ಕೂಡಿಗೆ, ಜು. ೧೬: ಇಲ್ಲಿಗೆ ಸಮೀ ಪದ ಶಿರಂಗಾಲ ಪದವಿಪೂರ್ವ ಕಾಲೇ ಜಿನಲ್ಲಿ ಸಾಹಿತ್ಯ ಮತ್ತು ಸಾಂಸ್ಕೃತಿಕ ವೇದಿಕೆ ಉದ್ಘಾಟನೆ ಹಾಗೂ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಸ್ವಾಗತ ಸಮಾರಂಭ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಉದ್ಘಾಟನೆಯನ್ನು ಜಿಲ್ಲೆಯ ನಿವೃತ್ತ ಪದವಿಪೂರ್ವ ಇಲಾಖೆ ಉಪನಿರ್ದೇಶಕ ಪುಟ್ಟರಾಜ ನೆರವೇರಿಸಿ ಮಾತನಾಡಿ, ವಿದ್ಯಾರ್ಥಿಗಳು ತಂದೆ-ತಾಯಿಗಳಿಗೆ, ಗುರುಗಳಿಗೆ, ಹಿರಿಯರಿಗೆ ಗೌರವವನ್ನು ಕೊಡುವುದರ ಮೂಲಕ ಉತ್ತಮ ಹೆಸರನ್ನು ತರಬೇಕು. ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಸ್ಪರ್ಧೆಗೆ ನಿಲ್ಲುವ ತಾಕತ್ತನ್ನು ತಾವು ಬೆಳೆಸಿಕೊಳ್ಳಬೇಕೆಂದು ಸಲಹೆ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜು ಪ್ರಾಂಶುಪಾಲ ಪಿ. ಸೋಮ ಚಂದ್ರ ವಹಿಸಿದ್ದರು. ಕಾಲೇಜಿನ ಹಿರಿಯ ಉಪನ್ಯಾಸಕ ಹಂಡ್ರAಗಿ ನಾಗ ರಾಜ್ ಪ್ರಾಸ್ತಾವಿಕವಾಗಿ ಮಾತ ನಾಡಿ, ಸಾಹಿತ್ಯ ಮತ್ತು ಸಾಂಸ್ಕೃತಿಕ ವೇದಿಕೆಯ ಉಪಯೋಗಗಳನ್ನು ಪಡೆದುಕೊಂಡು ಮುಂದಿನ ದಿನಗಳಲ್ಲಿ ಒಳ್ಳೆಯ ವ್ಯಕ್ತಿತ್ವ ವನ್ನು ರೂಪಿಸಿಕೊಳ್ಳಬೇಕೆಂದರು.

ಉಪನ್ಯಾಸಕಿ ಸರೋಜಾ ವಿದ್ಯಾ ರ್ಥಿಗಳಿಗೆ ಪ್ರತಿಜ್ಞಾವಿಧಿ ಬೋಧಿಸಿದರು. ನಾಗರಾಜ್ ಸ್ವಾಗತಿಸಿ, ಸಾಂಸ್ಕೃತಿಕ ವಿಭಾಗದ ಕಾರ್ಯದರ್ಶಿ ಕೆ.ಕೆ. ಭವಾನಿ ವಂದಿಸಿದರು. ಉಪನ್ಯಾಸಕ ಹೆಚ್.ಆರ್. ಶಿವಕುಮಾರ್ ಕಾರ್ಯಕ್ರಮ ನಿರೂಪಿಸಿದರು. ವೇದಿಕೆಯಲ್ಲಿ ಗಿರೀಶ್, ಶೋಭ, ಅಕ್ಷತಾ, ಪೂಜಾ, ಕಾವ್ಯ, ನೀಲಾಂಬಿಕೆ ಉಪಸ್ಥಿತರಿದ್ದರು. ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.