ಮಡಿಕೇರಿ, ಜು. ೧೦: ಸಾರ್ವಜನಿಕರ ಕುಂದುಕೊರತೆಯನ್ನು ಶೀಘ್ರ ಪರಿಹರಿಸುವ ನಿಟ್ಟಿನಲ್ಲಿ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರ ಅಧ್ಯಕ್ಷತೆಯಲ್ಲಿ ತಾ.೧೩ ರಂದು ಬೆಳಿಗ್ಗೆ ೧೦ ಗಂಟೆಗೆ ಕುಶಾಲನಗರದ ಎಪಿಸಿಎಂಎಸ್ ಸಭಾಂಗಣದಲ್ಲಿ ಜನಸ್ಪಂದನ ಸಭೆ ನಡೆಯಲಿದೆ. ಸಾರ್ವಜನಿಕರು ಈ ಅವಕಾಶ ಬಳಸಿಕೊಳ್ಳುವಂತೆ ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಎನ್.ವೀಣಾ ಅವರು ಕೋರಿದ್ದಾರೆ.