ಬೆಂಗಳೂರು, ಜು. ೧೨ : ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾಗುತ್ತಿರುವ ಬಹುಕೋಟಿ ರೂಪಾಯಿ ಹಗರಣಕ್ಕೆ ಸಂಬAಧಿಸಿದAತೆ ಜಾರಿ ನಿರ್ದೇಶನಾಲಯ (ಇಡಿ) ಶುಕ್ರವಾರ ಭರ್ಜರಿ ಬೇಟೆಯಾಡಿದೆ. ಹಗರಣದಲ್ಲಿ ಹೆಸರು ಕೇಳಿಬಂದ ಹಿನ್ನೆಲೆಯಲ್ಲಿ ಪರಿಶಿಷ್ಟ ಪಂಗಡಗಳ ಕಲ್ಯಾಣ ಖಾತೆಗೆ ಇತ್ತೀಚಿಗೆ ರಾಜೀನಾಮೆ ನೀಡಿದ್ದ ಮಾಜಿ ಬಿ. ನಾಗೇಂದ್ರ ಅವರನ್ನು ಬೆಳ್ಳಂಬೆಳಿಗ್ಗೆ ಇಡಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ನಗರದ ಡಾಲರ್ಸ್ ಕಾಲೋನಿಯಲ್ಲಿರುವ ಅವರ ನಿವಾಸದಿಂದ ವಶಕ್ಕೆ ಪಡೆದು ಹೆಚ್ಚಿನ ವಿಚಾರಣೆಗಾಗಿ ಶಾಂತಿನಗರದ ಕಚೇರಿಗೆ ಇಡಿ ಅಧಿಕಾರಿಗಳು ಕರೆದೊಯ್ದಿದ್ದಾರೆ. ಹಗರಣ ಹಿನ್ನೆಲೆಯಲ್ಲಿ ಇಡಿ ಅಧಿಕಾರಿಗಳು ಕಳೆದ ೨-೩ ದಿನಗಳಿಂದ ವಿವಿಧೆಡೆ ದಾಳಿ ನಡೆಸಿದ್ದರು. ಮಾಜಿ ಸಚಿವ ಬಿ. ನಾಗೇಂದ್ರ ಹಾಗೂ ರಾಯಚೂರು ಗ್ರಾಮೀಣ ಕ್ಷೇತ್ರದ ಶಾಸಕ ಬಸವನಗೌಡ ದದ್ದಲ್ ನಿವಾಸಗಳಲ್ಲಿ ಶೋಧ ಕಾರ್ಯ ನಡೆದಿತ್ತು. ಒಟ್ಟು ಹದಿನೆಂಟು ಕಡೆ ದಾಳಿ ಮಾಡಿ ಅಕ್ರಮ ವ್ಯವಹಾರದ ದಾಖಲೆ ಪತ್ರಗಳ ಪರಿಶೀಲನೆ ನಡೆಸಿತ್ತು. ಬಸವನಗೌಡ ದಡ್ಡಲ್ ಅವರ ಮಾಜಿ ಪಿ.ಎ. ಪಂಪಣ್ಣ ಮನೆ ಮೇಲೂ ಇಡಿ ದಾಳಿ ನಡೆದಿದ್ದು, ಅಕ್ರಮಗಳ ಮಾಹಿತಿ ಲಭ್ಯವಾಗಿತ್ತು. ಹಗರಣದಲ್ಲಿ ಪಂಪಣ್ಣ ೫೦ ಲಕ್ಷ ರೂಪಾಯಿ ಕಮಿಷನ್ ಪಡೆದಿರುವ ಆರೋಪ ಕೇಳಿಬಂದಿತ್ತು. ಪಂಪಣ್ಣ ಹಗರಣ ಕುರಿತು ಬಾಯಿ ಬಿಟ್ಟಿದ್ದಾನೆ ಎನ್ನಲಾಗಿದೆ.