ಸೋಮವಾರಪೇಟೆ, ಜು.೧೨ : ತಾಲೂಕಿನ ಪ್ರತಿ ಗ್ರಾಮ ಪಂಚಾಯಿತಿಗಳಿಗೆ ೪೦ ರಿಂದ ೫೦ ಲಕ್ಷ ಅನುದಾನ ಬಿಡುಗಡೆಗೆ ಕ್ರಮವಹಿಸಲಾಗುವುದು ಎಂದು ಮಡಿಕೇರಿ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ ಹೇಳಿದರು.

ಇಲ್ಲಿನ ಕೊಡವ ಸಮಾಜದಲ್ಲಿ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಆಯೋಜಿಸಿದ್ದ ‘ಲೋಕಸಭಾ ಚುನಾವಣೆ-ಕಾರ್ಯಕರ್ತರಿಗೆ ಕೃತಜ್ಞತಾ ಸಭೆ’ಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ವಿರೋಧ ಪಕ್ಷದವರು ಸರ್ಕಾರದಲ್ಲಿ ಹಣವಿಲ್ಲ ಎಂದು ಅಪಪ್ರಚಾರ ಮಾಡುತ್ತಿದ್ದಾರೆ. ಆದರೆ ೧.೬೫ ಕೋಟಿ ಅನುದಾನದಲ್ಲಿ ಕಕ್ಕೆಹೊಳೆ ಸೇತುವೆ ನಿರ್ಮಿಸಿದ್ದೇವೆ. ಕಲ್ಕಂದೂರು-ಎಡದAಟೆ ರಸ್ತೆಗೆ ೨೦ ಕೋಟಿ ಬಿಡುಗಡೆ ಮಾಡಲಾಗಿದೆ. ಯಲಕನೂರು-ಹೊಸಳ್ಳಿ ರಸ್ತೆಗೆ ೧೬ ಕೋಟಿ ಅನುದಾನಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಶನಿವಾರಸಂತೆಯಲ್ಲಿ ಬಸ್ ನಿಲ್ದಾಣ ಕಾರ್ಯಕ್ಕೆ ಹಣ ಬಿಡುಗಡೆಯಾಗಿದೆ ಎಂದರು.

ಮುAದಿನ ದಿನಗಳಲ್ಲಿ ಪ್ರತಿ ಗ್ರಾಮ ಪಂಚಾಯಿತಿಗಳಿಗೆ ೪೦ ರಿಂದ ೫೫೦ ಲಕ್ಷ ಅನುದಾನ ಒದಗಿಸಲಾಗುವುದು. ಅಭಿವೃದ್ಧಿ ಕಾಮಗಾರಿಗಳು ನಿರಂತರವಾಗಿ ನಡೆಯಲಿವೆ ಎಂದು ಶಾಸಕರು ಹೇಳಿದರು.

ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಹಿನ್ನಡೆಯಾಗಿರುವುದಕ್ಕೆ ಕಾರಣ ಹುಡುಕಬೇಕು. ಮುಂದಿನ ದಿನಗಳಲ್ಲಿ ಸರಿಪಡಿಸಿಕೊಂಡು ಮತದಾರರ ಮನಸ್ಸು ಗೆಲ್ಲಬೇಕು. ತಾ.ಪಂ. ಮತ್ತು ಜಿ.ಪಂ. ಚುನಾವಣೆಗಳು ಸೂಕ್ಷö್ಮವಾಗಿದ್ದು, ಕಾಂಗ್ರೆಸ್ ಹೆಚ್ಚಿನ ಸ್ಥಾನ ಗೆಲ್ಲುವ ಎಲ್ಲಾ ಅವಕಾಶಗಳಿದ್ದು, ಕಾರ್ಯಕರ್ತರು ಒಗ್ಗಟ್ಟನಿಂದ ಕೆಲಸ ಮಾಡಬೇಕೆಂದು ಕಿವಿಮಾತು ಹೇಳಿದರು.

ಈ ಹಿಂದೆ ಕಾಂಗ್ರೆಸ್‌ನಿAದ ಜಿ.ಪಂ.-ತಾ.ಪA. ಟಿಕೇಟ್ ಕೇಳುವವರೇ ಇಲ್ಲ ಎಂಬAತಾಗಿತ್ತು. ಇದೀಗ ಒಂದು ಕ್ಷೇತ್ರಕ್ಕೆ ಕನಿಷ್ಟ ೧೦ ಆಕಾಂಕ್ಷಿಗಳಿದ್ದಾರೆ. ಇದರಲ್ಲಿ ಓರ್ವರಿಗೆ ಮಾತ್ರ ಟಿಕೆಟ್ ಲಭಿಸಲಿದ್ದು, ಉಳಿದ ಆಕಾಂಕ್ಷಿಗಳೆಲ್ಲರೂ ಬಂಡಾಯ ಬದಿಗಿಟ್ಟು ಪಕ್ಷದ ಅಭ್ಯರ್ಥಿಯ ಗೆಲುವಿಗೆ ಶ್ರಮಿಸಬೇಕೆಂದು ಸೂಚಿಸಿದರು. ಸ್ಥಳೀಯ ಸಂಸ್ಥೆಗಳ ಚುನಾವಣೆ ಸಂಬAಧ ಪಕ್ಷ ಹಿರಿಯರನ್ನು ಒಳಗೊಂಡAತೆ ಸಮಿತಿ ರಚಿಸಲಾಗುವುದು. ಆಕಾಂಕ್ಷಿಗಳ ಪಟ್ಟಿ ಪಡೆದುಕೊಂಡು, ಮೀಸಲಾತಿಯನ್ನು ಪರಿಗಣಿಸಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು. ನಮ್ಮ ನಮ್ಮಲ್ಲೇ ಕಾಲೆಳೆಯುವುದನ್ನು ಬಿಟ್ಟು, ಕಾಂಗ್ರೆಸ್ ಗೆಲುವಿಗೆ ಶ್ರಮಿಸಿದರೆ ಅಧಿಕಾರ ಹಿಡಿಯಬಹುದು. ರಾಜ್ಯದಲ್ಲಿ ನಮ್ಮದೇ ಸರ್ಕಾರವಿರುವುದರಿಂದ ಹೆಚ್ಚು ಅಭಿವೃದ್ಧಿ ಕೆಲಸ ಮಾಡಬಹುದು ಎಂದರು.

ತಾಲೂಕು ಅಕ್ರಮ ಸಕ್ರಮ ಸಮಿತಿಯ ಸಭೆಗಳು ಇನ್ನಷ್ಟೇ ಪ್ರಾರಂಭಗೊಳ್ಳಲಿದ್ದು, ಏಜೆಂಟರಿಗೆ ಯಾವುದೇ ಕಾರಣಕ್ಕೂ ಅವಕಾಶ ನೀಡಬಾರದು. ಒಂದು ವೇಳೆ ಏಜೆಂಟರಿಗೆ ಮಣೆ ಹಾಕಿದರೆ ನಮಗೆ ಕೆಟ್ಟ ಹೆಸರು ಬರುತ್ತದೆ ಎಂದ ಶಾಸಕರು, ಕಂದಾಯ ಇಲಾಖೆಯಲ್ಲಿ ದುರಸ್ತಿ ಕಡತಗಳ ವಿಲೇವಾರಿಗೆ ಕ್ರಮ ವಹಿಸಲಾಗಿದೆ. ಆಡಳಿತ ಸುಧಾರಣೆಯಾಗುತ್ತಿದೆ ಎಂದರು.

ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಕೆ.ಎಂ. ಲೋಕೇಶ್ ಮಾತನಾಡಿ, ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಸಭೆ ನಡೆಸಿ ಸ್ಥಳೀಯ ಸಮಸ್ಯೆಗಳನ್ನು ಬಗೆಹರಿಸಬೇಕು. ಪಕ್ಷ ಸಂಘಟನೆಗೆ ಹೆಚ್ಚಿನ ಆದ್ಯತೆ ನೀಡಬೇಕೆಂದರು. ಹೆಚ್.ಸಿ. ನಾಗೇಶ್ ಮಾತನಾಡಿ, ಚುನಾವಣೆ ಘೋಷಣೆಗೂ ಮುಂಚಿತವಾಗಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಬೇಕು. ಕೊನೆಕ್ಷಣದಲ್ಲಿ ಆಯ್ಕೆ ಮಾಡುವುದರಿಂದ ಸಮಸ್ಯೆಯಾಗಲಿದೆ. ಜೆಡಿಎಸ್‌ನವರಿಗೆ ಕಾಂಗ್ರೆಸ್ ಬಗ್ಗೆ ಭಯವಿದೆ. ಹಾಗಾಗಿ ಬಿಜೆಪಿ ಜೊತೆ ಹೊಂದಾಣಿಕೆ ಮಾಡಿಕೊಂಡಿದ್ದಾರೆ. ಸ್ವಂತ ಶಕ್ತಿಯನ್ನು ಜೆಡಿಎಸ್ ಕಳೆದುಕೊಂಡಿದೆ ಎಂದು ಲೇವಡಿ ಮಾಡಿದರು.

ಎಸ್.ಸಿ. ಘಟಕ ಜಿಲ್ಲಾಧ್ಯಕ್ಷ ಬಿ.ಈ. ಜಯೇಂದ್ರ ಮಾತನಾಡಿ, ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳ ಬಗ್ಗೆ ಪ್ರತಿ ಮನೆಗೆ ಮಾಹಿತಿ ನೀಡಬೇಕು. ಮತದಾರರಲ್ಲಿ ಜಾಗೃತಿ ಮೂಡಿಸಬೇಕೆಂದರು. ಅಧ್ಯಕ್ಷತೆ ವಹಿಸಿದ್ದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಬಿ. ಸತೀಶ್ ಮಾತನಾಡಿ, ಕಳೆದ ಜಿ.ಪಂ. ಹಾಗೂ ತಾ.ಪಂ. ಚುನಾವಣೆಯಲ್ಲಿ ಕಾಂಗ್ರೆಸ್ ಕಡಿಮೆ ಸ್ಥಾನ ಗಳಿಸಿದ್ದರೂ ಮತಗಳಿಕೆಯ ಪ್ರಮಾಣ ಹೆಚ್ಚಿತ್ತು. ಈ ಬಾರಿ ಅತ್ಯಧಿಕ ಸ್ಥಾನಗಳಲ್ಲಿ ಗೆಲ್ಲಬೇಕು. ತಾಲೂಕಿಗೆ ಕಾಂಗ್ರೆಸ್ ಸರ್ಕಾರದಿಂದ ಬಂದ ಅನುದಾನಗಳ ಬಗ್ಗೆ ಸದ್ಯದಲ್ಲೇ ಶ್ವೇತಪತ್ರ ಹೊರಡಿಸಲಾಗುವುದು ಎಂದರು.

ಸೋಮವಾರಪೇಟೆಯಲ್ಲಿರುವ ಸರ್ಕಾರಿ ಜಾಗ, ಪಾಳು ಬಿದ್ದಿರುವ ಸರ್ಕಾರಿ ಕಟ್ಟಡಗಳನ್ನು ಗುರುತಿಸಿ ಅಭಿವೃದ್ಧಿ ಕಾರ್ಯಗಳಿಗೆ ಬಳಸಿಕೊಳ್ಳಬೇಕು ಎಂದು ಶಾಸಕರಿಗೆ ಸಲಹೆ ನೀಡಿದರು. ಕೆಡಿಪಿ ಸಮಿತಿ ಸದಸ್ಯ ಹೆಚ್.ಆರ್. ಸುರೇಶ್, ಪ.ಪಂ. ಸದಸ್ಯೆ ಶೀಲಾ ಡಿಸೋಜ ಮಾತನಾಡಿದರು. ಬ್ಲಾಕ್ ಕಾಂಗ್ರೆಸ್ ಕಾರ್ಯದರ್ಶಿ ಸುನಿಲ್ ಅವರು ಸಭೆಯನ್ನು ನಿರ್ವಹಿಸಿದರು.