ವೀರಾಜಪೇಟೆ, ಜು. ೧೬: ವೀರಾಜಪೇಟೆ ತಾಲೂಕು ಆಡಳಿತವು ಪ್ರಾಕೃತಿಕ ವಿಕೋಪ ಎದುರಿಸಲು ಸರ್ವಸನ್ನದವಾಗಿದ್ದು ಈಗಾಗಲೇ ಎಲ್ಲ ರೀತಿಯ ಪೂರ್ವ ತಯಾರಿ ನಡೆಸಿದೆ.
ಸಂಬAಧಪಟ್ಟ ಇಲಾಖೆ ಅಧಿಕಾರಿಗಳ ಸಭೆ ನಡೆಸಿ ಸೂಕ್ತ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳುವಂತೆ ತಹಶೀಲ್ದಾರ್ ಸೂಚಿಸಿದ್ದು ಈ ನಿಟ್ಟಿನಲ್ಲಿ ಸಕಲ ವ್ಯವಸ್ಥೆಗಳು ನಡೆದಿದೆ.
ಈ ವಿಚಾರಕ್ಕೆ ಸಂಬAಧಿಸಿದAತೆ ‘ಶಕ್ತಿ’ ತಹಶೀಲ್ದಾರ್ ಬಳಿ ಮಾಹಿತಿ ಬಯಸಿದಾಗ ತಾಲೂಕು ಆಡಳಿತದಿಂದ ಮಾಡಿಕೊಂಡಿರುವ ಸಿದ್ದತೆಗಳ ಬಗ್ಗೆ ಮಾಹಿತಿ ನೀಡಿದ ತಹಶೀಲ್ದಾರ್ ರಾಮಚಂದ್ರ ಅವರು, ಎಲ್ಲ ಇಲಾಖೆಯ ಅಧಿಕಾರಿಗಳು, ಪಿಡಿಓ, ನೋಡಲ್ ಅಧಿಕಾರಿ ಸಮಿತಿ, ಗ್ರಾಮಮಟ್ಟದ ಅಧಿಕಾರಿಗಳು ಅನಾಹುತದ ಬಗ್ಗೆ ವರದಿ ಮಾಡಬೇಕು. ಎಲ್ಲ ಅಧಿಕಾರಿಗಳ ಸಹಕಾರ ಬೇಕು. ಆರೋಗ್ಯ ಇಲಾಖೆ, ಅರಣ್ಯ ಇಲಾಖೆ, ವಿದ್ಯುತ್ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿಗಳು, ಸೇರಿದಂತೆ ಎಲ್ಲ ಇಲಾಖೆಗಳ ತಂಡವನ್ನು ರಚನೆ ಮಾಡಲಾಗಿದೆ. ರಾತ್ರಿ, ಹಗಲು ಪಾಳಿಯಲ್ಲಿ ಕಂಟ್ರೋಲ್ ರೂಮ್ ತೆರೆಯಲಾಗಿದೆ ಎಂದು ತಿಳಿಸಿದರು.
ಜಿಲ್ಲೆಯಲ್ಲಿ ಈ ಹಿಂದೆ ಅತಿವೃಷ್ಟಿಯಿಂದ ಉಂಟಾದ ಸಮಸ್ಯೆಗಳ ಆಧಾರದ ಮೇಲೆ ಈ ಬಾರಿ ಮುಂಗಾರಿನಲ್ಲಿ ಎದುರಾಗಬಹುದಾದ ಸಂಭವನೀಯ ಅಪಾಯಗಳನ್ನು ಅಂದಾಜು ಮಾಡಿ ಸಿದ್ಧತೆ ಮಾಡಿಕೊಳ್ಳಲಾಗಿದೆ.
ಕಂದಾಯ ಇಲಾಖೆ, ಜಿಲ್ಲಾ ಪಂಚಾಯಿತಿ, ಅಗ್ನಿಶಾಮಕ ಇಲಾಖೆ, ಅರಣ್ಯ ಇಲಾಖೆ, ಪೊಲೀಸ್, ಗೃಹರಕ್ಷಕ ದಳ, ಕೃಷಿ, ತೋಟಗಾರಿಕೆ, ಆರೋಗ್ಯ ಇಲಾಖೆ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಸದಾ ಜಾಗೃತರಾಗಿದ್ದಾರೆ.
ಪ್ರವಾಹ ತಲೆದೋರಬಹುದಾದ ಪ್ರದೇಶಗಳಲ್ಲಿ ತಾತ್ಕಾಲಿಕ ಆಶ್ರಯ ತಾಣ ಗುರುತಿಸಲಾಗಿದೆ. ಊಟೋಪಚಾರ ಸೌಲಭ್ಯ ನೀಡಲು ವ್ಯವಸ್ಥೆ ಮಾಡಿಕೊಳ್ಳಲಾಗಿದೆ.
ವಿಪತ್ತು ನಿರ್ವಹಣೆ ಬಗ್ಗೆ ಸಂಬAಧಿಸಿದ ತಾಲೂಕುಗಳಿಂದ ಮಾಹಿತಿ ಪಡೆಯಲು ಜಿಲ್ಲಾಧಿಕಾರಿ ಕಚೇರಿಯಲ್ಲಿ ಕಂಟ್ರೋಲ್ ರೂಂ ತೆರೆಯಲಾಗಿದೆ.
ಅಗತ್ಯ ಸಲಕರಣೆಗಳೊಂದಿಗೆ ಸದಾ ಸಿದ್ಧವಾಗಿರುವಂತೆ ಅಗ್ನಿಶಾಮಕ ಮತ್ತು ತುರ್ತು ಸೇವೆ ಸಿಬ್ಬಂದಿಗೆ ಸೂಚಿಸಲಾಗಿದೆ. ಸಂದರ್ಭಕ್ಕೆ ಅನುಗುಣವಾಗಿ ತುರ್ತು ಕ್ರಮಕ್ಕಾಗಿ ವಿವಿಧ ಇಲಾಖೆಗಳ ಸಿಬ್ಬಂದಿಗಳಿಗೆ ತರಬೇತಿ ನೀಡಿ ಸೂಚನೆ ನೀಡಲಾಗಿದೆ ಎಂದರು.
ಅತಿವೃಷ್ಟಿ ಬಗ್ಗೆ ಮಾಹಿತಿಯನ್ನು ಇತರ ಇಲಾಖೆಗಳ ಸಹಯೋಗದಲ್ಲಿ ಇ-ಮೇಲ್, ದೂರವಾಣಿ, ವಾಟ್ಸಾö್ಯಪ್, ಎಸ್‌ಎಂಎಸ್ ಮೂಲಕ ಪಡೆದು ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗುತ್ತದೆ.
ವೀರಾಜಪೇಟೆ ತಾಲೂಕು ವ್ಯಾಪ್ತಿಯಲ್ಲಿ ೬ ಕಡೆಗಳಲ್ಲಿ ಕಾಳಜಿ ಕೇಂದ್ರ ತೆರೆಯಲಾಗಿದೆ. ವೀರಾಜಪೇಟೆಯ ಬೆಟ್ಟ ಪ್ರದೇಶಗಳಲ್ಲಿ ವಾಸಿಸುತ್ತಿರುವವವರಿಗೆ ಏನಾದರೂ ಅಪಾಯದ ಸೂಚನೆ ಇದ್ದರೆ ಸಂತ ಅನ್ನಮ್ಮ ಶಾಲಾ ಸಭಾಂಗಣದಲ್ಲಿ ಕಾಳಜಿ ಕೇಂದ್ರ ತೆರೆಯಲಾಗಿದ್ದು ಅಲ್ಲಿಗೆ ಸ್ಥಳಾಂತರ ಮಾಡಬಹುದು. ಅಂತೆಯೇ ಬೇತ್ರಿ ಕಾವೇರಿ ನೀರಿನಮಟ್ಟ ಏರಿಕೆಯಾಗಿ ಅಲ್ಲಿನ ನಿವಾಸಿಗಳಿಗೆ ಪ್ರವಾಹ ಭೀತಿ ಎದುರಾದಲ್ಲಿ ಕಾಕೋಟುಪರಂಬು ಶಾಲೆಯಲ್ಲಿ, ತೋರ ಬೆಟ್ಟ ಪ್ರದೇಶದಲ್ಲಿರುವವರಿಗೆ ಭೂ ಕುಸಿತದಂತಹ ವಿಕೋಪ ಎದುರಾದಲ್ಲಿ ತೋರ ಶಾಲೆಯಲ್ಲಿ ಕಾಳಜಿ ಕೇಂದ್ರ ತೆರೆಯಲಾಗಿದೆ.
ಕೊಂಡAಗೇರಿ ಭಾಗದಲ್ಲಿ ಪ್ರವಾಹ ಭೀತಿ ಎದುರಾದಲ್ಲಿ ಕೊಂಡAಗೇರಿ ಶಾಲೆಯಲ್ಲಿ, ಗುಹ್ಯ ಗ್ರಾಮದಲ್ಲಿ ಪ್ರವಾಹ ಭೀತಿ ಉಂಟಾದಲ್ಲಿ ಹಚ್ಚಿನಾಡು ಶಾಲೆಯಲ್ಲಿ ಮತ್ತು ಕರಡಿಗೋಡು ವ್ಯಾಪ್ತಿಯಲ್ಲಿ ಪ್ರಾಕೃತಿಕ ವಿಕೋಪ ಉಂಟಾದಲ್ಲಿ ಸಿದ್ದಾಪುರದ ಸ್ವರ್ಣಮಾಲಾ ಸಭಾಂಗಣದಲ್ಲಿ ಕಾಳಜಿ ಕೇಂದ್ರ ತೆರೆಯಲಾಗಿದ್ದು, ಅವರಿಗೆ ನೀಡಬೇಕಾದ ಅಗತ್ಯ ವಸ್ತುಗಳ ಕಿಟ್ ವ್ಯವಸ್ಥೆ ಮಾಡಲಾಗಿದೆ ಎಂದು ತಹಶೀಲ್ದಾರ್ ರಾಮಚಂದ್ರ ಮಾಹಿತಿ ನೀಡಿದರು. -ಈಶಾನ್ವಿ