ಮುಳ್ಳೂರು, ಜು. ೧೧: ವಿದ್ಯಾರ್ಥಿ ಜೀವನದಲ್ಲಿ ಕಠಿಣ ಪರಿಶ್ರಮ, ಏಕಾಗ್ರತೆ ಮತ್ತು ಪ್ರಾಮಾಣಿಕತೆಯನ್ನು ಅಳವಡಿಸಿಕೊಂಡರೆ ಸಮಾಜದಲ್ಲಿ ಗಣ್ಯವ್ಯಕ್ತಿಯಾಗಿ ಬೆಳೆಯಬಹುದು ಎಂದು ಸಮಾಜ ಸೇವಕ ಮತ್ತು ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕ ಹರಪಳ್ಳಿ ರವೀಂದ್ರ ಹೇಳಿದರು. ಆಲೂರುಸಿದ್ದಾಪುರ ಸರಕಾರಿ ಪ.ಪೂ. ಕಾಲೇಜಿನ ಪ್ರೌಢಶಾಲಾ ವಿಭಾಗದ ಶಾಲಾ ವಿದ್ಯಾರ್ಥಿ ಸಂಸತ್ ಉದ್ಘಾಟನೆ, ಕ್ಲಸ್ಟರ್ ವ್ಯಾಪ್ತಿಯ ಶಾಲಾ ವಿದ್ಯಾರ್ಥಿಗಳಿಗೆ ದಾನಿಗಳಿಂದ ಉಚಿತ ನೋಟ್‌ಬುಕ್ ಹಾಗೂ ತಟ್ಟೆ ಲೋಟಗಳ ವಿತರಣೆ, ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ವಿದ್ಯಾರ್ಥಿಗಳು ಸ್ವಾಮಿ ವಿವೇಕಾನಂದರ ಜೀವನ ಚರಿತ್ರೆ ಪುಸ್ತಕಗಳನ್ನು ಓದುವುದರಿಂದ ವ್ಯಕ್ತಿತ್ವ ವಿಕಾಸನಗೊಳ್ಳುತ್ತದೆ ಎಂದರು.

ಶಿರಂಗಾಲ ಪ.ಪೂ.ಕಾಲೇಜಿನ ಉಪನ್ಯಾಸಕ ಹಂಡ್ರAಗಿ ನಾಗರಾಜ್ ಮಾತನಾಡಿ, ವಿದ್ಯಾರ್ಥಿಗಳು ಸೇರಿದಂತೆ ಪ್ರತಿಯೊಬ್ಬರು ಜೀವನದಲ್ಲಿ ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕು ಶಿಕ್ಷಕ, ರಕ್ಷಕ, ಕೃಷಿಕ, ಸಾಧಕ, ಪೋಷಕ ಈ ಐದು ಅಂಶಗಳನ್ನು ಆದರ್ಶವನ್ನಾಗಿ ಅಳವಡಿಸಿಕೊಂಡರೆ ಜೀವನ ಮತ್ತು ಸಮಾಜದಲ್ಲಿ ಶ್ರೇಷ್ಠತೆಯನ್ನು ಕಾಣಹುದು ಎಂದರು.

ಕಾರ್ಯಕ್ರಮದಲ್ಲಿ ದಾನಿ ಹರಪಳ್ಳಿ ರವೀಂದ್ರ ಮತ್ತು ಅಬ್ಬೂರುಕಟ್ಟೆ ಪುನೀತ್ ರಾಜ್‌ಕುಮಾರ್ ಅಭಿಮಾನಿ ಸಂಘದ ವತಿಯಿಂದ ಕ್ಲಸ್ಟರ್ ವ್ಯಾಪ್ತಿಯ ಶಾಲೆಗಳಿಗೆ ಉಚಿತವಾಗಿ ನೋಟ್ ಪುಸ್ತಕಗಳು ಹಾಗೂ ತಟ್ಟೆ ಮತ್ತು ಲೋಟಗಳನ್ನು ವಿತರಣೆ ಮಾಡಲಾಯಿತು. ಆಲೂರು ಸಿದ್ದಾಪುರ ಸರಕಾರಿ ಪ್ರೌಢಶಾಲೆ ಮತ್ತು ರೋಟರಿ ಮಲ್ಲೇಶ್ವರ ಕ್ಲಬ್ ವತಿಯಿಂದ ದಾನಿ ಹರಪಳ್ಳಿ ರವೀಂದ್ರ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಇದೇ ಸಂದರ್ಭ ಉತ್ತಮ ಅಂಕಗಳಿಸಿದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಶಾಲಾ ಸಂಸತ್ ನಾಯಕರಾಗಿ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಪ್ರಮಾಣವಚನ ಬೋಧಿಸ ಲಾಯಿತು. ಶಾಲಾ ಎಸ್‌ಡಿಎಂಸಿ ಅಧ್ಯಕ್ಷೆ ಗೀತಾ ಅಧ್ಯಕ್ಷತೆ ವಹಿಸಿದ್ದರು. ಕ್ಷೇತ್ರ ಶಿಕ್ಷಣಾಧಿಕಾರಿ ಭಾಗ್ಯಮ್ಮ, ಕ್ಷೇತ್ರ ಸಮನ್ವಯ ಶಿಕ್ಷಣಾಧಿಕಾರಿ ಜಿ.ಎಂ.ಹೇಮAತ್, ಗ್ರಾ.ಪಂ. ಅಧ್ಯಕ್ಷೆ ಮೀನಾಕ್ಷಿ, ಉಪಾಧ್ಯಕ್ಷ ಚಂದ್ರಮೋಹನ್, ರೋಟರಿ ಮಲ್ಲೇಶ್ವರ ಕ್ಲಬ್ ಅಧ್ಯಕ್ಷ ದಯಾನಂದ್, ಸದಸ್ಯ ಕಿರಣ್, ಪ್ರಮುಖರಾದ ದಮಯಂತಿ ಕರುಂಬಯ್ಯ, ಪಿ.ಎಸ್. ಸತೀಶ್‌ಕುಮಾರ್, ಮಲ್ಲಪ್ಪ, ಅಪ್ಪು ಅಭಿಮಾನಿ ಸಂಘದ ಅಧ್ಯಕ್ಷ ರವಿಕುಮಾರ್, ರಾಧಮಣಿ, ಪಿಡಿಒ ಹರೀಶ್, ಶಾಲಾ ಮುಖ್ಯ ಶಿಕ್ಷಕ ಸೋಮಶೇಖರ್, ಪ.ಪೂ. ಕಾಲೇಜು ಪ್ರಾಂಶುಪಾಲ ಚಂದ್ರಶೇಖರ್ ಮುಂತಾದವರಿದ್ದರು.