ಮಡಿಕೇರಿ, ಜು. ೧೨: ಕರ್ನಾಟಕ ರಾಜ್ಯ ಒಲಂಪಿಕ್ಸ್ ಸಂಸ್ಥೆಯಿAದ ನಡೆಯಲಿರುವ "ಮಿನಿ ಒಲಂಪಿಕ್ಸ್" ಫುಟ್ಬಾಲ್ ಅಂಡರ್-೧೪ ಬಾಲಕ ಮತ್ತು ಬಾಲಕಿಯರ ಕೊಡಗು ಫುಟ್ಬಾಲ್ ತಂಡಕ್ಕೆ ಆಯ್ಕೆ ಪ್ರಕ್ರಿಯೆ ತಾ. ೧೪ರಂದು (ನಾಳೆ) ಅಮ್ಮತ್ತಿಯ ಫ್ರೌಢಶಾಲಾ ಮೈದಾನದಲ್ಲಿ ನಡೆಯಲಿದೆ ಎಂದು ಕೊಡಗು ಜಿಲ್ಲಾ ಫುಟ್ಬಾಲ್ ಅಸೋಸಿಯೇಷನ್ ಕಾರ್ಯದರ್ಶಿ ಪಿ.ಎ ನಾಗೇಶ್ (ಈಶ್ವರ್) ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

೨೦೧೦ರ ನಂತರ ಜನಿಸಿರುವ ಯುವ ಫುಟ್ಬಾಲ್ ಆಟಗಾರರು ಮಾತ್ರ ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸಲು ಅವಕಾಶವಿದ್ದು, ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸುವ ಆಟಗಾರರು ಕಡ್ಡಾಯವಾಗಿ ತಮ್ಮ ಆಧಾರ್ ಕಾರ್ಡ್ ತರಬೇಕು. ತಾ. ೧೪ರಂದು ಬೆಳಿಗ್ಗೆ ೦೯ ಗಂಟೆಗೆ ಅಮ್ಮತ್ತಿಯ ಪ್ರೌಢಶಾಲಾ ಮೈದಾನದಲ್ಲಿ ಆಟಗಾರರ ಆಯ್ಕೆ ಪ್ರಕ್ರಿಯೆಯು ಕೊಡಗು ಜಿಲ್ಲಾ ಫುಟ್ಬಾಲ್ ಸಂಸ್ಥೆಯ ಉಪಾಧ್ಯಕ್ಷ ಕ್ರಿಸ್ಟೋಫರ್ ಅವರ ನೇತೃತ್ವದಲ್ಲಿ ನಡೆಯಲಿದೆ. ಕೊಡಗು ಜಿಲ್ಲೆಗೆ ಇದೇ ಮೊದಲ ಬಾರಿಗೆ ಮಿನಿ ಒಲಂಪಿಕ್ಸ್ ಫುಟ್ಬಾಲ್‌ನಲ್ಲಿ ಭಾಗವಹಿಸಲು ಅವಕಾಶ ದೊರೆತಿದ್ದು, ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕೆಂದು ಕೊಡಗು ಜಿಲ್ಲಾ ಫುಟ್ಬಾಲ್ ಸಂಸ್ಥೆಯ ಕಾರ್ಯದರ್ಶಿ ನಾಗೇಶ್ ತಿಳಿಸಿದ್ದಾರೆ.