ಮಡಿಕೇರಿ, ಜು.೧೩: ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸಾರ್ವಜನಿಕ ಕೆಲಸಗಳನ್ನು ಕಾರ್ಯಾಂಗದ ಮೂಲಕ ಪರಿಹರಿಸುವುದು ಶಾಸ ಕಾಂಗದ ಕರ್ತವ್ಯವಾಗಿದೆ. ಈ ನಿಟ್ಟಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ಸರ್ಕಾರ 'ಜನಸ್ಪಂದನಾ' ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ ಎಂದು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ. ಮಂತರ್ ಗೌಡ ಹೇಳಿದರು.
ಮಡಿಕೇರಿ ವಿಧಾನಸಭಾ ಕ್ಷೇತ್ರಕ್ಕೆ ಸಂಬAಧಿಸಿದAತೆ ಕುಶಾಲನಗರದ ಎಪಿಸಿಎಂಎಸ್ ಸಭಾಂಗಣದಲ್ಲಿ ಶನಿವಾರ ನಡೆದ ‘ಜನಸ್ಪಂದನಾ ಸಭೆ’ಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕಂದಾಯ, ನೀರಾವರಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಲೋಕೋಪಯೋಗಿ, ಸೆಸ್ಕ್, ಆರೋಗ್ಯ, ಶಿಕ್ಷಣ, ಪೌರಾಡಳಿತ, ಗಣಿ... ಹೀಗೆ ಹಲವು ಇಲಾಖೆ ವ್ಯಾಪ್ತಿಯ ಕೆಲಸ-ಕಾರ್ಯಗಳಿಗೆ ಸಾರ್ವಜನಿಕರು ಪ್ರತಿನಿತ್ಯ ಹೆಚ್ಚಿನ ಮನವಿ ಸಲ್ಲಿಸುತ್ತಾರೆ. ಈ ನಿಟ್ಟಿನಲ್ಲಿ ಅಧಿಕಾರಿಗಳು ಕಾನೂನಿನ ಚೌಕಟ್ಟಿನಲ್ಲಿ ಸ್ಪಂದಿಸುವ ಕೆಲಸ ಮಾಡಬೇಕು ಎಂದು ಶಾಸಕರು ತಿಳಿಸಿದರು.
ಸಾರ್ವಜನಿಕರಿಗೆ ನ್ಯಾಯ ಒದಗಿಸುವುದು ಸರ್ಕಾರದ ಪ್ರಥಮ ಆದ್ಯತೆ ಆಗಿದೆ. ಸಲ್ಲಿಕೆಯಾದ ಅರ್ಜಿಗೆ ಮಾತ್ರ ಸೀಮಿತವಾಗದೆ ಸ್ಥಳೀಯ ಎಲ್ಲಾ ರೀತಿಯ ಸಮಸ್ಯೆಗಳನ್ನು ಬಗೆಹರಿಸುವುದು ಅತಿಮುಖ್ಯ ಎಂದು ಮಂತರ್ ಗೌಡ ನುಡಿದರು.
ಸರ್ಕಾರಿ ವ್ಯವಸ್ಥೆಯಲ್ಲಿ ಅಧಿಕಾರಿಗಳು ಇಂದು ಬಂದಿಲ್ಲ, ನಾಳೆ ಬನ್ನಿ, ನೋಡುತ್ತೇವೆ, ಮಾಡಿ ಕೊಡುತ್ತೇವೆ ಎಂಬ ಸಬೂಬುಗಳು ಬೇಡ, ಕೆಲಸ ಆಗುವುದಿದ್ದಲ್ಲಿ ಮಾಡಿಕೊಡಬೇಕು. ಇಲ್ಲದಿದ್ದಲ್ಲಿ ನಿಯಮಾನುಸಾರ ಆಗುವುದಿಲ್ಲ ಎಂದು ಹಿಂಬರಹ ನೀಡಬೇಕು. ಪ್ರತಿ ಕ್ಷೇತ್ರದಲ್ಲಿ ಪಾರದರ್ಶಕತೆ ಇರಬೇಕು ಎಂದು ಶಾಸಕರು ಹೇಳಿದರು.
ಸ್ವಾತಂತ್ರö್ಯ ಬಂದು ಏಳು ದಶಕ ಕಳೆದರೂ ಸಹ ಒಂದಲ್ಲಾ ಒಂದು ಸಮಸ್ಯೆಗಳು ಉದ್ಭವವಾಗುತ್ತಿವೆ. ಆದ್ದರಿಂದ ಭಾರತವು ಮುಂದು ವರೆಯುತ್ತಿರುವ ರಾಷ್ಟçವಾಗಿದ್ದು, ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಮಾಡಲು ಎಲ್ಲರೂ ಶ್ರಮವಹಿಸ ಬೇಕಿದೆ ಎಂದರು.
ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಎನ್.ವೀಣಾ ಮಾತನಾಡಿ, ಸರ್ಕಾರದ ಹಲವು ಕಾರ್ಯಕ್ರಮವನ್ನು ಅರ್ಹರಿಗೆ ತಲುಪಿಸುವುದು ಮುಖ್ಯವಾಗಿದೆ. ಈ ನಿಟ್ಟಿನಲ್ಲಿ ಸ್ಥಳೀಯ ಮಟ್ಟದಲ್ಲಿ ಜನಸ್ಪಂದನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್, ಜಿ.ಪಂ.ಸಿಇಓ ಆನಂದ್ ಪ್ರಕಾಶ್ ಮೀನಾ,
೩ಆರನೇ ಪುಟಕ್ಕೆ
(ಮೊದಲ ಪುಟದಿಂದ) ಉಪ ವಿಭಾಗಾಧಿಕಾರಿ ವಿನಾಯಕ ನರ್ವಾಡೆ, ಗ್ಯಾರಂಟಿ ಯೋಜನೆಗಳ ಜಿಲ್ಲಾ ಅನುಷ್ಠಾನ ಸಮಿತಿ ಅಧ್ಯಕ್ಷ ಧರ್ಮಜ ಉತ್ತಪ್ಪ, ತಾಲೂಕು ಅಧ್ಯಕ್ಷ ವಿ.ಪಿ. ಶಶಿಧರ್, ಕುಶಾಲನಗರ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಪ್ರಮೋದ್ ಮುತ್ತಪ್ಪ, ಕೆಡಿಪಿ ಸಮಿತಿ ಸದಸ್ಯೆ ಸುನಿತಾ, ತಹಶೀಲ್ದಾರ್ ಗಳಾದ ಕಿರಣ್ ಗೌರಯ್ಯ, ನವೀನ್ ಕುಮಾರ್, ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಇದ್ದರು.
ಜನಸ್ಪಂದನಾ ಕಾರ್ಯ ಕ್ರಮದಲ್ಲಿ ಸೋಮವಾರಪೇಟೆ, ಕುಶಾಲನಗರ ತಾಲೂಕು ವ್ಯಾಪ್ತಿಯ ಸಾರ್ವಜನಿಕರಿಂದ ೧೪೫ ಅರ್ಜಿಗಳು ಗ್ರಾಮಾಂತರ ಪ್ರದೇಶದ ವಿವಿಧ ಸಮಸ್ಯೆಗಳಿಗೆ ಸಂಬAಧಿಸಿ ದಂತೆ ಇದ್ದ ಅಹವಾಲುಗಳನ್ನು ಸ್ವೀಕರಿಸಲಾಯಿತು.
ಕುಶಾಲನಗರ ತಾಲೂಕು ವ್ಯಾಪ್ತಿಯ ವಿವಿಧ ಗ್ರಾಮಗಳಲ್ಲಿ ಮನೆ ನಿರ್ಮಿಸಿಕೊಂಡಿದ್ದ ೨೮ ಮಂದಿ ಫಲಾನುಭವಿಗಳಿಗೆ ಕಂದಾಯ ಇಲಾಖೆ ವತಿಯಿಂದ ನೀಡಲಾಗುವ ಹಕ್ಕು ಪತ್ರಗಳನ್ನು ನೀಡಲಾಯಿತು. ಅಲ್ಲದೇ ೩೦ ಮಂದಿ ಪಿಂಚಣಿದಾರರಿಗೆ ಅರ್ಹ ಪಿಂಚಣಿ ಪತ್ರಗಳನ್ನು ವಿತರಣೆ ಮಾಡಲಾಯಿತು.