ಮಡಿಕೇರಿ, ಜು. ೧೮: ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ಮುಖಾಂತರ ಸರ್ಕಾರದ ಮಹತ್ತರ ಯೋಜನೆಯಾದ ಯುವಜನತೆಯ ಉಜ್ವಲ ಭವಿಷ್ಯಕ್ಕಾಗಿ ಕರ್ನಾಟಕ ಸರ್ಕಾರದ ಗ್ಯಾರಂಟಿ ಯೋಜನೆಗೆ ಚಾಲನೆ ನೀಡಲಾಗಿದೆ.
ಯುವನಿಧಿ ಯೋಜನೆಯಡಿ ಸೇವಾ ಸಿಂಧು ಪೋರ್ಟಲ್ನಲ್ಲಿ ನೋಂದಾಯಿಸಿರುವ ಕೊಡಗು ಜಿಲ್ಲೆಗೆ ಸಂಬAಧಿಸಿದ ಅರ್ಹ ಫಲಾನುಭವಿಗಳು ತಮ್ಮ ವಿದ್ಯಾರ್ಹತೆಗೆ ಸಂಬAಧಿಸಿದ ಮೂಲ ಅಂಕಪತ್ರಗಳು, ಆಧಾರ್ ಕಾರ್ಡ್ ಹಾಗೂ ಇತರ ದಾಖಲಾತಿಗಳೊಂದಿಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಗೆ, (ರೂಂ.ನA-೨೨, ಎರಡನೇ ಮಹಡಿ, ಜಿಲ್ಲಾಡಳಿತ ಭವನ ಕಟ್ಟಡ ಕೊಡಗು ಜಿಲ್ಲೆ, ಮಡಿಕೇರಿ) ಇಲ್ಲಿಗೆ ಪರಿಶೀಲನೆಗಾಗಿ ಹಾಜರಾಗಬೇಕು.
ಹಾಗೆಯೇ ಯುವನಿಧಿ ಯೋಜನೆಗೆ ಅರ್ಹರಾದ ಎಲ್ಲಾ ಫಲಾನುಭವಿಗಳು ಪ್ರತಿ ಮಾಹೆಯ ೨೫ ರೊಳಗೆ ಉನ್ನತ ವ್ಯಾಸಂಗ ಮುಂದುವರೆಸದಿರುವ ಕುರಿತು ಹಾಗೂ ಯಾವುದೇ ಉದ್ಯೋಗ ಹೊಂದಿಲ್ಲದಿರುವ ಕುರಿತು ಸ್ವಯಂ ಘೋಷಣೆ ನೀಡಬೇಕಿದೆ ಎಂದು ಜಿಲ್ಲಾ ಉದ್ಯೋಗಾಧಿಕಾರಿ ರೇಖಾ ಗಣಪತಿ ಅವರು ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗೆ ಸಹಾಯವಾಣಿ ಸಂಖ್ಯೆ ೧೮೦೦ ೫೯೯ ೯೯೧೮ ಗೆ ಕರೆ ಮಾಡುವ ಮೂಲಕ ಅಥವಾ ಜಿಲ್ಲಾ ಉದ್ಯೋಗ ವಿನಿಮಯ, ಕಚೇರಿ ಮಡಿಕೇರಿ ಇವರನ್ನು ಕಚೇರಿ ವೇಳೆಯಲ್ಲಿ ೮೨೯೬೦೨೦೮೨೬ / ೮೧೨೩೩೧೨೩೧೯ನ್ನು ಸಂಪರ್ಕಿಸಿ ಮಾಹಿತಿ ಪಡೆಯಬಹುದು ಎಂದು ಜಿಲ್ಲಾ ಉದ್ಯೋಗಾಧಿಕಾರಿ ತಿಳಿಸಿದ್ದಾರೆ.ರಸ್ತೆ ಅಭಿವೃದ್ಧಿಗೆ ಮನವಿ
*ಸಿದ್ದಾಪುರ, ಜು. ೧೮: ನೆಲ್ಲಿಹುದಿಕೇರಿ ಗ್ರಾ.ಪಂ. ವ್ಯಾಪ್ತಿಯ ಒಂದನೇ ವಾರ್ಡ್ನ ರಸ್ತೆಗಳು ಸಂಪೂರ್ಣವಾಗಿ ಹದಗೆಟ್ಟಿದ್ದು, ಶೀಘ್ರ ದುರಸ್ತಿ ಕಾರ್ಯ ಕೈಗೊಳ್ಳಬೇಕೆಂದು ಸ್ಥಳೀಯ ನಲ್ವತ್ತೆಕ್ಕರೆ ಕಾಂಗ್ರೆಸ್ ಕಾರ್ಯಕರ್ತರು ಶಾಸಕ ಡಾ. ಮಂತರ್ ಗೌಡ ಅವರಿಗೆ ಮನವಿ ಮಾಡಿದ್ದಾರೆ.
ಕಳೆದ ಹಲವು ವರ್ಷಗಳಿಂದ ಅಭಿವೃದ್ಧಿ ಕಾಣದ ಈ ರಸ್ತೆಯಲ್ಲಿ ದೊಡ್ಡ ದೊಡ್ಡ ಹೊಂಡ ಗುಂಡಿಗಳಾಗಿದ್ದು, ವಾಹನ ಸಂಚಾರ ಅಸಾಧ್ಯವಾಗಿದೆ. ಪಾದಚಾರಿಗಳ ಸಂಚಾರಕ್ಕೂ ಅಡಚಣೆಯಾಗಿದೆ. ಆಟೋ ರಿಕ್ಷಾಗಳು ಗ್ರಾಮಕ್ಕೆ ಬರಲು ಒಪ್ಪುತ್ತಿಲ್ಲ.
ಶಾಲಾ, ಕಾಲೇಜುಗಳಿಗೆ ತೆರಳುವ ವಿದ್ಯಾರ್ಥಿಗಳಿಗೆ ತೊಂದರೆಯಾಗಿದೆ. ಗರ್ಭಿಣಿಯರು ಹಾಗೂ ರೋಗಿಗಳು ಆಸ್ಪತ್ರೆಗೆ ತೆರಳಲು ಸಾಧ್ಯವಾಗದಷ್ಟು ರಸ್ತೆ ಹದಗೆಟ್ಟಿದೆ. ತಕ್ಷಣ ರಸ್ತೆಗಳ ಅಭಿವೃದ್ಧಿಗೆ ಕ್ರಮ ಕೈಗೊಂಡು ಗ್ರಾಮಸ್ಥರನ್ನು ಸಂಕಷ್ಟದಿAದ ದೂರ ಮಾಡಬೇಕೆಂದು ಕಾಂಗ್ರೆಸ್ ಕಾರ್ಯಕರ್ತರು ಪಕ್ಷದ ಮುಖಂಡ ವಿ.ಪಿ. ಶಶಿಧರ್ ಅವರ ಮೂಲಕ ಶಾಸಕರಿಗೆ ಮನವಿ ಸಲ್ಲಿಸಿದರು.
ಈ ಸಂದರ್ಭ ನಲ್ವತ್ತೆಕ್ಕರೆ ಕಾಂಗ್ರೆಸ್ ಅಧ್ಯಕ್ಷ ಟಿ. ಸಂತೋಷ್, ಕಾರ್ಯದರ್ಶಿ ಅಯ್ಯುಬ್ ಕೆ.ಬಿ. ಹಾಗೂ ಕಾರ್ಯಕರ್ತರುಗಳು ಇದ್ದರು.