ಕುಶಾಲನಗರ, ಜು. ೨೨: ಕನಿಷ್ಟ ವೇತನ ಮತ್ತಿತರ ಬೇಡಿಕೆಗಳನ್ನು ಮುಂದಿಟ್ಟುಕೊAಡು ಕರ್ನಾಟಕ ರಾಜ್ಯ ಗ್ರಾಮ ಪಂಚಾಯಿತಿ ನೌಕರರ ಸಂಘ ತಾ.೨೩ ರಂದು (ಇಂದು) ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಅನಿರ್ದಿಷ್ಟಾವಧಿ ಪ್ರತಿಭಟನೆ ಹಮ್ಮಿಕೊಂಡಿದೆ ಎಂದು ಗ್ರಾಮ ಪಂಚಾಯಿತಿ ನೌಕರರ ಸಂಘದ ಕೊಡಗು ಜಿಲ್ಲಾ ಅಧ್ಯಕ್ಷ ಪಿ.ಆರ್. ಭರತ್ ತಿಳಿಸಿದ್ದಾರೆ. ಕುಶಾಲನಗರ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಭರತ್, ಗ್ರಾಮ ಪಂಚಾಯಿತಿಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕರ ವಸೂಲಿಗಾರ, ಡಾಟಾ ಎಂಟ್ರಿ ಆಪರೇಟರ್, ನೀರು ಗಂಟಿಗಳು, ಜವಾನ, ಸ್ವಚ್ಛತಾಗಾರರನ್ನು ಏಕಕಾಲಕ್ಕೆ ಸರ್ಕಾರಿ ನೌಕರರನ್ನಾಗಿ ಘೋಷಿಸಬೇಕು. ಪ್ರಸಕ್ತ ದಿನನಿತ್ಯದ ಬಳಕೆ ವಸ್ತುಗಳ ಮೇಲೆ ಬೆಲೆ ಏರಿಕೆಗೆ ಅನುಗುಣವಾಗಿ ಕನಿಷ್ಟ ವೇತನ ರೂ. ೩೧ ಸಾವಿರ ನಿಗದಿಗೊಳಿಸಬೇಕು ಸೇರಿದಂತೆ ಸುಮಾರು ೧೯ ಬೇಡಿಕೆಗಳನ್ನು ಮುಂದಿಟ್ಟುಕೊAಡು ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು. ಸುದ್ದಿಗೋಷ್ಠಿಯಲ್ಲಿ ಗ್ರಾಮ ಪಂಚಾಯಿತಿ ನೌಕರರ ಸಂಘದ ಪ್ರಮುಖರಾದ ಎಂ.ಎ. ಅಮೀರ್, ರಂಗಸ್ವಾಮಿ, ಹೆಚ್.ಆರ್. ಮಂಜು ಇದ್ದರು.