ಮಡಿಕೇರಿ, ಜು. ೮ :ಪ್ರಸಕ್ತ (೨೦೨೪) ಸಾಲಿನಲ್ಲಿ ವಿಶೇಷಚೇತನರ ಸಬಲೀಕರಣಕ್ಕಾಗಿ ವಿವಿಧ ಕ್ಷೇತ್ರಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿದ ವ್ಯಕ್ತಿ, ಸಂಸ್ಥೆಗಳಿಗೆ ರಾಷ್ಟç ಪ್ರಶಸ್ತಿ ನೀಡಲು ಅರ್ಜಿಗಳನ್ನು ಆನ್‌ಲೈನ್ ಮುಖಾಂತರ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ತಾ. ೩೧ ಕೊನೆಯ ದಿನವಾಗಿದೆ. ವೆಬ್-ಸೈಟ್ ತಿತಿತಿ.ಚಿತಿಚಿಡಿಜs.gov.iಟಿನಲ್ಲಿ ಅರ್ಜಿ ಸಲ್ಲಿಸಬಹುದು. ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿದ ಒಂದು ಪ್ರತಿಯನ್ನು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿ ವಿಶೇಷಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಚೈನ್‌ಗೇಟ್ ಹತ್ತಿರ, ಮೈಸೂರು ರಸ್ತೆ, ಮಡಿಕೇರಿ ಈ ಕಚೇರಿಗೆ ನೀಡಬೇಕು. ಹೆಚ್ಚಿನ ಮಾಹಿತಿಗೆ ಕಚೇರಿಯ ದೂ.ಸಂ. ೦೮೨೭೨-೨೯೫೮೨೯ನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಅವರು ತಿಳಿಸಿದ್ದಾರೆ.