ ಕಾರ್ಯದರ್ಶಿ ಹಾಗೂ ಜಿ.ಪಂ. ಸಿಇಓ ತಿಳಿಸಿದ್ದಾರೆ.