ಸುಂಟಿಕೊಪ್ಪ, ಜು. ೧೫: ಪಿಯುಸಿ ವ್ಯಾಸಂಗ ಭವಿಷ್ಯದ ಪ್ರಮುಖ ಘಟ್ಟವಾಗಿದ್ದು, ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು ವಿಚಲಿತರಾಗದೆ ವಿದ್ಯಾಭ್ಯಾಸದ ಕಡೆಗೆ ಹೆಚ್ಚಿನ ಗಮನಹರಿಸಬೇಕೆಂದು ಸುಂಟಿಕೊಪ್ಪ ಪೊಲೀಸ್ ಠಾಣಾಧಿಕಾರಿ ಶ್ರೀಧರ್ ಹೇಳಿದರು.

ಇಲ್ಲಿನ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ೨೦೨೪-೨೫ನೇ ಸಾಲಿನ ವಿದ್ಯಾರ್ಥಿಗಳ ಕ್ರೀಡಾ ಮತ್ತು ಸಾಂಸ್ಕೃತಿಕ ಸಂಘದ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಭಾಷಣ ಮಾಡಿದ ಅವರು ಹದಿಹರೆಯದಲ್ಲಿ ಮಾದಕ ವ್ಯಸನಕ್ಕೆ ವಿದ್ಯಾರ್ಥಿಗಳು ಬಲಿಯಾಗಬಾರದು, ಮೊಬೈಲ್‌ನ ದಾಸರಾಗಬಾರದು, ರಸ್ತೆ ಸುರಕ್ಷತೆ ಬಗ್ಗೆ ಆರಿತುಕೊಳ್ಳಬೇಕೆಂದು ಕರೆ ನೀಡಿದರು.

ಕಾರ್ಯಕ್ರಮವನ್ನು ಕಾಲೇಜು ಅಭಿವೃದ್ಧಿ ಸಮಿತಿ ಕಾರ್ಯಾಧ್ಯಕ್ಷ ಅನೂಪ್ ಅವರು ಉದ್ಘಾಟಿಸಿ ಮಾತನಾಡಿ, ಕಾಲೇಜಿನ ಸಮಸ್ಯೆಗಳಿಗೆ ಸ್ಪಂದಿಸುವುದಾಗಿ ಹೇಳಿದರು.

ಜೀವಶಾಸ್ತç ಉಪನ್ಯಾಸಕಿ ಪದ್ಮಾವತಿ ಪ್ರತಿಜ್ಞಾವಿಧಿ ಬೋಧಿಸಿ ದರು. ಕಾರ್ಯಕ್ರಮ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲೆ ಶ್ರೀಲತಾ, ಕಾಲೇಜಿನ ಮೂಲಭೂತ ಸೌಕರ್ಯಗಳ ಪರಿಹಾರಕ್ಕಾಗಿ ಕಾಲೇಜು ಅಭಿವೃದ್ಧಿ ಸಮಿತಿ ಕಾರ್ಯಾಧ್ಯಕ್ಷರಿಗೆ ಮನವಿ ಸಲ್ಲಿಸಿದರು.

ಈ ಸಂದರ್ಭ ೨೦೨೪-೨೫ನೇ ಸಾಲಿನಲ್ಲಿ ಗರಿಷ್ಠ ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಪ್ರಾಂಶುಪಾಲರು ಪ್ರತಿಭಾ ಪುರಸ್ಕಾರ ನೀಡಿದರು. ನಿಶಾ ಸ್ವಾಗತಿಸಿ, ಕಿಶೋರ್ ಮತ್ತು ಜೋಸ್ನಾರವಿ ನಿರೂಪಿಸಿ, ಸಮಿರ ವಂದಿಸಿದರು.