ಸಿದ್ದಾಪುರ, ಜು. ೯: ನೆಲ್ಲಿಹುದಿಕೇರಿಯ ಬೆಟ್ಟದಕಾಡು ನದಿ ತೀರದ ಪ್ರವಾಹ ಪೀಡಿತ ಪ್ರದೇಶವನ್ನು ಉಪವಿಭಾಗಾಧಿಕಾರಿ ವಿನಾಯಕ್ ನರ್ವಾಡೆ ಭೇಟಿ ನೀಡಿ ಪರಿಶೀಲಿಸಿದರು. ಅಲ್ಲದೆ ೨೦೧೯ರ ಪ್ರವಾಹದಿಂದ ಸಂತ್ರಸ್ತರಾದ ಕುಟುಂಬಗಳಿಗೆ ಪುನರ್ವಸತಿ ಕಲ್ಪಿಸುವ ಕುರಿತು ತಹಶೀಲ್ದಾರ್ ಅವರಿಂದ ಮಾಹಿತಿ ಪಡೆದುಕೊಂಡರು. ಈ ಸಂದರ್ಭ ಕುಶಾಲನಗರ ತಾಲೂಕು ತಹಶೀಲ್ದಾರ್ ಕಿರಣ್ ಗೌರಯ್ಯ, ಗ್ರಾಮ ಆಡಳಿತಾಧಿಕಾರಿ ಸಚಿನ್ ಹಾಜರಿದ್ದರು.