ಮಡಿಕೇರಿ, ಜು. ೧೭: ಭಾರತೀಯ ವಾಯುಪಡೆಯಿಂದ ಅಗ್ನಿಪತ್ ಯೋಜನೆಯಡಿಯಲ್ಲಿ ಅಗ್ನಿವೀರ್ ವಾಯು ಪ್ರವೇಶ ಆಯ್ಕೆ ಪರೀಕ್ಷೆಗಾಗಿ ಅವಿವಾಹಿತ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅಭ್ಯರ್ಥಿಗಳು ಪಿಯುಸಿ ವಿಜ್ಞಾನ ವಿಭಾಗದಲ್ಲಿ ಕನಿಷ್ಟ ಶೇ. ೫೦ ರಷ್ಟು ಅಂಕಗಳೊAದಿಗೆ ತೇರ್ಗಡೆಯಾಗಿರಬೇಕು. ಅಥವಾ ಡಿಪ್ಲೋಮಾ ವಿಭಾಗದ ಮೆಕ್ಯಾನಿಕಲ್, ಎಲೆಕ್ಟಿçಕಲ್, ಎಲೆಕ್ಟಾçನಿಕ್ಷ್, ಆಟೋಮೊಬೈಲ್, ಕಂಪ್ಯೂಟರ್ ಸೈನ್ಸ್, ಇನ್‌ಸ್ಟುçಮೆಂಟ್ ಟೆಕ್ನಾಲಜಿ, ಇನ್ಪಾರ್ಮೇಶನ್ ಟೆಕ್ನಾಲಜಿಯಲ್ಲಿ ಕನಿಷ್ಟ ಶೇ. ೫೦ ರಷ್ಟು ಅಂಕಗಳೊAದಿಗೆ ತೇರ್ಗಡೆಯಾಗಿರಬೇಕು. ಇಲ್ಲವೇ ೨ ವರ್ಷದ ವೃತ್ತಿಪರ ಕೋರ್ಸ್ಗಳಲ್ಲಿ ಭೌತಶಾಸ್ತç ಮತ್ತು ಗಣಿತ ವಿಷಯಗಳಲ್ಲಿ ವ್ಯಾಸಂಗ ಮಾಡಿ ಕನಿಷ್ಟ ಶೇ. ೫೦ರಷ್ಟು ಅಥವಾ ಯಾವುದೇ ಪಿ.ಯು.ಸಿ ವಿಭಾಗದಲ್ಲಿ ಕನಿಷ್ಟ ಶೇ. ೫೦ ರಷ್ಟು ಅಂಕಗಳೊAದಿಗೆ ತೇರ್ಗಡೆಯಾಗಿರಬೇಕು.
ಅಭ್ಯರ್ಥಿಯು ೩ ಜುಲೈ ೨೦೦೪ ರಿಂದ ೩ ಜನವರಿ ೨೦೦೮ರ ನಡುವೆ ಜನಿಸಿರಬೇಕು. (ಎರಡೂ ದಿನಾಂಕಗಳು ಸೇರಿದಂತೆ) ಅರ್ಜಿ ಶುಲ್ಕ ೫೫೦ ರೂ.ಗಳಾಗಿದೆ. ಆಸಕ್ತ ಅಭ್ಯರ್ಥಿಗಳು ಸಂಪೂರ್ಣ ವಿವರ ಮತ್ತು ಸೂಚನೆಗಳಿಗೆ ವೆಬ್‌ಸೈಟ್ hಣಣಠಿs://ಚಿgಟಿiಠಿಚಿಣhvಚಿಥಿu.ಛಿಜಚಿಛಿ.iಟಿ ನೋಡಬಹುದು. ವೆಬ್‌ಸೈಟ್‌ನಲ್ಲಿ ೮ ಜುಲೈ ೨೦೨೪ರಿಂದ ೨೮ ಜುಲೈ ೨೦೨೪ ರೊಳಗೆ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಮಡಿಕೇರಿ ಇವರನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಿ ಮಾಹಿತಿ ಪಡೆಯಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿ ರೇಖಾ ಗಣಪತಿ ತಿಳಿಸಿದ್ದಾರೆ.