ಕುಶಾಲನಗರ, ಜು. ೮: ಹಾರಂಗಿ ಜಲಾಶಯಕ್ಕೆ ನೀರಿನ ಒಳಹರಿವಿನ ಪ್ರಮಾಣ ಏರಿಕೆ ಆದ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಅಣೆಕಟ್ಟಿನಿಂದ ನದಿಗೆ ಹೆಚ್ಚುವರಿ ನೀರನ್ನು ಹರಿಸಲಾಗಿದೆ.

ಶುಕ್ರವಾರ ಸಂಜೆ ವೇಳೆಗೆ ಹಾರಂಗಿ ಜಲಾನಯನ ಪ್ರದೇಶದ ವ್ಯಾಪ್ತಿಯಲ್ಲಿ ಹೆಚ್ಚಿನ ಮಳೆಯಾದ ಹಿನ್ನೆಲೆಯಲ್ಲಿ ಜಲಾಶಯದಲ್ಲಿ ನೀರಿನ ಸಂಗ್ರಹ ಮಟ್ಟದ ಅಂತರ ಕಾಯ್ದುಕೊಂಡು ಅಣೆಕಟ್ಟಿನ ನಾಲ್ಕು ಕ್ರೆಸ್ಟ್ ಗೇಟ್‌ಗಳ ಮೂಲಕ ಒಂದು ಸಾವಿರ ಕ್ಯೂಸೆಕ್ಸ್ ಪ್ರಮಾಣದ ನೀರನ್ನು ಹರಿಸಲಾಗಿದೆ.

ಮಡಿಕೇರಿ ಕ್ಷೇತ್ರ ಶಾಸಕ ಡಾ. ಮಂತರ್ ಗೌಡ ಮತ್ತು ಅಣೆಕಟ್ಟು ಅಧಿಕಾರಿಗಳು ಜಲಾಶಯಕ್ಕೆ ಪೂಜೆ ಸಲ್ಲಿಸಿ ನಂತರ ಅಣೆಕಟ್ಟಿನ ನಾಲ್ಕು ಗೇಟ್‌ಗಳಲ್ಲಿ ನೀರನ್ನು ಹರಿಸುವ ಬಗ್ಗೆ ಕ್ರಮ ಕೈಗೊಂಡರು.

ಹವಾಮಾನ ಇಲಾಖೆಯಿಂದ ಹೆಚ್ಚಿನ ಮಳೆಯ ಬಗ್ಗೆ ಮುನ್ಸೂಚನೆ ಇರುವ ಹಿನ್ನೆಲೆಯಲ್ಲಿ ಈ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ ಎಂದು ಶಾಸಕ ಡಾ. ಮಂತರ್ ಗೌಡ ತಿಳಿಸಿದ್ದಾರೆ.

ಈ ಸಂದರ್ಭ ಅಣೆಕಟ್ಟು ಅಧಿಕಾರಿಗಳು ಸ್ಥಳೀಯ ಜನಪ್ರತಿನಿಧಿಗಳು ಇದ್ದರು.

ಪ್ರವಾಹ ಮುನ್ನೆಚ್ಚರ

ಹಾರಂಗಿ ಜಲಾನಯನ ಪ್ರದೇಶದಲ್ಲಿ ಹೆಚ್ಚಿನ ಮಳೆ ಯಾಗುತ್ತಿದ್ದು, ಹಾರಂಗಿ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಾಗುತ್ತಿ ರುತ್ತದೆ.