ಕೂಡಿಗೆ, ಜು. ೧೩: ಕುಶಾಲನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬೀದಿ ನಾಯಿಗಳಿಂದ ಸಾರ್ವಜನಿಕರಿಗೆ ಸಮಸ್ಯೆ ಉಂಟಾಗಿದ್ದು, ಕೂಡಲೇ ಜಿಲ್ಲಾಧಿಕಾರಿಗಳು ಈ ಬಗ್ಗೆ ಸೂಕ್ತ ಕ್ರಮವಹಿಸಬೇಕು ಎಂದು ಕೂಡುಮಂಗಳೂರು ಗ್ರಾಮ ಪಂಚಾಯಿತಿ ಸದಸ್ಯ ಕೆ.ಬಿ. ಷಂಶುದ್ದೀನ್ ಅವರು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ.

ಪಟ್ಟಣ, ಗ್ರಾಮಾಂತರ ಪ್ರದೇಶಗಳಲ್ಲಿ ಬೀದಿನಾಯಿಗಳ ಹಾವಳಿ ಹೆಚ್ಚಾಗಿದ್ದು, ಸಾರ್ವಜನಿಕರು ಭಯದಿಂದ ಸಂಚರಿಸುವAತಾಗಿದೆ. ಪುಟ್ಟ ಮಕ್ಕಳು, ಶಾಲಾ ವಿದ್ಯಾರ್ಥಿಗಳು, ವೃದ್ಧರು ಸೇರಿದಂತೆ ಸಾರ್ವಜನಿಕರು ತಿರುಗಾಡುವ ರಸ್ತೆಯಲ್ಲಿ, ಬೀದಿ ನಾಯಿಗಳು ಗುಂಪು ಗುಂಪಾಗಿ ಸಂಚರಿಸುತ್ತಿವೆ. ಪಾದಚಾರಿಗಳು ಬೀದಿ ನಾಯಿಗಳಿಂದ ದಾಳಿಗೊಳಗಾಗುವ ಆತಂಕದಲ್ಲಿ ರಸ್ತೆಯಲ್ಲಿ ಸಂಚರಿಸಬೇಕಾಗಿದೆ.

ಅಲ್ಲದೇ ಬೀದಿನಾಯಿಗಳು ಶಾಲಾ ವಿದ್ಯಾರ್ಥಿಗಳ ಮತ್ತು ಸಾರ್ವಜನಿಕರ ಮೇಲೆ ದಾಳಿ ನಡೆಸಿದ ಘಟನೆಗಳು ಕೂಡಾ ನಡೆಯುತ್ತಿವೆ. ಈ ಬಗ್ಗೆ ಸಂಬAಧಿಸಿದ ಅಧಿಕಾರಿಗಳು ಕ್ರಮವಹಿಸಲು ಮುಂದಾಗುತ್ತಿಲ್ಲ. ಸಣ್ಣ ಪುಟ್ಟ ಮಕ್ಕಳ ಜೀವನದೊಂದಿಗೆ ಅಧಿಕಾರಿಗಳು ಚೆಲ್ಲಾಟವಾಡುತ್ತಿದ್ದಾರೆ ಎಂದು ಆರೋಪಿಸಿರುವ ಕೆ.ಬಿ. ಷಂಶುದ್ದೀನ್, ನೆರೆ ರಾಜ್ಯಗಳಲ್ಲಿ ಪುಟ್ಟ ಮಕ್ಕಳು ಬೀದಿನಾಯಿಗಳಿಂದ ಮೃತಪಟ್ಟ ಘಟನೆಗಳು ವರದಿಯಾಗಿವೆ. ಆದ್ದರಿಂದ ಜಿಲ್ಲಾಧಿಕಾರಿಗಳು ಸಂಬAಧಿಸಿದ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿ, ಬೀದಿನಾಯಿಗಳ ಸಮಸ್ಯೆಗೆ ಪರಿಹಾರ ನೀಡಬೇಕು ಎಂದು ಕೂಡುಮಂಗಳೂರು ಗ್ರಾಮ ಪಂಚಾಯಿತಿ ಸದಸ್ಯ ಕೆ.ಬಿ. ಷಂಶುದ್ದೀನ್ ಮನವಿ ಮಾಡಿದ್ದಾರೆ.