*ಸಿದ್ದಾಪುರ, ಜು. ೯: ನೆಲ್ಲಿಹುದಿಕೇರಿ ಗ್ರಾ.ಪಂ ವ್ಯಾಪ್ತಿಯ ಒಂದನೇ ವಾರ್ಡ್ನ ರಸ್ತೆಗಳು ಸಂಪೂರ್ಣವಾಗಿ ಹದಗೆಟ್ಟಿದ್ದು, ಶೀಘ್ರ ದುರಸ್ತಿ ಕಾರ್ಯ ಕೈಗೊಳ್ಳಬೇಕೆಂದು ಸ್ಥಳೀಯ ನಲ್ವತ್ತೆಕ್ಕರೆ ಕಾಂಗ್ರೆಸ್ ಕಾರ್ಯಕರ್ತರು ಶಾಸಕ ಡಾ.ಮಂತರ್ ಗೌಡ ಅವರಿಗೆ ಮನವಿ ಮಾಡಿದ್ದಾರೆ.
ಕಳೆದ ಹಲವು ವರ್ಷಗಳಿಂದ ಅಭಿವೃದ್ಧಿ ಕಾಣದ ಈ ರಸ್ತೆಯಲ್ಲಿ ದೊಡ್ಡ ದೊಡ್ಡ ಹೊಂಡ ಗುಂಡಿಗಳಾಗಿದ್ದು, ವಾಹನ ಸಂಚಾರ ಅಸಾಧ್ಯವಾಗಿದೆ. ಪಾದಚಾರಿಗಳ ಸಂಚಾರಕ್ಕೂ ಅಡಚಣೆಯಾಗಿದೆ. ಆಟೋ ರಿಕ್ಷಾಗಳು ಗ್ರಾಮಕ್ಕೆ ಬರಲು ಒಪ್ಪುತ್ತಿಲ್ಲ. ಶಾಲಾ, ಕಾಲೇಜುಗಳಿಗೆ ತೆರಳುವ ವಿದ್ಯಾರ್ಥಿಗಳಿಗೆ ತೊಂದರೆಯಾಗಿದೆ. ಗರ್ಭಿಣಿಯರು ಹಾಗೂ ರೋಗಿಗಳು ಆಸ್ಪತ್ರೆಗೆ ತೆರಳಲು ಸಾಧ್ಯವಾಗದಷ್ಟು ರಸ್ತೆ ಹದಗೆಟ್ಟಿದೆ.
ತಕ್ಷಣ ರಸ್ತೆಗಳ ಅಭಿವೃದ್ಧಿಗೆ ಕ್ರಮ ಕೈಗೊಂಡು ಗ್ರಾಮಸ್ಥರನ್ನು ಸಂಕಷ್ಟದಿAದ ದೂರ ಮಾಡಬೇಕೆಂದು ಕಾಂಗ್ರೆಸ್ ಕಾರ್ಯಕರ್ತರು ಪಕ್ಷದ ಮುಖಂಡ ವಿ.ಪಿ.ಶಶಿಧರ್ ಅವರ ಮೂಲಕ ಶಾಸಕರಿಗೆ ಮನವಿ ಸಲ್ಲಿಸಿದ್ದಾರೆ. ಈ ಸಂದರ್ಭ ನಲ್ವತ್ತೆಕ್ಕರೆ ಕಾಂಗ್ರೆಸ್ ಅಧ್ಯಕ್ಷ ಟಿ. ಸಂತೋಷ್, ಕಾರ್ಯದರ್ಶಿ ಅಯ್ಯುಬ್ ಕೆ.ಬಿ ಹಾಗೂ ಕಾರ್ಯಕರ್ತರುಗಳು ಇದ್ದರು.