ಇಡಿ ಅಧಿಕಾರಿಗಳ ವಿರುದ್ಧದ ಎಫ್‌ಐಆರ್‌ಗೆ ಹೈಕೋರ್ಟ್ ತಡೆ

ಬೆಂಗಳೂರು, ಜು ೨೩: ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿನ ಅಕ್ರಮ ಹಣ ವರ್ಗಾವಣೆ ಪ್ರಕರಣದ ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯದ (ಇಡಿ) ಇಬ್ಬರು ಅಧಿಕಾರಿಗಳ ವಿರುದ್ಧ ಕರ್ನಾಟಕ ಪೊಲೀಸರು ದಾಖಲಿಸಿದ್ದ ಎಫ್‌ಐಆರ್‌ಗೆ ಹೈಕೋರ್ಟ್ ಮಂಗಳವಾರ ತಡೆಯಾಜ್ಞೆ ನೀಡಿದೆ. ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಸಚಿವ ನಾಗೇಂದ್ರ ಅವರ ಹೆಸರು ಹೇಳುವಂತೆ ಇಡಿ ಅಧಿಕಾರಿಗಳು ತನ್ನ ಮೇಲೆ ಒತ್ತಡ ಹಾಕುತ್ತಿದ್ದಾರೆಂದು ಆರೋಪಿಸಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಮಾಜಿ ವ್ಯವಸ್ಥಾಪಕ ನಿರ್ದೇಶಕ ಕಲ್ಲೇಶ್ ಬಿ. ದೂರು ನೀಡಿದ್ದರು. ದೂರಿನ ಆಧಾರದ ಮೇಲೆ ಬೆಂಗಳೂರಿನ ವಿಲ್ಸನ್ ಗಾರ್ಡನ್ ಪೊಲೀಸ್ ಠಾಣೆಯಲ್ಲಿ ಇಡಿ ಅಧಿಕಾರಿಗಳಾದ ಕಣ್ಣನ್ ಮತ್ತು ಮಿತ್ತಲ್ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿತ್ತು. ತಮ್ಮ ವಿರುದ್ಧ ಎಫ್‌ಐಆರ್ ದಾಖಲಿಸಿರುವುದನ್ನು ಪ್ರಶ್ನಿಸಿ ಜಾರಿ ನಿರ್ದೇಶನಾಲಯದ ಈ ಇಬ್ಬರು ಅಧಿಕಾರಿಗಳು ಹೈಕೋರ್ಟ್ ಮೊರೆ ಹೋಗಿದ್ದರು. ಹಗರಣಕ್ಕೆ ಸಂಬAಧಿಸಿದAತೆ ನಡೆಯುತ್ತಿರುವ ತನಿಖೆಯನ್ನು ಬುಡಮೇಲು ಮಾಡುವ ಉದ್ದೇಶದಿಂದ ಎಫ್‌ಐಆರ್ ದಾಖಲಿಸಲಾಗಿದೆ. ಯಾವುದೇ ಪ್ರಾಥಮಿಕ ವಿಚಾರಣೆಯಿಲ್ಲದೆ ಕರ್ನಾಟಕ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ಹೀಗಾಗಿ, ಎಫ್‌ಐಆರ್‌ಗೆ ತಡೆ ನೀಡಬೇಕು ಎಂದು ಇಡಿ ಅಧಿಕಾರಿಗಳು ಮನವಿ ಮಾಡಿದ್ದರು. ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್, ಇಡಿ ಅಧಿಕಾರಿಗಳ ವಿರುದ್ಧದ ಎಫ್‌ಐಆರ್‌ಗೆ ತಡೆ ನೀಡಿ ಆದೇಶಿಸಿದೆ.

ಸಮವಸ್ತçದಲ್ಲಿ ರೀಲ್ಸ್ ಮಾಡದಂತೆ ಪೊಲೀಸ್ ಸಿಬ್ಬಂದಿಗೆ ಎಚ್ಚರಿಕೆ

ಬೆಂಗಳೂರು, ಜು. ೨೩: ಪೊಲೀಸ್ ಸಮವಸ್ತçದಲ್ಲಿರುವ ಫೋಟೋ, ರೀಲ್ಸ್ ಮಾಡುವುದು, ಸ್ಟೇಟಸ್ ಅಪ್‌ಡೇಟ್ ಮಾಡುವುದು ಮತ್ತು ಸ್ಟೋರಿಗಳನ್ನು ಹಾಕುವುದು ಸೇರಿದಂತೆ ಇಲಾಖೆಗೆ ಸಂಬAಧಿಸಿದ ವಿಡಿಯೋಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್ ಮಾಡದಂತೆ ಎಲ್ಲಾ ಪೊಲೀಸ್ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಮಂಗಳವಾರ ನಗರ ಪೊಲೀಸ್ ಆಯುಕ್ತ ಬಿ. ದಯಾನಂದ ಅವರು ಎಚ್ಚರಿಕೆ ನೀಡಿದ್ದಾರೆ. ಪೊಲೀಸ್ ಅಧಿಕಾರಿಗಳು ತಮ್ಮ ಕರ್ತವ್ಯವನ್ನು ನಿರ್ವಹಿಸುವಾಗ ಸಮವಸ್ತçದಲ್ಲಿಯೇ ರೀಲ್ಸ್ ಮಾಡಿರುವ ಅನೇಕ ವಿಡಿಯೋಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ಪೊಲೀಸ್ ಆಯುಕ್ತರು ಈ ಕ್ರಮ ತೆಗೆದುಕೊಂಡಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ದಯಾನಂದ ಅವರು, ಸಮವಸ್ತçದಲ್ಲಿರುವಾಗ ತಮ್ಮ ವೈಯಕ್ತಿಕ ಸಾಮಾಜಿಕ ಮಾಧ್ಯಮ ಖಾತೆಗಳಲ್ಲಿ ಸಂಬAಧವಿಲ್ಲದ ರೀಲ್ಸ್ಗಳನ್ನು ಪೋಸ್ಟ್ ಮಾಡದಂತೆ ಪೊಲೀಸ್ ಅಧಿಕಾರಿಗಳಿಗೆ ನಿರ್ದೇಶನ ನೀಡಿರುವುದಾಗಿ ತಿಳಿಸಿದರು. ಪೊಲೀಸ್ ಸಮವಸ್ತçವು ಸಾರ್ವಜನಿಕರ ಬಗೆಗಿನ ಬದ್ಧತೆ, ಸಮರ್ಪಣೆ ಮತ್ತು ಹೊಣೆಗಾರಿಕೆಯ ಸಂಕೇತವಾಗಿದೆ. ಅದನ್ನು ಧರಿಸುವಾಗ ನಾವು ಅತ್ಯಂತ ಕಾಳಜಿ ವಹಿಸಬೇಕು ಮತ್ತು ಗಂಭೀರವಾಗಿರಬೇಕು. ಸಮವಸ್ತçದಲ್ಲಿರುವಾಗ ಅನುಚಿತವಾದ ವಿಷಯವನ್ನು ಪ್ರಸಾರ ಮಾಡುವುದರಿಂದ ಪ್ರತಿಷ್ಠೆಗೆ ಕುಂದು ತರುತ್ತದೆ ಎಂದರು. ಯಾವುದೇ ಪೊಲೀಸ್ ಸಿಬ್ಬಂದಿ ಪೊಲೀಸ್ ಸಮವಸ್ತçದಲ್ಲಿರುವಾಗ ಯಾವುದೇ ರೀತಿಯ ವೀಡಿಯೋಗಳು, ರೀಲ್ಸ್ ಅಥವಾ ಫೋಟೋಗಳನ್ನು ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್ಗಳಲ್ಲಿ ಪೋಸ್ಟ್ ಮಾಡದಂತೆ ಖಚಿತಪಡಿಸಿಕೊಳ್ಳಲು ಎಲ್ಲಾ ನಗರ ಘಟಕದ ಮುಖ್ಯಸ್ಥರು, ಪೊಲೀಸ್ ಉಪ ಆಯುಕ್ತರು (ಡಿಸಿಪಿ) ಮತ್ತು ಸಹಾಯಕ ಪೊಲೀಸ್ ಕಮಿಷನರ್‌ಗಳಿಗೆ (ಎಸಿಪಿ) ಆಯುಕ್ತರು ಸೂಚಿಸಿದ್ದಾರೆ. ಮೇಲಿನ ನಿರ್ದೇಶನಗಳನ್ನು ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ. ರೀಲ್ ಮಾಡುವವರ ವಿರುದ್ಧ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.

ಉಗ್ರರ ಒಳನುಸುಳುವಿಕೆ ಯತ್ನ ವಿಫಲ : ಓರ್ವ ಸೈನಿಕ ಹುತಾತ್ಮ

ಪೂಂಚ್, ಜು. ೨೩: ಕೇಂದ್ರಾಡಳಿತ ಪ್ರದೇಶದ ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯಲ್ಲಿ ಮಂಗಳವಾರ ಉಗ್ರರ ಒಳನುಸುಳುವಿಕೆ ಪ್ರಯತ್ನವನ್ನು ಸೇನೆಯು ವಿಫಲಗೊಳಿಸಿದ್ದರಿಂದ ಓರ್ವ ಯೋಧ ಹುತಾತ್ಮರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಸಂಬAಧ ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಟ್ವೀಟ್ ಮಾಡಿರುವ ವೈಟ್‌ನೈಟ್ ಕಾರ್ಪ್ಸ್, ಬಟ್ಟಲ್ ಸೆಕ್ಟರ್‌ನಲ್ಲಿ ಮುಂಜಾನೆ ೩ ಗಂಟೆ ಸಮಯದಲ್ಲಿ ಉಗ್ರರ ಒಳನುಸುಳುವಿಕೆ ಪ್ರಯತ್ನವನ್ನು ಸೇನಾ ಪಡೆಗಳು ಪರಿಣಾಮಕಾರಿಯಾಗಿ ವಿಫಲಗೊಳಿಸಿದವು. ಭಾರೀ ಗುಂಡಿನ ಚಕಮಕಿ ಸಮಯದಲ್ಲಿ, ಒಬ್ಬ ಧೈರ್ಯಶಾಲಿ ಗಾಯಗೊಂಡಿದ್ದಾರೆ. ಕಾರ್ಯಾಚರಣೆಗಳು ಮುಂದುವರೆದಿದೆ ಎಂದು ಹೇಳಿತ್ತು. ಮೂಲಗಳ ಪ್ರಕಾರ, ಕೃಷ್ಣಗತಿ ಬೆಲ್ಟ್ನ ಬತ್ತಲ್ ಫಾರ್ವರ್ಡ್ ಪ್ರದೇಶದಲ್ಲಿ ಉಗ್ರರನ್ನು ಪರಿಣಾಮಕಾರಿಯಾಗಿ ಹಿಮ್ಮೆಟ್ಟಿಸಲಾಗಿದೆ. ಈ ವೇಳೆ ತೀವ್ರವಾದ ಗುಂಡಿನ ಚಕಮಕಿಯಲ್ಲಿ ಗಾಯಗೊಂಡಿದ್ದ ಲ್ಯಾನ್ಸ್ ನಾಯಕ್ ಸುಭಾಷ್ ಕುಮಾರ್ ಸಾವನ್ನಪ್ಪಿದ್ದಾರೆ. ಮರಣೋತ್ತರ ಪರೀಕ್ಷೆ ನಡೆಸಿ ಯೋಧನ ದೇಹವನ್ನು ಸೇನೆಗೆ ಹಸ್ತಾಂತರಿಸಲಾಗಿದೆ. ಈ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆ ಆರಂಭಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇತ್ತೀಚಿನ ತಿಂಗಳುಗಳಲ್ಲಿ ಜಮ್ಮುವಿನಲ್ಲಿ ಭಯೋತ್ಪಾದಕ ಚಟುವಟಿಕೆಗಳು ಹೆಚ್ಚುತ್ತಿದ್ದು, ಈ ಪ್ರದೇಶದಲ್ಲಿ ಉಗ್ರಗಾಮಿತ್ವದ ಪುನರುಜ್ಜೀವನದ ಬಗ್ಗೆ ಆತಂಕವನ್ನು ಹೆಚ್ಚಿಸಿದೆ.