ವೀರಾಜಪೇಟೆ, ಜು. ೧೨: ವೀರಾಜಪೇಟೆಯ ಸಂತ ಅನ್ನಮ್ಮ ಪ್ರೌಢಶಾಲೆಯ ವಿದ್ಯಾರ್ಥಿ ಸಂಘವನ್ನು ಸಂತ ಅನ್ನಮ್ಮ ವಿದ್ಯಾಸಂಸ್ಥೆಗಳ ವ್ಯವಸ್ಥಾಪಕ ರೆ.ಫಾ. ಜೇಮ್ಸ್ ಡೊಮಿನಿಕ್ ಉದ್ಘಾಟಿಸಿದರು.

ಬಳಿಕ ಮಾತನಾಡಿದ ಅವರು, ಮಕ್ಕಳ ಸುಪ್ತ ಪ್ರತಿಭೆ ಹೊರಹೊಮ್ಮಲು ಸಂಘ ವೇದಿಕೆಯಾಗಿದ್ದು, ವಿದ್ಯಾರ್ಥಿಗಳು ಇದನ್ನು ಮುಕ್ತವಾಗಿ ಬಳಸಿಕೊಂಡು ತಮ್ಮ ಪ್ರತಿಭೆಯನ್ನು ಪ್ರದರ್ಶಿಸಬೇಕೆಂದರು.

ಸಂತ ಅನ್ನಮ್ಮ ಪಿಯು ಕಾಲೇಜಿನ ಪ್ರಾಂಶುಪಾಲ ರೆ. ಫಾ. ಮದಲೈ ಮುತ್ತು ಮಾತನಾಡಿ, ಶಾಲಾ ಹಂತದಲ್ಲಿ ಪಠ್ಯೇತರ ಚಟುವಟಿಕೆಗಳು ಅತೀ ಮುಖ್ಯವಾಗಿದ್ದು, ವಿದ್ಯಾರ್ಥಿಗಳು ಇದರ ಸದುಪಯೋಗವನ್ನು ಮಾಡಿಕೊಳ್ಳಬೇಕು ಮತ್ತು ಶಾಲೆಯ ಏಳಿಗೆಗೆ ಶ್ರಮಿಸಬೇಕು ಎಂದು ಕಿವಿಮಾತು ಹೇಳಿದರು.

ಎಂಟನೇ ತರಗತಿಯ ಮಕ್ಕಳಿಗೆ ವಿವಿಧ ಸಾಂಸ್ಕöÈತಿಕ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು. ವಿದ್ಯಾರ್ಥಿಗಳು ಉತ್ಸಾಹದಿಂದ ಸ್ಪರ್ಧೆಗಳಲ್ಲಿ ಪಾಲ್ಗೊಂಡರು ಮತ್ತು ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನವನ್ನು ವಿತರಿಸಲಾಯಿತು.

ವೇದಿಕೆಯಲ್ಲಿ ಪ್ರೌಢ ಶಾಲಾ ಮುಖ್ಯ ಶಿಕ್ಷಕ ಬೆನ್ನಿ ಜೋಸೆಫ್, ಪ್ರಾಥಮಿಕ ಶಾಲಾ ಮುಖ್ಯಪಾಧ್ಯಾಯರುಗಳಾದ ಸಿಸ್ಟರ್ ರೋಸಿ, ಸಿಸ್ಟರ್ ಐಡಾ, ವಿದ್ಯಾರ್ಥಿ ಸಂಘದ ಅಧ್ಯಕ್ಷೆ ಕವಿತಾ ಮನೋಜ್, ಕಾರ್ಯದರ್ಶಿ ರೂಪ ಲಕ್ಷಿ÷್ಮ, ವಿದ್ಯಾರ್ಥಿ ಪ್ರತಿನಿಧಿ ರಿಸಿಕಾ ರಾಜೇಶ್ ಉಪಸ್ಥಿತರಿದ್ದರು.

ಈ ಸಂದರ್ಭ ಶಾಲಾ ಶಿಕ್ಷಕರು, ಸಿಬ್ಬಂದಿಗಳು, ವಿದ್ಯಾರ್ಥಿಗಳು ಹಾಜರಿದ್ದರು.