ಕುಶಾಲನಗರ, ಜು. ೧೨: ವಿಶ್ವ ಜನಸಂಖ್ಯಾ ದಿನಾಚರಣೆ ಅಂಗವಾಗಿ ಕುಶಾಲನಗರ ಸರ್ಕಾರಿ ಇಂಜಿನಿಯರಿAಗ್ ಕಾಲೇಜಿನಲ್ಲಿ ಜನಸಂಖ್ಯಾ ದಿನಾಚರಣೆ ಕಾರ್ಯಕ್ರಮ ನಡೆಯಿತು.

ಜಿಲ್ಲಾ ಆರೋಗ್ಯ ಇಲಾಖೆ, ಕುಶಾಲನಗರ ತಾಲೂಕು ಆರೋಗ್ಯ ಇಲಾಖೆ, ಸರಕಾರಿ ಇಂಜಿನಿಯರಿAಗ್ ಕಾಲೇಜು, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮತ್ತು ಕುಶಾಲನಗರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದೊಂದಿಗೆ ಕಾಲೇಜಿನ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮವನ್ನು ಕಾಲೇಜು ಪ್ರಾಂಶುಪಾಲ ಡಾ. ಸತೀಶ್ ಉದ್ಘಾಟಿಸಿದರು.

ಈ ಸಂದರ್ಭ ಮಾತನಾಡಿದ ಅವರು ಜನಸಂಖ್ಯಾ ಸ್ಫೋಟದಿಂದ ದೇಶದ ಅಭಿವೃದ್ಧಿಗೆ ಅಡ್ಡಿ ಉಂಟಾಗುತ್ತಿದೆ. ಅಭಿವೃದ್ಧಿ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನ ಮಾಡಲು ತೊಡಕು ಉಂಟಾಗುವುದು ಸಹಜವಾಗಿದೆ ಎಂದರು. ಸಂಪನ್ಮೂಲ ವ್ಯಕ್ತಿಗಳಾದ ಕೊಡಗು ವಿಶ್ವವಿದ್ಯಾಲಯದ ಉಪನ್ಯಾಸಕ ಡಾ. ಲೋಕೇಶ್ ಭರಣಿ ಅವರು ದಿನದ ಮಹತ್ವದ ಬಗ್ಗೆ ಸಮಗ್ರ ಮಾಹಿತಿ ಒದಗಿಸಿದರು.

ಮುಖ್ಯ ಅತಿಥಿಗಳಾಗಿ ಪಾಲ್ಗೊಂಡ ಕುಶಾಲನಗರ ಕಾರ್ಯದರ್ಶಿ ಪತ್ರಕರ್ತರ ಸಂಘದ ಅಧ್ಯಕ್ಷ ಎಂ.ಎನ್. ಚಂದ್ರಮೋಹನ್ ಜನಸಂಖ್ಯಾ ಸ್ಫೋಟದಿಂದ ಆಗುತ್ತಿರುವ ಪ್ರಸಕ್ತ ಪರಿಣಾಮದ ಬಗ್ಗೆ ವಿವರಿಸಿದರು.

ಕುಶಾಲನಗರ ತಾಲೂಕು ಆರೋಗ್ಯ ಅಧಿಕಾರಿ ಡಾ. ಇಂದೂಧರ್ ಅವರು ಪ್ರಾಸ್ತಾವಿಕ ನುಡಿಗಳಲ್ಲಿ ಜನಸಂಖ್ಯಾ ಸ್ಫೋಟವನ್ನು ನಿಯಂತ್ರಿಸುವ ವಿಧಾನಗಳ ಬಗ್ಗೆ ಮಾಹಿತಿ ಒದಗಿಸಿದರು. ಗುಡ್ಡೆಹೊಸೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ರುಕ್ಮಿಣಿ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮಕ್ಕೆ ಮುನ್ನ ಕುಶಾಲನಗರದ ಸರಕಾರಿ ಪಾಲಿಟೆಕ್ನಿಕ್ ಕಾಲೇಜು ಮುಂಭಾಗದಿAದ ಆಶಾ ಕಾರ್ಯಕರ್ತೆಯರು, ಧರ್ಮಸ್ಥಳ ಯೋಜನೆಯ ಕಾರ್ಯಕರ್ತರು ಹಾಗೂ ವಿದ್ಯಾರ್ಥಿಗಳ ಜಾಥಾವನ್ನು ಉದ್ದೇಶಿಸಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಸತೀಶ್ ಮಾತನಾಡಿದರು.