ಮುಳ್ಳೂರು: ಕರ್ನಾಟಕ ರಕ್ಷಣಾ ವೇದಿಕೆ ಶಿವರಾಮೇಗೌಡ ಬಣ ವತಿಯಿಂದ ಕೊಡಗು ಹಾಸನ ಜಿಲ್ಲಾ ಗಡಿಭಾಗದಲ್ಲಿ ಹಣಸೆ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕಗಳು ಸೇರಿದಂತೆ ಶಿಕ್ಷಣಕ್ಕೆ ಸಂಬAಧಿಸಿದ ಪರಿಕರಗಳನ್ನು ವಿತರಣೆ ಮಾಡಲಾಯಿತು.

ಪುಸ್ತಕ ಪರಿಕರಗಳ ಶಾಲೆಯ ಹಳೆ ವಿದ್ಯಾರ್ಥಿನಿ ಪ್ರೆಸಿಲ್ಲ ಕುಮಾರಿ ವಿತರಿಸಿದರು. ಈ ಸಂದರ್ಭ ಶಾಲಾ ಮುಖ್ಯ ಶಿಕ್ಷಕ ಅಂಬಾಮಣಿ, ಸಹ ಶಿಕ್ಷಕರಾದ ದಿವ್ಯಾ ದಿನೇಶ್, ಎಸ್‌ಡಿಎಂಸಿ ಅಧ್ಯಕ್ಷೆ ಪೂರ್ಣಿಮಾ, ತಾಲೂಕು ಕರವೇ ಅಧ್ಯಕ್ಷ ಫ್ರಾನ್ಸಿಸ್ ಡಿಸೋಜ ಮುಂತಾದವರಿದ್ದರು. ಈ ಸಂದರ್ಭದಲ್ಲಿ ದಾನಿ ಪ್ರೆಸಿಲ್ಲ ಕುಮಾರಿ ಅವರನ್ನು ಸನ್ಮಾನಿಸಲಾಯಿತು.ಕುಶಾಲನಗರ: ಕುಶಾಲನಗರ ವಾಸವಿ ಯುವತಿಯರ ಸಂಘ ಮತ್ತು ವಾಸವಿ ಕನ್ನಿಕಾ ಪರಮೇಶ್ವರಿ ಟ್ರಸ್ಟ್ ವತಿಯಿಂದ ಸಮೀಪದ ಮುಳ್ಳುಸೋಗೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮಕ್ಕಳಿಗೆ ಉಚಿತವಾಗಿ ಪುಸ್ತಕಗಳನ್ನು ವಿತರಿಸಲಾಯಿತು.

ವಾಸವಿ ಯುವತಿಯರ ಸಂಘದ ಅಧ್ಯಕ್ಷೆ ಕವಿತಾ ಪ್ರವೀಣ್ ಅಧ್ಯಕ್ಷತೆಯಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಶಾಲೆಯ ಮುಖ್ಯ ಶಿಕ್ಷಕಿ ಭಾಗ್ಯ, ಸಂಘದ ಕಾರ್ಯದರ್ಶಿ ಸ್ನೇಹ, ಖಜಾಂಚಿ ಅನುಷ್ಕಾ, ಶಿಕ್ಷಕ ಶಿವಲಿಂಗ ಸೇರಿದಂತೆ ಸಂಘದ ಪ್ರಮುಖರು ಇದ್ದರು.

ಕೂಡಿಗೆ: ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೆಗ್ಗಡಹಳ್ಳಿ ಗ್ರಾಮದಲ್ಲಿರುವ ಸದ್ಗುರು ಅಪ್ಪಯ್ಯ ಸ್ವಾಮಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಕುಶಾಲನಗರ ರೋಟರಿ ಸಂಸ್ಥೆ, ಚಂದನವನ ಹೋಂಸ್ಟೇ ವತಿಯಿಂದ ಉಚಿತವಾಗಿ ಸಮವಸ್ತç ಮತ್ತು ಶೂಗಳನ್ನು ಕೂಡಿಗೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಕೆ.ಟಿ. ಗಿರೀಶ್ ಶಾಲಾ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿತರಣೆ ಮಾಡಿದರು.

ಮುಖ್ಯ ಅತಿಥಿಗಳಾಗಿ ಅಗಮಿಸಿದ್ದ ಕುಶಾಲನಗರ ರೋಟರಿ ಅಧ್ಯಕ್ಷ ಸಿ.ಬಿ. ಹರೀಶ್ ಮಾತನಾಡಿ, ರೋಟರಿ ಸಂಸ್ಥೆಯು ಶಿಕ್ಷಣ ಮತ್ತು ಆರೋಗ್ಯದ ಕಡೆಗೆ ಹೆಚ್ಚು ಒತ್ತು ನೀಡುವ ಮೂಲಕ ಸೇವೆಯನ್ನು ಸಲ್ಲಿಸುತ್ತಾ ಬರುತ್ತಿದೆ ಎಂದರು.

ಈ ಸಂದರ್ಭ ಚಂದನವನ ಹೋಂ ಸ್ಟೇ ಮಾಲೀಕ ಶಿವಕುಮಾರ್, ರೋಟರಿಯ ಮಹೇಶ್ ಕುಮಾರ್, ರೋಟರಿ ಕಾರ್ಯದರ್ಶಿ ಕಿರಣ್, ಹಿರಿಯ ಸಾಹಿತಿ ಬಿ.ಪಿ. ಅಪ್ಪಣ್ಣ, ಅರುಣ್ ಕುಮಾರ್, ಮಂಜುನಾಥ, ಶಾಲಾ ಮುಖ್ಯೋಪಾಧ್ಯಾಯಿನಿ ಎಸ್. ಪುಷ್ಪ, ಶಿಕ್ಷಕರಾದ ಸೋಮಯ್ಯ, ಕಾವ್ಯ, ಸುರೇಶ್, ರತನ್, ಹೇಮಲತಾ ಸೇರಿದಂತೆ ಪೋಷಕರ ಪರಿಷತ್ತಿನ ಅಧ್ಯಕ್ಷರು, ಪದಾಧಿಕಾರಿಗಳು, ವಿದ್ಯಾರ್ಥಿಗಳು ಹಾಜರಿದ್ದರು.ಸುಂಟಿಕೊಪ್ಪ: ಸುಂಟಿಕೊಪ್ಪ ಸರಕಾರಿ ಪದವಿಪೂರ್ವ ಕಾಲೇಜಿನ ಆವರಣದಲ್ಲಿ ಗಿಡಗಳನ್ನು ನೆಡುವುದರ ಮೂಲಕ ವಿಶ್ವ ಪರಿಸರ ದಿನವನ್ನು ಆಚರಿಸಲಾಯಿತು.

ವಿಶ್ವ ಪರಿಸರ ದಿನಾಚರಣೆಯ ಸಮಾರಂಭದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲೆ ಶ್ರೀಲತಾ ವಹಿಸಿ ಮಾತನಾಡಿ, ಅವರು ಪ್ರಸ್ತುತ ಸನ್ನಿವೇಶದಲ್ಲಿ ಪರಿಸರದ ಮೇಲೆ ಆಗುತ್ತಿರುವ ಅಪಾಯಕಾರಿ ಚಟುವಟಿಕೆಗಳ ಕುರಿತು ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ಜೀವಶಾಸ್ತç ವಿಭಾಗದ ಉಪನ್ಯಾಸಕಿ ಹಾಗೂ ನಿಸರ್ಗ ಇಕೋ ಕ್ಲಬ್ ಸಂಚಾಲಕಿ ಪದ್ಮಾವತಿ ಅವರು ದಿನದ ಮಹತ್ವದ ಕುರಿತು ಮಾತನಾಡಿ ವಿಶ್ವ ಪರಿಸರ ದಿನಾಚರಣೆಯ -೨೦೨೪ ರ ಘೋಷವಾಕ್ಯವಾದ “ಭೂಮಿಯ ಪುನರುತ್ಥಾನ ಹಾಗೂ ಮರುಭೂಮಿ ತಡೆಗಟ್ಟುವಿಕೆ” ವಿಚಾರದ ಬಗ್ಗೆ ಮಾಹಿತಿ ನೀಡಿದರು.

ಈ ಸಂದರ್ಭ ಕಾಲೇಜಿನ ಉಪನ್ಯಾಸಕಿಯರು, ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳು ಇದ್ದರು.