ಮಡಿಕೇರಿ, ಜು. ೧೩: ಕೊಡಗು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಯೂತ್ ಹಾಸ್ಟೆಲ್ ಅಸೋಸಿಯೇಶನ್ ಆಫ್ ಇಂಡಿಯಾ (ಮಡಿಕೇರಿ ಘಟಕ), ಕೊಡಗು ಜಿಲ್ಲಾ ಯುವ ಒಕ್ಕೂಟ, ಮಡಿಕೇರಿ, ವೀರಾಜಪೇಟೆ ಮತ್ತು ಸೋಮವಾರಪೇಟೆ ತಾಲೂಕು ಯುವ ಒಕ್ಕೂಟ ಹಾಗೂ ಕಗ್ಗೋಡ್ಲು ಕಾವೇರಿ ಯುವಕ ಸಂಘ(ರಿ)ದ ಸಂಯುಕ್ತಾಶ್ರಯದಲ್ಲಿ ಆಗಸ್ಟ್ ೧೦ ರಂದು ಮಡಿಕೇರಿ ತಾಲೂಕು ಕಗ್ಗೋಡ್ಲು ಗ್ರಾಮದ ದಿ.ಸಿ.ಡಿ ದೇವಯ್ಯನವರ ಗದ್ದೆಯಲ್ಲಿ ೨೦೨೪-೨೫ನೇ ಸಾಲಿನ ರಾಜ್ಯಮಟ್ಟದ ಮುಕ್ತ ಕೆಸರು ಗದ್ದೆ ಕ್ರೀಡಾಕೂಟ ಮತ್ತು ಆಟೋಟ ಸ್ಪರ್ಧೆ ಏರ್ಪಡಿಸಲಾಗಿದೆ.
ಹೆಚ್ಚಿನ ಮಾಹಿತಿಗೆ ಕೊಡಗು ಜಿಲ್ಲಾ ಯುವ ಒಕ್ಕೂಟ ಅಧ್ಯಕ್ಷ ಪಿ.ಪಿ. ಸುಕುಮಾರ್ ೯೪೮೧೨೧೩೯೨೦, ಮಡಿಕೇರಿ ತಾಲೂಕು ಯುವ ಒಕ್ಕೂಟ ಅಧ್ಯಕ್ಷ ದಿಲೀಪ್ ಕುಮಾರ್ -೮೬೧೮೫೬೮೧೭೩ ಅವರುಗಳನ್ನು ಸಂಪರ್ಕಿಸಬಹುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.