ಮಡಿಕೇರಿ, ಜು. ೧೪: ಆರೋಗ್ಯ ಇಲಾಖೆಯ ಹಿರಿಯ ನರ್ಸಿಂಗ್ ಅಧಿಕಾರಿ ಮಡಿಕೇರಿಯ ಬಂಗಾಡು ಮನೆ ವಸಂತಿ ಅವರು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಯಿಂದ ನೀಡಲಾಗುವ ಪ್ರತಿಷ್ಠಿತ ಫ್ಲಾರೆನ್ಸ್ ನೈಟಿಂಗೇಲ್ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಆರೋಗ್ಯ ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ಕಾರಣಕ್ಕಾಗಿ ಫ್ಲಾರೆನ್ಸ್ ನೈಟಿಂಗೇಲ್ ಪ್ರಶಸ್ತಿಯೊಂದಿಗೆ ಬೆಸ್ಟ್ ನರ್ಸಿಂಗ್ ಆಫೀಸರ್ ಪ್ರಶಸ್ತಿ ಪತ್ರವನ್ನು ಇವರು ಪಡೆದಿದ್ದಾರೆ.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಆಂಗ್ಲೋ ಇಂಡಿಯನ್ ಯುನಿಟಿ ಸೆಂಟರ್ ಸಹಯೋಗದಲ್ಲಿ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳ ಅನುಪಸ್ಥಿತಿಯಲ್ಲಿ ಆರೋಗ್ಯ ಮತ್ತು (ಮೊದಲ ಪುಟದಿಂದ) ಕುಟುಂಬ ಕಲ್ಯಾಣ ಖಾತೆ ಸಚಿವ ದಿನೇಶ್ ಗುಂಡೂರಾವ್ ಅವರು ವಸಂತಿ ಅವರಿಗೆ ಫ್ಲಾರೆನ್ಸ್ ನೈಟಿಂಗೇಲ್ ಪ್ರಶಸ್ತಿ ಪ್ರದಾನ ಮಾಡಿದರು. ಮಡಿಕೇರಿಯ ಜಿಲ್ಲಾಸ್ಪತ್ರೆಯಲ್ಲಿ ೨೫ ವರ್ಷಗಳ ಕಾಲ ಸೇವೆ ಸಲ್ಲಿಸಿರುವ ಬಂಗಾಡುಮನೆ ವಸಂತಿ ಅವರು, ಪ್ರಸ್ತುತ ಬಡ್ತಿ ಹೊಂದಿ ಮೈಸೂರಿನ ಕೆ.ಆರ್.ಆಸ್ಪತ್ರೆಯಲ್ಲಿ ಹಿರಿಯ ನರ್ಸಿಂಗ್ ಅಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಕ್ರೀಡೆಯಲ್ಲಿ ಹೆಚ್ಚು ಆಸಕ್ತಿ ಹೊಂದಿರುವ ಇವರು ಇಲ್ಲಿಯವರೆಗೆ ಅನೇಕ ರಾಜ್ಯ, ರಾಷ್ಟç, ಅಂತರಾಷ್ಟಿçÃಯ ಮತ್ತು ಜಿಲ್ಲಾಮಟ್ಟದ ಕ್ರೀಡಾಕೂಟಗಳಲ್ಲಿ ಪಾಲ್ಗೊಂಡು ಹಲವಷ್ಟು ಪದಕಗಳನ್ನು ಗೆದ್ದಿದ್ದಾರೆ.