ಕಣಿವೆ, ಜು. ೧೩: ಜೀವ ನದಿ ಕಾವೇರಿ ತವರಿನಲ್ಲಿ ಕಳೆದ ರಾತ್ರಿಯಿಂದ ನಿರಂತರವಾಗಿ ಮಳೆ ಸುರಿದ ಹಿನ್ನೆಲೆಯಲ್ಲಿ ಕಾವೇರಿ ನದಿಯಲ್ಲಿ ನೀರಿನ ಹರಿವು ಏರಿಕೆಯಾಗಿದೆ. ಇತಿಹಾಸ ಪ್ರಸಿದ್ಧ ಕಣಿವೆಯ ರಾಮಲಿಂಗೇಶ್ವರ ದೇವಾಲಯದ ಎದುರು ಪೂರ್ವಾಭಿಮುಖವಾಗಿ ಹರಿಯುತ್ತಿರುವ ಕಾವೇರಿ ನದಿಯಲ್ಲಿ ಶನಿವಾರ ಬೆಳಿಗ್ಗೆಯಿಂದ ಸಂಜೆ ೫ ಗಂಟೆಯ ಅಂತರದಲ್ಲಿ ಬರೋಬ್ಬರಿ ೫ ಅಡಿಗಳಷ್ಟು ನೀರಿನ ಹರಿವು ಹೆಚ್ಚಳವಾಗಿದೆ. ಇನ್ನು ಹಾರಂಗಿ ಜಲಾಶಯದಿಂದ ನದಿಗೆ ನೀರು ಹರಿಸಿದಲ್ಲಿ ನದಿ ನೀರಿನ ಏರಿಕೆಯ ಪ್ರಮಾಣ ಮತ್ತಷ್ಟು ಹೆಚ್ಚಳವಾಗಲಿದೆ. -ಕೆ.ಎಸ್.ಮೂರ್ತಿ