ಸೋಮವಾರಪೇಟೆ,ಜು.೧೬: ಬೆಂಗಳೂರು ಚೈಲ್ಡ್ ರೈಟ್ಸ್ ಟ್ರಸ್ಟ್ ಇವರು ನೀಡುವ ೨೦೨೪ನೇ ಸಾಲಿನ ಡಾ.ಪದ್ಮಿನಿ ಮಕ್ಕಳ ಹಕ್ಕುಗಳ ಫೆಲೋಶಿಪ್‌ಗೆ ನಾವು ಪ್ರತಿಷ್ಠಾನ ಸಂಸ್ಥೆಯ ಸಂಸ್ಥಾಪಕಿ ಕಿರಗಂದೂರು ಗ್ರಾಮದ ಪಿ. ಸುಮನಾ ಮ್ಯಾಥ್ಯೂ ಆಯ್ಕೆಯಾಗಿದ್ದಾರೆ.

ಬೆಂಗಳೂರಿನ ಎಸ್.ಸಿ.ಎಂ. ಹೌಸ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಫೆಲೋಶಿಪ್ ಪ್ರದಾನ ಮಾಡಲಾಯಿತು. ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ಆಯ್ದ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿನ ವಿವಿಧ ತಳಮಟ್ಟದ ಸಮುದಾಯಗಳ ಮಕ್ಕಳ ಹಕ್ಕುಗಳ ಸಂರಕ್ಷಣೆ ಹಾಗೂ ಸಾರ್ವಜನಿಕರಲ್ಲಿ ಅರಿವು ಮೂಡಿಸುವುದು, ತರಬೇತಿ, ಉಸ್ತುವಾರಿ, ಮಾಹಿತಿ ಸಂಗ್ರಹಿಸುವುದು ಇದರ ಉದ್ದೇಶವಾಗಿರುತ್ತದೆ ಎಂದು ಸುಮನ ತಿಳಿಸಿದ್ದಾರೆ.