ಸನ್ನಡತೆ ಆಧಾರದ ಮೇಲೆ ೭೭ ಕೈದಿಗಳ ಬಿಡುಗಡೆ
ಬೆಂಗಳೂರು, ಜು. ೯: ರಾಜ್ಯದ ವಿವಿಧ ಜೈಲುಗಳಲ್ಲಿರುವ ೭೭ ಕೈದಿಗಳನ್ನು ಮಂಗಳವಾರ ಸನ್ನಡತೆ ಆಧಾರದ ಮೇಲೆ ಬಿಡುಗಡೆ ಮಾಡಲಾಯಿತು. ಸನ್ನಡತೆ ಆಧಾರದ ವರ್ಷದಲ್ಲಿ ಮೂರು ಬಾರಿ ಜೈಲಿನ ಕೈದಿಗಳನ್ನು ಬಿಡುಗಡೆಗೊಳಿಸುವ ಆದೇಶದನ್ವಯ, ರಾಜ್ಯ ಸರ್ಕಾರದ ಶಿಫಾರಸಿನ ಮೇರೆಗೆ ೭೭ ಕೈದಿಗಳನ್ನು ಅವಧಿಪೂರ್ವ ಬಿಡುಗಡೆಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಅನುಮತಿ ನೀಡಿದ್ದರು. ಈ ಹಿನ್ನೆಲೆಯಲ್ಲಿ ಇಂದು ಗೃಹ ಸಚಿವ ಪರಮೇಶ್ವರ ಅವರ ನೇತೃತ್ವದಲ್ಲಿ ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಕೈದಿಗಳನ್ನು ಬಿಡುಗಡೆ ಮಾಡಲಾಯಿತು. ಸನ್ನಡತೆ ಆಧಾರದ ಮೇಲೆ ಕೈದಿಗಳ ಬಿಡುಗಡೆ ಸಮಾರಂಭದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಪರಮೇಶ್ವರ ಅವರು, ಇನ್ನುಮುಂದೆ ಸನ್ನಡತೆ ಆಧಾರದ ಮೇಲೆ ವರ್ಷಕ್ಕೆ ಎರಡು ಬಾರಿ ಬದಲು ಮೂರು ಬಾರಿ ಕೈದಿಗಳನ್ನು ಬಂಧಮುಕ್ತಗೊಳಿಸಲಾಗುವುದು ಎಂದರು. ಈಗ ವರ್ಷಕ್ಕೆ ಎರಡು ಬಾರಿ ಸ್ವಾತಂತ್ರ್ಯೋತ್ಸವದ ವೇಳೆ ಮತ್ತು ಗಣರಾಜ್ಯೋತ್ಸವದ ವೇಳೆ ಮಾತ್ರ ಸನ್ನಡತೆ ಆಧಾರದ ಮೇಲೆ ಕೈದಿಗಳನ್ನು ಬಿಡುಗಡೆ ಮಾಡಲಾಗುತ್ತಿದೆ. ಹೈಕೋರ್ಟ್ ಆದೇಶದ ಮೇರೆಗೆ ಸನ್ನಡತೆ ತೋರಿದ ಬಂದಿಗಳು ಬಿಡುಗಡೆಗೆ ಅವಕಾಶ ಇದೆ. ಇಂದು ಕಾರಾಗೃಹದಲ್ಲಿದ್ದ ೭೭ ಜನರನ್ನು ಬಿಡುಗಡೆ ಮಾಡಲಾಗಿದೆ. ೧೦, ೧೫ ವರ್ಷ ಜೈಲಿನಲ್ಲೇ ಜೀವನ ಕಳೆದು ಸನ್ನಡತೆ ಕಂಡುಕೊAಡಿದ್ದಾರೆ. ಒಂದೇ ದಿನದಲ್ಲಿ ಸನ್ನಡತೆ ಪರಿಗಣಿಸಲ್ಲ. ಅದಕ್ಕೆ ಆದ ಕೆಲ ಮಾನದಂಡಗಳು ಇವೆ. ಜೈಲಿನಲ್ಲಿ ಯಾವ ರೀತಿ ನಡೆದುಕೊಂಡಿದ್ದಾರೆ?, ಪರಿವರ್ತನೆಯಾಗಿದ್ದಾರೆ?, ಸಮಾಜದ ನಡುವೆ ಯಾವ ರೀತಿ ಅವರು ಇರಲಿದ್ದಾರೆ ಎಂಬುವುದನ್ನು ಮನನ ಮಾಡಿ ಕೊಳ್ಳಲಾಗುತ್ತದೆ. ನಂತರ ಸಮಿತಿ ಪರಿಶೀಲನೆ ಮಾಡಿ ಸರ್ಕಾರಕ್ಕೆ ಶಿಫಾರಸು ಮಾಡುತ್ತದೆ. ಈ ಬಗ್ಗೆ ಸಚಿವ ಸಂಪುಟದಲ್ಲಿ ತೀರ್ಮಾನಿಸಿ, ಬಿಡುಗಡೆ ಪಟ್ಟಿಯನ್ನು ರಾಜ್ಯಪಾಲರಿಗೆ ರವಾನಿಸಲಾಗುತ್ತದೆ. ರಾಜ್ಯಪಾಲರ ಅಂಕಿತ ಹಾಕಿದ ನಂತರ ಬಿಡುಗಡೆ ಮಾಡುವುದು ನಿಮಯ ಎಂದು ತಿಳಿಸಿದರು.
ಪ್ರಧಾನಿ ಮೋದಿಗೆ ರಷ್ಯಾದ ಅತ್ಯುನ್ನತ ನಾಗರಿಕ ಪ್ರಶಸ್ತಿ
ಮಾಸ್ಕೋ, ಜು. ೯: ಉಭಯ ದೇಶಗಳ ನಡುವಿನ ದ್ವಿಪಕ್ಷೀಯ ಬಾಂಧವ್ಯ ವೃದ್ಧಿಯಲ್ಲಿ ಅಸಾಧಾರಣ ಸೇವೆಗಾಗಿ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ಅವರಿಗೆ ರಷ್ಯಾದ ಅತ್ಯುನ್ನತ ನಾಗರಿಕ ಪ್ರಶಸ್ತಿ 'ಆರ್ಡರ್ ಆಫ್ ಸೇಂಟ್ ಆಂಡ್ರ್ಯೂ ದಿ ಅಪೊಸ್ಟಲ್' ಪ್ರದಾನ ಮಾಡಿದರು. "ನನಗೆ ಆರ್ಡರ್ ಆಫ್ ಸೇಂಟ್ ಆಂಡ್ರ್ಯೂ ದಿ ಅಪೊಸ್ಟಲ್' ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ನಾನು ಅದನ್ನು ಭಾರತದ ಜನರಿಗೆ ಅರ್ಪಿಸುತ್ತೇನೆ" ಎಂದು ಪ್ರಧಾನಿ ಮೋದಿ ಇಂದು ಮಾಸ್ಕೋದಲ್ಲಿ ನಡೆದ ಸಮಾರಂಭದಲ್ಲಿ ಪ್ರಶಸ್ತಿ ಸ್ವೀಕರಿಸಿದ ನಂತರ ಘಿ ನಲ್ಲಿ ಪೋಸ್ಟ್ ಮಾಡಿದ್ದಾರೆ. ರಷ್ಯಾ ಮತ್ತು ಭಾರತದ ನಡುವಿನ ವಿಶೇಷ ಕಾರ್ಯತಂತ್ರದ ಪಾಲುದಾರಿಕೆ ಮತ್ತು ಉಭಯ ದೇಶಗಳ ನಡುವಿನ ಸ್ನೇಹಪರ ಸಂಬAಧ ವೃದ್ಧಿಗೆ ನೀಡಿದ ವಿಶಿಷ್ಟ ಕೊಡುಗೆಗಾಗಿ ಪ್ರಧಾನಿ ಮೋದಿಗೆ ಈ ಪ್ರಶಸ್ತಿ ನೀಡಲಾಗಿದೆ. ಯೇಸುವಿನ ಮೊದಲ ಅಪೊಸ್ಟಲ್ ಮತ್ತು ರಷ್ಯಾದ ಪೋಷಕ ಸಂತ ಆಂಡ್ರ್ಯೂ ಅವರ ಗೌರವಾರ್ಥವಾಗಿ ೧೬೯೮ ರಲ್ಲಿ ಜಾರ್ ಪೀಟರ್ ದಿ ಗ್ರೇಟ್ ಈ ಪ್ರಶಸ್ತಿಯನ್ನು ಸ್ಥಾಪಿಸಿದರು. ಇದನ್ನು ರಷ್ಯಾದ ಅತ್ಯುನ್ನತ ನಾಗರಿಕ ಸೇವೆ ಅಥವಾ ಮಿಲಿಟರಿ ಸೇವೆಗೆ ಮಾತ್ರ ನೀಡಲಾಗುತ್ತದೆ.
ಸಿಖ್ಸ್ ಫಾರ್ ಜಸ್ಟಿಸ್ ಮೇಲಿನ ನಿಷೇಧ ವಿಸ್ತರಣೆ
ನವದೆಹಲಿ: ದೇಶ ವಿರೋಧಿ ಚಟುವಟಿಕೆಗಳಿಗಾಗಿ ಕೇಂದ್ರ ಗೃಹ ಸಚಿವಾಲಯ ಖಲಿಸ್ತಾನ್ ಪರವಾದ ಸಿಖ್ಸ್ ಫಾರ್ ಜಸ್ಟಿಸ್ (Sಈಎ) ಸಂಘಟನೆಯ ಮೇಲೆ ವಿಧಿಸಲಾಗಿದ್ದ ನಿಷೇಧವನ್ನು ಐದು ವರ್ಷಗಳವರೆಗೆ ವಿಸ್ತರಿಸಿದೆ.ಕೇಂದ್ರ ಗೃಹ ಸಚಿವಾಲಯ ಈ ಕುರಿತು ಮಂಗಳವಾರ ಹೊರಡಿಸಿದ ಅಧಿಸೂಚನೆಯಲ್ಲಿ, ಖಲಿಸ್ತಾನಿ ಪರ ಭಯೋತ್ಪಾದಕ ಗುರುಪತ್ವಂತ್ ಸಿಂಗ್ ಪನ್ನುನ್ ನೇತೃತ್ವದ ಎಸ್ಎಫ್ಜೆಯನ್ನು ಐದು ವರ್ಷಗಳ ಹಿಂದೆ ಕಾನೂನುಬಾಹಿರ ಚಟುವಟಿಕೆಗಳ(ತಡೆಗಟ್ಟುವಿಕೆ) ಕಾಯ್ದೆಯಡಿ ದೇಶದ ಆಂತರಿಕ ಭದ್ರತೆ ಮತ್ತು ಸಮಗ್ರತೆಗೆ ಹಾನಿಯುಂಟುಮಾಡುವ ದೇಶ ವಿರೋಧಿ ಚಟುವಟಿಕೆಗಳಿಗಾಗಿ ನಿಷೇಧಿತ ಸಂಘಟನೆ ಎಂದು ಘೋಷಿಸಲಾಗಿದ್ದು, ಈ ನಿಷೇಧವನ್ನು ೫ ವರ್ಷಗಳವರೆಗೆ ವಿಸ್ತರಿಸಲಾಗಿದೆ ಎಂದು ತಿಳಿಸಿದೆ. ಎಸ್ಎಫ್ಜೆ ಪಂಜಾಬ್ ಮತ್ತು ಇತರೆಡೆಗಳಲ್ಲಿ ದೇಶ ವಿರೋಧಿ ಮತ್ತು ವಿಧ್ವಂಸಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದೆ. ಇದು ಭಾರತದ ಸಾರ್ವಭೌಮತೆ ಮತ್ತು ಪ್ರಾದೇಶಿಕ ಸಮಗ್ರತೆಗೆ ಅಡ್ಡಿಪಡಿಸುವ ಉದ್ದೇಶವನ್ನು ಹೊಂದಿದೆ ಎಂದು ಕೇಂದ್ರ ಗೃಹ ಸಚಿವಾಲಯ ಹೇಳಿದೆ.
ಪತಂಜಲಿಯ ೧೪ ಉತ್ಪನ್ನಗಳ ನಿಷೇಧ ಸುಪ್ರೀಂ ಕೋರ್ಟ್ ಛೀಮಾರಿ ಬಳಿಕ ಬಾಬಾ ರಾಮದೇವ್ ಅಫಿಡವಿಟ್ ಸಲ್ಲಿಕೆ!
ನವದೆಹಲಿ, ಜು ೯: ಬಾಬಾ ರಾಮ್ದೇವ್ ನಡೆಸುತ್ತಿರುವ ಪತಂಜಲಿ ಆಯುರ್ವೇದ್ ಲಿಮಿಟೆಡ್ ಮಂಗಳವಾರ ಸುಪ್ರೀಂ ಕೋರ್ಟ್ಗೆ ಅಫಿಡವಿಟ್ ಸಲ್ಲಿಸಿದ್ದು, ೧೪ ಉತ್ಪನ್ನಗಳ ಮಾರಾಟವನ್ನು ನಿಷೇಧಿಸಿದೆ ಮತ್ತು ಅವರ ಜಾಹೀರಾತುಗಳನ್ನು ಹಿಂತೆಗೆದುಕೊಳ್ಳುವAತೆ ಸೂಚನೆಗಳನ್ನು ನೀಡಲಾಗಿದೆ ಎಂದು ತಿಳಿಸಿದೆ. ವಾಸ್ತವವಾಗಿ, ಈ ಉತ್ಪನ್ನಗಳ ಬಗ್ಗೆ ಕಂಪನಿಯು ಮಾಡಿದ ತಪ್ಪು ಪ್ರಚಾರದ ಕುರಿತು ಸುಪ್ರೀಂ ಕೋರ್ಟ್ ಬಾಬಾ ರಾಮ್ದೇವ್ ಮತ್ತು ಪತಂಜಲಿ ಆಯುರ್ವೇದ ಎಂಡಿ ಆಚಾರ್ಯ ಬಾಲಕೃಷ್ಣ ಅವರಿಗೆ ಛೀಮಾರಿ ಹಾಕಿತ್ತು. ನಂತರ ಅವರು ಸಾರ್ವಜನಿಕವಾಗಿ ಕ್ಷಮೆ ಕೇಳಬೇಕಾಯಿತು. ಈ ೧೪ ಉತ್ಪನ್ನಗಳು ಕೊರೋನಾ ಅವಧಿಯಲ್ಲಿ ಪತಂಜಲಿಯಿAದ ಮಾರುಕಟ್ಟೆಗೆ ಬಿಡುಗಡೆಯಾದ ಉತ್ಪನ್ನಗಳಾಗಿದ್ದವು. ಈ ಉತ್ಪನ್ನಗಳು ಕೊರೋನಾ ರೋಗವನ್ನು ಸಂಪೂರ್ಣವಾಗಿ ಗುಣಪಡಿಸುತ್ತವೆ ಎಂದು ಹೇಳಲಾಗಿತ್ತು. ಈ ಉತ್ಪನ್ನಗಳ ಉತ್ಪಾದನಾ ಪರವಾನಗಿಗಳನ್ನು ಉತ್ತರಾಖಂಡ ರಾಜ್ಯ ಪರವಾನಗಿ ಪ್ರಾಧಿಕಾರವು ಏಪ್ರಿಲ್ ೨೦೨೪ ರಲ್ಲಿ ಅಮಾನತುಗೊಳಿಸಿದೆ.