ವೀರಾಜಪೇಟೆ: ವೀರಾಜಪೇಟೆಯಲ್ಲಿ ಕಳೆದ ಒಂದು ವಾರದಿಂದ ಪುನರ್ವಸು ಮಳೆಯ ಅಬ್ಬರ ಜೋರಾಗಿದ್ದು ಎಡೆಬಿಡದೆ ಮಳೆ ಸುರಿಯುತ್ತಿದೆ.

ಗ್ರಾಮೀಣ ಭಾಗದಲ್ಲಿ ವಿದ್ಯುತ್ ಕಂಬಗಳು ಧರೆಗೆ ಉರುಳಿ ಗ್ರಾಮಗಳಲ್ಲಿ ಕತ್ತಲಾವರಿಸಿದೆ.

ಬೇತ್ರಿಯಲ್ಲಿ ಕಾವೇರಿ ನದಿ ನೀರಿನ ಮಟ್ಟ ಏರಿಕೆಯಾಗಿದೆ. ಬೋಯಿಕೇರಿಯಲ್ಲಿ ನೀರು ಸೇತುವೆ ಮೇಲ್ಭಾಗ ತಲುಪುವ ಹಂತದಲ್ಲಿದೆ. ಕೆದಮುಳ್ಳೂರು, ಕದನೂರು, ದೇವಣಗೇರಿ, ಆರ್ಜಿ, ಬೇಟೋಳಿ, ಹೆಗ್ಗಳ, ಚೆಂಬೆಬೆಳ್ಳೂರು, ಬಿಟ್ಟಂಗಾಲ, ಕಾಕೋಟುಪರಂಬು, ಕುಟ್ಟಂದಿ, ಶೆಟ್ಟಿಗೇರಿ, ಕಂಡAಗಾಲ ಸೇರಿದಂತೆ ಇತರೆಡೆಗಳಲ್ಲಿ ಗದ್ದೆಗಳು ಜಲಾವೃತಗೊಂಡಿವೆ.

ನಿರAತರ ಸುರಿಯುತ್ತಿರುವ ಮಳೆಯಿಂದ ಹಾಗೂ ವಿದ್ಯುತ್ ಸಮಸ್ಯೆಯಿಂದ ಗ್ರಾಮೀಣ ಭಾಗಗಳಲ್ಲಿ ಮೊಬೈಲ್ ನೆಟ್‌ವರ್ಕ್ ಸಮಸ್ಯೆ ಉಂಟಾಗಿದೆ. ಚೆಸ್ಕಾಂ ಇಲಾಖೆ ಸಿಬ್ಬಂದಿಗಳು ಹಗಲು, ರಾತ್ರಿಯೆನ್ನದೆ ವಿದ್ಯುತ್ ಸಂಪರ್ಕ ಕಡಿತಗೊಂಡಿರುವುದನ್ನು ಸರಿಪಡಿಸಲು ಹರಸಾಹಸ ಪಡುತ್ತಿದ್ದಾರೆ.

ವಿಪರೀತ ಮಳೆಯಾಗುತ್ತಿರುವ ಹಿನ್ನೆಲೆ ವೀರಾಜಪೇಟೆ ತಾಲೂಕು ತಹಶೀಲ್ದಾರ್ ರಾಮಚಂದ್ರ ಅವರು ಬೇತ್ರಿ ಸೇರಿದಂತೆ ಇತರ ಮಳೆಹಾನಿಯಾಗುವ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.