ಮಡಿಕೇರಿ, ಜು. ೨೩: ಪ್ರಸಕ್ತ ಸಾಲಿಗೆ ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ರಾಷ್ಟಿçÃಯ ವಿದೇಶಿ ವಿದ್ಯಾರ್ಥಿ ವೇತನಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಪೋಷಕರ ವಾರ್ಷಿಕ ಆದಾರ ರೂ. ೬ ಲಕ್ಷಗಳ ಒಳಗಿದ್ದಲ್ಲಿ ೨ ವರ್ಷಗಳ ಕೋರ್ಸ್ಗೆ ಗರಿಷ್ಠ ರೂ. ೨೦ ಲಕ್ಷ ಹಾಗೂ ರೂ. ೬ ಲಕ್ಷದಿಂದ ರೂ. ೧೫ ಲಕ್ಷಗಳ ಒಳಗಿದ್ದಲ್ಲಿ ೨ ವರ್ಷಗಳ ಕೋರ್ಸ್ಗೆ ರೂ. ೧೦ ಲಕ್ಷಗಳ ಗರಿಷ್ಟ ಮಿತಿಯಲ್ಲಿ ವಿದ್ಯಾರ್ಥಿ ವೇತನ ಪಾವತಿಸಲಾಗುವುದು. hಣಣಠಿs://sevಚಿsiಟಿಜhu.ಞಚಿಡಿಟಿಚಿಣಚಿಞಚಿ.iಟಿ/sevಚಿsiಟಿಜhu/ಆeಠಿಚಿಡಿಣmeಟಿಣ seಡಿviಛಿes ಈ ಆನ್‌ಲೈನ್ ಲಿಂಕ್ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಸೆಪ್ಟೆಂಬರ್ ೩೦ ಕೊನೆಯ ದಿನವಾಗಿದೆ. ಅರ್ಹ ವಿದ್ಯಾರ್ಥಿಗಳು ಕೂಡಲೇ ಇದರ ಸದುಪಯೋಗಪಡಿಸಿಕೊಳ್ಳುವಂತೆ ಕೋರಿದೆ.

ಇಲಾಖಾ ವೆಬ್‌ಸೈಟ್ hಣಣಠಿs://ಜom.ಞಚಿಡಿಟಿಚಿಣಚಿಞಚಿ.gov.iಟಿ ಹಾಗೂ ಹೆಚ್ಚಿನ ಮಾಹಿತಿಗೆ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ, ಮೌಲಾನಾ ಆಜಾದ್ ಭವನ, ಎಫ್‌ಎಂಸಿ ಕಾಲೇಜು ಹತ್ತಿರ, ಮಡಿಕೇರಿ ಇವರನ್ನುಹಾಗೂ ಕಚೇರಿ ದೂ. ೦೮೨೭೨-೨೨೫೫೨೮ ಮತ್ತು ಮಾಹಿತಿ ಕೇಂದ್ರ, ಮಡಿಕೇರಿ ೦೮೨೭೨-೨೨೦೨೧೪ ನ್ನು ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಬಿ.ಎಂ. ದಿವಾಕರ ತಿಳಿಸಿದ್ದಾರೆ.