ಮಡಿಕೇರಿ, ಜು. ೧೨: ಕೊಡಗು ಜಿಲ್ಲಾ ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾಗಿ ಮಂಜುಳಾ ಕೆ. ಅಧಿಕಾರ ವಹಿಸಿಕೊಂಡಿದ್ದಾರೆ. ಮಂಜುಳ ಅವರು ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಾಂಶುಪಾಲರಾಗಿ ಸೇವೆಯಲ್ಲಿದ್ದರು. ನಿನ್ನೆ ದಿನ ಜ್ಯೋತಿ ಪ್ರಕಾಶ್ ಉಪನಿರ್ದೇಶಕರಾಗಿ ಆಯ್ಕೆಯಾಗಿದ್ದಾರೆ ಎಂದು ತಪ್ಪಾಗಿ ಪ್ರಚಾರವಾಗಿತ್ತು. ಇಂದು ಅಧಿಕೃತವಾಗಿ ಮಂಜುಳ ಅವರು ಅಧಿಕಾರ ವಹಿಸಿಕೊಂಡಿದ್ದಾರೆ.