ಮಡಿಕೇರಿ, ಜು. ೧೩: ಪತ್ರಿಕಾ ಕ್ಷೇತ್ರದಲ್ಲಿನ ಸಾಧನೆಗಾಗಿ ಕಾಸರಗೋಡು ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘದ೪
ಲ್ಲಿ ಕಾಸರಗೋಡುವಿನ ಉದ್ಯಮಿ, ಸಮಾಜಸೇವಕ ಅಶ್ರಫ್ ಶಾ ಮಂತೂರು ಅವರು ಸ್ಥಾಪಿಸಿರುವ ದತ್ತಿನಿಧಿ ಪ್ರಶಸ್ತಿಗೆ ಭಾಜನರಾದ ಕೊಡಗು ಜಿಲ್ಲಾ ವಿಶ್ವವಾಣಿ ಪತ್ರಿಕೆಯ ವರದಿಗಾರ, ಕೊಡಗು ಪತ್ರಕರ್ತರ ಸಂಘದ ಸಲಹೆಗಾರ ಅನಿಲ್ ಎಚ್.ಟಿ. ಕಾಸರಗೋಡು ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘ, ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ, ಕರ್ನಾಟಕ ಪ್ರವಾಸೋದ್ಯಮ ಇಲಾಖೆ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಇವರುಗಳ ಜಂಟಿ ಆಶ್ರಯದಲ್ಲಿ ಕಾಸರಗೋಡು ಬಳಿಯ ಸೀತಂಗೋಳಿ ಗ್ರಾಮದ ಅಲಯನ್ಸ್ ಸಭಾಭವನದಲ್ಲಿ ನಡೆದ ಸಮಾರಂಭದಲ್ಲಿ ಪ್ರಶಸ್ತಿ ಸ್ವೀಕರಿಸಿದರು.
ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ಪಿ. ಪ್ರಭಾಕರ್, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು, ಮತ್ತಿತರ ಗಣ್ಯರು ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.