ಮಡಿಕೇರಿ, ಜು.೧೩: ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಅರೆಭಾಷೆ ಸಂಶೋಧನಾ ಕೇಂದ್ರದ ಸಲಹಾ ಸಮಿತಿಯನ್ನು ರಚಿಸಲಾಗಿದ್ದು, ಅಧ್ಯಕ್ಷರು ಮತ್ತು ಸದಸ್ಯರ ವಿವರ ಇಂತಿದೆ.
ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಗಳು ಅಧ್ಯಕ್ಷರಾಗಿದ್ದಾರೆ. ಮಂಗಳೂರು ವಿಶ್ವವಿದ್ಯಾನಿಲ ಯದ ಸಿಂಡಿಕೇಟ್ ಸದಸ್ಯರಾದ ಮಹಮ್ಮದ್ ಸವಾದ್, ಮಂಗಳೂರು ವಿಶ್ವವಿದ್ಯಾನಿಲಯದ ಭೌತಶಾಸ್ತç ವಿಭಾಗದ ಹಿರಿಯ ಪ್ರಾಧ್ಯಾಪಕರು ಹಾಗೂ ಶೈಕ್ಷಣಿಕ ಮಂಡಳಿ ಸದಸ್ಯರಾದ ಡಾ.ವೈ. ನಾರಾಯಣ, ಮೂಡಬಿದಿರೆಯ ಐಕಳ ಪಾಂಪೆ ಕಾಲೇಜಿನ ಪ್ರಾಂಶುಪಾಲರಾದ ಡಾ. ಪುರುಷೋತ್ತಮ ಕರಂಗಲ್ಲು, ಮಂಗಳೂರು ವಿಶ್ವವಿದ್ಯಾನಿಲಯದ ಕೈಗಾರಿಕಾ ರಸಾಯನಶಾಸ್ತç ವಿಭಾಗದ ಪ್ರಾಧ್ಯಾಪಕ ರಾದ ಡಾ.ಬಿ.ಕೆ. ಸರೋಜಿನಿ, ಕನಕಮಜಲು ಗ್ರಾಮದ ಲಕ್ಷಿö್ಮನಾರಾಯಣ ಕಜೆಗದ್ದೆ, ಕಡಬ ತಾಲೂಕಿನ ಸುಬ್ರಹ್ಮಣ್ಯ ಕೆಎಸ್ಎಸ್ ಕಾಲೇಜಿನ ಕನ್ನಡ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಸುಮಿತ್ರ, ಬಂಟ್ವಾಳ ತಾಲೂಕಿನ ಬೆಂಜನ ಪದವು ಕೆನರಾ ಇಂಜಿನಿಯ ರಿಂಗ್ ಕಾಲೇಜಿನ ರಸಾಯನ ಶಾಸ್ತç ಪ್ರಾಧ್ಯಾಪಕರಾದ ಡಾ. ದಾಮೋದರ ನಾರಾಲು, ಚೆಂಬು ಗ್ರಾಮದ ಸ್ಮಿತಾ ಅಮೃತರಾಜ್, ಮಂಗಳೂರು ವಿಶ್ವವಿದ್ಯಾನಿಲ ಯದ ಕುಲಸಚಿವರು ಸದಸ್ಯರಾಗಿದ್ದಾರೆ. ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರು ಹಾಗೂ ಮಂಗಳೂರು ವಿಶ್ವವಿದ್ಯಾನಿಲಯದ ಹಣಕಾಸು ಅಧಿಕಾರಿ ಅವರು ಖಾಯಂ ಸದಸ್ಯರಾಗಿ ದ್ದಾರೆ. ಮಂಗಳೂರು ವಿಶ್ವವಿದ್ಯಾನಿಲಯದ ಅರೆಭಾಷೆ ಸಂಶೋಧನಾ ಕೇಂದ್ರದ ಸಂಯೋಜಕರು ಸದಸ್ಯ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.