ಮಡಿಕೇರಿ, ಜು. ೨೩: ಎಫ್.ಎಂ.ಕೆ.ಎA.ಸಿ ಕಾಲೇಜು, ವಿಶ್ವವಿದ್ಯಾನಿಲಯ, ಮಂಗಳೂರು ಘಟಕ ಕಾಲೇಜುಗಳ ಅತಿಥಿ ಉಪನ್ಯಾಸಕರನ್ನು ಖಾಯಂಗೊಳಿಸುವAತೆ ಕರ್ನಾಟಕ ಉಚ್ಚ ನ್ಯಾಯಾಲಯ ತೀರ್ಪಿನಂತೆ ಖಾಯಂಗೊಳಿಸುವ ಸಂಬAಧ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ್ ಅವರೊಡನೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವೀರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್. ಪೊನ್ನಣ್ಣ ಅವರು ಚರ್ಚೆ ನಡೆಸಿದರು. ಉಚ್ಚ ನ್ಯಾಯಾಲಯದ ಆದೇಶದಂತೆ ಖಾಯಂಗೊಳಿಸಲು ಸಚಿವರಿಗೆ ಮನವಿ ಮಾಡಿದರು. ಈ ಬಗ್ಗೆ ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳಲಾಗುವುದೆಂದು ಸಚಿವರು ಭರವಸೆ ನೀಡಿದರು. ಈ ಸಂದರ್ಭದಲ್ಲಿ ಕೊಡಗು ವಿಶ್ವವಿದ್ಯಾನಿಲಯದ ಕುಲಪತಿ ಅಶೋಕ್ ಆಲೂರು, ಎಫ್‌ಎಂಕೆಎAಸಿ ಕಾಲೇಜಿನ ಪ್ರಾಂಶುಪಾಲ ರಾಘವ್, ಉನ್ನತ ಶಿಕ್ಷಣ ಇಲಾಖೆಯ ಅಧಿಕಾರಿಗಳು, ಉಪನ್ಯಾಸಕರು ಭಾಗವಹಿಸಿದ್ದರು.