ಸುಂಟಿಕೊಪ್ಪ, ಜು. ೮ : ಸುಂಟಿಕೊಪ್ಪ ಪಟ್ಟಣದಲ್ಲಿ ತುರ್ತಾಗಿ ಬಸ್ ನಿಲ್ದಾಣ, ಹೈಟೆಕ್ ಮಾರುಕಟ್ಟೆ, ಕಂದಾಯ ಇಲಾಖೆ ಕಟ್ಟಡ ಕಾಮಗಾರಿ ನಡೆಯಬೇಕಾಗಿದ್ದು, ಮಾಹಿತಿ ಕೊಡುವಂತೆ ಶಾಸಕ ಮಂತರ್‌ಗೌಡ ತಿಳಿಸಿದರು.

ಸುಂಟಿಕೊಪ್ಪ ಪಟ್ಟಣಕ್ಕೆ ಸಂಬAಧಿಸಿದAತೆ ಹಲವು ಕಾಮಗಾರಿಗಳ ರೂಪುರೇಷೆಗಳನ್ನು ತಯಾರಿಸಲು ಮತ್ತು ಸ್ಥಳ ವಿಚಾರವಾಗಿ ಅಧಿಕಾರಿಗಳೊಂದಿಗೆ ಶಾಸಕರು ಸಭೆ ನಡೆಸಿದರು.

ಪ್ರಸ್ತುತ ಕಾರ್ಯಾಚರಿಸುತ್ತಿರುವ ಮಾರುಕಟ್ಟೆಯನ್ನೇ ಹೈಟೆಕ್ ಮಾರುಕಟ್ಟೆಯನ್ನಾಗಿ ಮಾರ್ಪಡಿಸಿ ಅದರ ಕೆಳ ಭಾಗದಲ್ಲಿ ಬಸ್ ನಿಲ್ದಾಣ ಮಾಡಲು ಕೆಲ ಕಾಂಗ್ರೆಸ್ ಮುಖಂಡರು ಸೂಚಿಸಿದರು. ಶಾಂಗೀರಿ ತೋಟದ ಲೋಟಸ್ ಬಡಾವಣೆಯಲ್ಲಿರುವ ಗ್ರಾಮ ಪಂಚಾಯಿತಿಗೆ ಸೇರಿದ ಜಾಗದಲ್ಲಿ ಅತಿಥಿ ಗೃಹ ನಿರ್ಮಾಣ ಮಾಡಿ, ಇದೀಗ ಕಾರ್ಯಚರಿಸುತ್ತಿರುವ ಅತಿಥಿ ಗೃಹವನ್ನು ಕೆಡವಿ ಕಂದಾಯ ಇಲಾಖೆಯನ್ನು ವಿಸ್ತರಿಸಲು ಸಾಧ್ಯವಿದೆಯೇ ಎಂದು ಕಂದಾಯ ಅಧಿಕಾರಿಗಳೊಂದಿಗೆ ಚರ್ಚಿಸಿದರು. ಕೂಡಲೇ ಒಮ್ಮತದ ಅಭಿಪ್ರಾಯದೊಂದಿಗೆ ಅಧಿಕಾರಿಗಳ ಮತ್ತು ಸಾರ್ವಜನಿಕರ ಸಭೆ ಕರೆದು ಅಂತಿಮ ತೀರ್ಮಾನಕ್ಕೆ ಬರುವಂತೆ ಶಾಸಕರು ಸೂಚಿಸಿದರು.

ಈ ಸಂದರ್ಭ ಗ್ರಾಮ ಪಂಚಾಯಿತಿ ಪಿಡಿಒ ಲೋಕೇಶ್, ಗ್ರಾ.ಪಂ.ಉಪಾಧ್ಯಕ್ಷೆ ಶಿವಮ್ಮ, ಸದಸ್ಯರಾದ ಪಿ.ಎಫ್ ಸಬಾಸ್ಟಿನ್, ರಫೀಕ್ ಖಾನ್, ಆಲಿಕುಟ್ಟಿ, ಸೋಮನಾಥ್, ಕಂದಾಯ ಇಲಾಖೆಯ ಗ್ರಾಮ ಲೆಕ್ಕಿಗ ನಾಗೇಂದ್ರ , ಕುಶಾಲನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿ.ಪಿ.ಶಶಿಧರ್, ಕೆ.ಪಿ.ಚಂದ್ರಕಲಾ, ಹೋಬಳಿ ಕಾಂಗ್ರೆಸ್ ಅಧ್ಯಕ್ಷ ರಜಾಕ್, ಶರೀಫ್ , ಯೂತ್ ಕಾಂಗ್ರೆಸ್ ಅಧ್ಯಕ್ಷ ಅನೂಪ್, ಅಕೀಂ, ಜಿ.ಪಂ. ಮಾಜಿ ಸದಸ್ಯ ಪಿ.ಎಂ.ಲತೀಫ್ ಸೇರಿದಂತೆ ಇತರರು ಇದ್ದರು.